ಶಿರಾ ಉಪಚುನಾವಣೆ ಫಲಿತಾಂಶ: ಮತಎಣಿಕೆ ಕೇಂದ್ರದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್

ಒಟ್ಟು 14 ಟೇಬಲ್ ಗಳಲ್ಲಿ 24 ಸುತ್ತು ಮತ ಎಣಿಕೆ ನಡೆಯಲಿದ್ದು‌, 330 ಮತಗಟ್ಟೆಗಳ ಫಲಿತಾಂಶ ಹೊರಬೀಳಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಭಾರೀ ಮುಂಜಾಗ್ರತೆ ವಹಿಸಿದ್ದು ಸಾಮಾಜಿಕ ಅಂತರ, ಸ್ಯಾನಿಟೈಸಿಂಗ್, ಥರ್ಮಲ್ ಸ್ಕ್ಯಾನಿಂಗ್ ನಡೆಯಲಿದೆ.

ಬಿಗಿ ಭದ್ರತೆ

ಬಿಗಿ ಭದ್ರತೆ

  • Share this:
ತುಮಕೂರು(ನ.10):  ಶಿರಾ ಉಪಚುನಾವಣೆಯ ಜಿದ್ದಾಜಿದ್ದಿನ ಅಖಾಡದ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಮೂರೂ ಪಕ್ಷಗಳ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ ಇರುವುದರಿಂದ ಇಂದಿನ ಮತ ಎಣಿಕೆ ಇನ್ನಷ್ಟು ಮತ್ತಷ್ಟು ಕುತೂಹಲ ಕೆರಳಿಸಿದೆ. ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಒಟ್ಟು 24 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದ್ದು ಪ್ರತಿ ಸುತ್ತಿನಲ್ಲಿ ತೀವ್ರ ಹಣಾಹಣಿಯಿಂದಾಗಿ ರೋಚಕತೆಯ ಘಟ್ಟ ತಲುಪುವ ಸಾಧ್ಯತೆ ಇದೆ‌‌. ಶಿರಾ ಕ್ಷೇತ್ರದಲ್ಲಿ ಈ ಬಾರಿ ಒಟ್ಟು ಶೇ. 82ರಷ್ಟು ಮತದಾನವಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ  ಮತ ಎಣಿಕೆ ಆರಂಭವಾಗಲಿದೆ.

4821 ಅಂಚೆ ಮತಗಳು ಸೇರಿ ಒಟ್ಟು  ಶೇ.82ರಷ್ಟು ಮತದಾನವಾಗಿದೆ. ಇವಿಎಂ ಮತಯಂತ್ರದಲ್ಲಿ 1 ಲಕ್ಷ  77 ಸಾವಿರದ 645 ಮತದಾರರು ಮತಚಲಾಯಿಸಿದ್ದಾರೆ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮುಂಜಾನೆ 7 ಗಂಟೆಗೆ ಸ್ರ್ಟಾಂಗ್ ರೂಂ ತೆರೆಯಲಿದ್ದು, 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.

RR Nagar and Sira by election result 2020 | ಇಂದು ಆರ್​ಆರ್​ ನಗರ, ಶಿರಾ ಉಪಚುನಾವಣೆ ಫಲಿತಾಂಶ ಪ್ರಕಟ; ಯಾರಿಗೆ ವಿಜಯಮಾಲೆ?

ಇನ್ನು,  ಮತ ಎಣಿಕಾ ಕೇಂದ್ರದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿಲಾಗಿದೆ. ಮೂರು ಸುತ್ತಿನ ಭದ್ರತೆ ನಿಯೋಜಿಸಿದ್ದು, ಸೆಂಟ್ರಲ್ ಆರ್ಮಡ್ ಫೊರ್ಸ್ ಕಾರ್ಯನಿರ್ವಹಿಲಿದೆ. 2 ಕೆ.ಎಸ್.ಆರ್.ಪಿ, ಮೂರು ಡಿವೈಎಸ್ಪಿ, ಸಿಪಿಐ, ಪಿಎಸೈ ಗಳು ಸೇರಿದಂತೆ ಒಟ್ಟು 200 ಕ್ಕೂ ಹೆಚ್ಚು ಪೊಲೀಸರನ್ನ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.

ಒಟ್ಟು 14 ಟೇಬಲ್ ಗಳಲ್ಲಿ 24 ಸುತ್ತು ಮತ ಎಣಿಕೆ ನಡೆಯಲಿದ್ದು‌, 330 ಮತಗಟ್ಟೆಗಳ ಫಲಿತಾಂಶ ಹೊರಬೀಳಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಭಾರೀ ಮುಂಜಾಗ್ರತೆ ವಹಿಸಿದ್ದು ಸಾಮಾಜಿಕ ಅಂತರ, ಸ್ಯಾನಿಟೈಸಿಂಗ್, ಥರ್ಮಲ್ ಸ್ಕ್ಯಾನಿಂಗ್ ನಡೆಯಲಿದೆ.

ಇನ್ನು ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ರವರೆಗೂ ಮತ ಎಣಿಕಾ ಕೇಂದ್ರದ ಸುತ್ತಲೂ 5 ಕಿ.ಮೀ ವ್ಯಾಪ್ತಿ ಹಾಗೂ ಶಿರಾ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ‌.‌
Published by:Latha CG
First published: