• Home
  • »
  • News
  • »
  • state
  • »
  • ಶಿರಾ ಕ್ಷೇತ್ರದಲ್ಲಿ ಮೂರು ಪಕ್ಷಗಳಿಂದ ಅಭ್ಯರ್ಥಿ ಆಯ್ಕೆ ಕಸರತ್ತು; ಎಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಆಕಾಂಕ್ಷಿಗಳ ಸಭೆ

ಶಿರಾ ಕ್ಷೇತ್ರದಲ್ಲಿ ಮೂರು ಪಕ್ಷಗಳಿಂದ ಅಭ್ಯರ್ಥಿ ಆಯ್ಕೆ ಕಸರತ್ತು; ಎಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಆಕಾಂಕ್ಷಿಗಳ ಸಭೆ

ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ

ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ

ಸತ್ಯನಾರಾಯಣ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ಎದುರಾಗಿದೆ. ಈಗಾಗಲೇ ಕಾಂಗ್ರೆಸ್, ಬಿಜೆಪಿ ಭರದ ಸಿದ್ಧತೆ ನಡೆಸುತ್ತಿದೆ. ಸಭೆಯಲ್ಲಿ ಸಹಮತದ ಅಭ್ಯರ್ಥಿ ಬಗ್ಗೆ ಚರ್ಚೆ ನಡೆದಿದೆ.

  • Share this:

ಬೆಂಗಳೂರು(ಸೆಪ್ಟೆಂಬರ್​.11): ಶಿರಾ ಕ್ಷೇತ್ರದ ಉಪಚುನಾವಣೆ ಘೋಷಣೆಗೂ ಮೊದಲೇ ಗರಿಗೆದರಿದ ರಾಜಕೀಯ ಚಟುವಟಿಕೆ, ಮೂರು ಪಕ್ಷದ ನಾಯಕರು ಅಭ್ಯರ್ಥಿಗಳು ಆಯ್ಕೆ ಮಾಡಲು ಯೋಚನೆ ಮಾಡುತ್ತಿದ್ದಾರೆ. ಇತ್ತ ಇಂದು ಜೆಡಿಎಸ್ ಅಭ್ಯರ್ಥಿ ಆಯ್ಕೆ ಸಂಬಂಧಿಸಿದಂತೆ ಶಿರಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಜೆಪಿ ಭವನದಲ್ಲಿ ಸಭೆ ನಡೆಸಿದರು.ಈ ಉಪಚುನಾವಣೆ ನಮಗೆ ಅತ್ಯಂತ ದೊಡ್ಡ ಮಟ್ಟದ ಸತ್ವ ಪರೀಕ್ಷೆ, ನಾನು ಎರಡು ಬಾರಿ ಸಿಎಂ ಆಗಿದ್ದೆ, ಎಂದೂ ಪಾಪದ ಹಣವನ್ನ ಮಾಡಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ಪಕ್ಷದಲ್ಲಿ ಯಾವುದೇ ಸಮಸ್ಯೆ ಇದ್ದರೂ ಮೈಮೇಲೆ ಎಳೆದುಕೊಂಡು ಕೆಲಸ ಮಾಡಿದ್ದೇನೆ. ಶಿರಾ ಕ್ಷೇತ್ರದಲ್ಲಿ ಹಣದ ಮೇಲೆ ಎಂದೂ ಚುನಾವಣೆ ನಡೆದಿಲ್ಲ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೇಲಿನ ಅಭಿಮಾನದಿಂದ ಕೆಲಸ ಮಾಡುತ್ತಿದ್ದೀರಿ ಇಂದು ನಮಗೆ ನಿಜಕ್ಕೂ ಅಗ್ನಿ ಪರೀಕ್ಷೆ ಎದುರಾಗಿದೆ.


ಈಗಾಗಲೇ ಬಿಜೆಪಿಯಿಂದ ನಾಯಕರ ದಂಡೇ ಅಲ್ಲಿ ಬೀಡು ಬಿಟ್ಟಿದೆ ಚುನಾವಣೆ ಎದುರಿಸುವುದಕ್ಕಾಗಿ ಹಲವು ಘೋಷಣೆ ಮಾಡುತ್ತಿದ್ದಾರೆ. ದೇವಾಲಯಗಳಿಗೆ ಹಣ ಕೊಡುತ್ತಿದ್ದಾರೆ ನಮ್ಮ ಜನರು ಬಿಜೆಪಿಯ ಆಮಿಷಕ್ಕೆ ಒಳಗಾಗಬಾರದು ಎಂದರು.


ನನಗೆ ಎರಡು ಬಾರಿ ಹೃದಯ ಚಿಕಿತ್ಸೆ ಆಗಿದೆ. ಈಗ ನನಗೆ ಹೊರಗೆ ಹೋಗಲು ವೈದ್ಯರು ಬಿಡುತ್ತಿಲ್ಲ. ಹೊರಗೆ ಹೋಗಲೇಬೇಡಿ ಎಂದು ಹೇಳಿದ್ದಾರೆ. ಹಾಗಾಗಿ ನಾನು ಎಲ್ಲೂ ಹೋಗಲು ಆಗುತ್ತಿಲ್ಲ, ಸದ್ಯ ಟಿಕೆಟ್ ಘೋಷಣೆ ಮಾಡಲು ಇಂದು ಸಭೆ ಕರೆದಿಲ್ಲ. ನಿಮ್ಮನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಭೆ ಕರೆದಿದ್ದೇನೆ. ಈ ಚುನಾವಣೆಯನ್ನ ಗೆಲ್ಲಲೇಬೇಕು. ತಾಯಿ, ಮಕ್ಕಳ ರೀತಿ ಒಂದೇ ಧ್ವನಿಯಾಗಿ ಕೆಲಸ ಮಾಡಬೇಕು. ಆಗ ಮಾತ್ರ ನಮ್ಮ ಗೆಲುವು ಸಾಧ್ಯ ಎಂದು ಕುಮಾರಸ್ವಾಮಿ ತಿಳಿಸಿದರು.


ಇದನ್ನೂ ಓದಿ : ಖಾಸಗಿ ಶಿಕ್ಷಕರಿಗೆ ಸಹಾಯಕ್ಕಾಗಿ ಸರ್ಕಾರದ ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್


ಸತ್ಯನಾರಾಯಣ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಉಪ ಚುನಾವಣೆ ಎದುರಾಗಿದೆ. ಈಗಾಗಲೇ ಕಾಂಗ್ರೆಸ್, ಬಿಜೆಪಿ ಭರದ ಸಿದ್ಧತೆ ನಡೆಸುತ್ತಿದೆ. ಸಭೆಯಲ್ಲಿ ಸಹಮತದ ಅಭ್ಯರ್ಥಿ ಬಗ್ಗೆ ಚರ್ಚೆ ನಡೆದಿದೆ. ನಮ್ಮ ವರಿಷ್ಠರ ಜೊತೆ ಚರ್ಚೆ ನಡೆಸಿ ಅಭ್ಯರ್ಥಿಯನ್ನ ಘೋಷಿಸುತ್ತೇವೆ. ಹಿಂದಿನ ಕೆಲ ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಈ ಬಾರಿ ಸರಿಪಡಿಸಿಕೊಂಡು ಚುನಾವಣೆ ಎದುರಿಸುತ್ತೇವೆ ಎಂದರು.


ಇಂದಿನ  ಸಭೆಯಲ್ಲಿ ಸತ್ಯ ನಾರಾಯಣ ಪುತ್ರ ಸತ್ಯ ಪ್ರಕಾಶ್ ಸೇರಿದಂತೆ ಹಲ ಟಿಕೆಟ್ ಆಕಾಂಕ್ಷಿಗಳು ಭಾಗಿಯಾಗಿದ್ದರು, ಜೊತೆಗೆ ನೂರಕ್ಕೂ ಹೆಚ್ಚು ಶಿರಾ ಕ್ಷೇತ್ರದ ಮುಖಂಡರು ಇದ್ದರು, ಎಲ್ಲಾ ಪ್ರಮುಖರ ಜೊತೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಚರ್ಚೆ ನಡೆಸಿದರು.

Published by:G Hareeshkumar
First published: