HOME » NEWS » State » SIRA BYPOLLS KARNATAKA CM BS YEDIYURAPPA CAMPAIGNING FOR SIRA BY ELECTION BJP CANDIDATE TODAY SCT

ಶಿರಾದಲ್ಲಿ ಇಂದು ಸಿಎಂ ಯಡಿಯೂರಪ್ಪ ಮತಯಾಚನೆ; ಮದಲೂರಿಂದಲೇ ಪ್ರಚಾರ ಆರಂಭಿಸಲು ಕಾರಣವೇನು?

Sira By-Election: ಶಿರಾದಲ್ಲಿ ಇಂದಿನ ಚುನಾವಣಾ ಪ್ರಚಾರದ ವೇಳೆ ಕೆರೆಗೆ ನೀರು ಹರಿಸುವ ಬಗ್ಗೆ ಸಿಎಂ ಯಡಿಯೂರಪ್ಪ ಘೋಷಣೆ ಮಾಡುವ ಸಾಧ್ಯತೆಯಿದೆ. ಅದಕ್ಕಾಗಿಯೇ ಅವರು ಮದಲೂರಿಂದ ಪ್ರಚಾರಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

news18-kannada
Updated:October 30, 2020, 8:29 AM IST
ಶಿರಾದಲ್ಲಿ ಇಂದು ಸಿಎಂ ಯಡಿಯೂರಪ್ಪ ಮತಯಾಚನೆ; ಮದಲೂರಿಂದಲೇ ಪ್ರಚಾರ ಆರಂಭಿಸಲು ಕಾರಣವೇನು?
ಸಿಎಂ ಬಿಎಸ್​ ಯಡಿಯೂರಪ್ಪ
  • Share this:
ಬೆಂಗಳೂರು (ಅ. 30): ರಾಜ್ಯದ ಆರ್​ಆರ್​ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನ. 3ರಂದು ಉಪಚುನಾವಣೆ ನಡೆಯಲಿದೆ. ಇಂದಿನಿಂದ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿಯಲಿರುವ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಇಂದು ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್​ ಗೌಡ ಅವರ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಇಂದು ಶಿರಾದ ಮದಲೂರಿನಿಂದ ಪ್ರಚಾರ ಆರಂಭಿಸಲು ಕಾರಣವೇನೆಂಬ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಚುನಾವಣಾ ಪ್ರಚಾರದ ವೇಳೆ ಮದಲೂರಿನ ಬಹುದಿನಗಳ ಬೇಡಿಕೆ ಈಡೇರಿಸುವ ಬಗ್ಗೆ ಸಿಎಂ ಇಂದು ಘೋಷಣೆ ಮಾಡುತ್ತಾರಾ? ಎಂಬ ಕುತೂಹಲವೂ ಮೂಡಿದೆ. ಮದಲೂರು ಕೆರೆಗೆ ನೀರು ತುಂಬಿಸುವ ಬಗ್ಗೆ ಇಂದು ಸಿಎಂ ಯಡಿಯೂರಪ್ಪ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಶಿರಾದಲ್ಲಿ ಇಂದಿನ ಪ್ರಚಾರದ ವೇಳೆ ಕೆರೆಗೆ ನೀರು ಹರಿಸುವ ಬಗ್ಗೆ ಸಿಎಂ ಯಡಿಯೂರಪ್ಪ ಘೋಷಣೆ ಮಾಡುವ ಸಾಧ್ಯತೆಯಿದೆ. ಅದಕ್ಕಾಗಿಯೇ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಮದಲೂರಿಂದ ಪ್ರಚಾರಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಕೆರೆಗೆ ನೀರು ಹರಿಸುತ್ತೇವೆ ಎಂದು ಘೋಷಿಸುವ ಮೂಲಕ ಶಿರಾದ ಮತದಾರರನ್ನು ಬಿಜೆಪಿ ಅಭ್ಯರ್ಥಿಯತ್ತ ಸೆಳೆಯಲು ತಂತ್ರ ರೂಪಿಸಲಾಗುತ್ತಿದೆ ಎನ್ನಲಾಗುತ್ತಿದೆ.

ಒಂದುವೇಳೆ ಮದಲೂರು ಕೆರೆಗೆ ನೀರು ತುಂಬಿಸಿದರೆ 40ರಿಂದ 50 ಹಳ್ಳಿಗಳಿಗೆ ಅನುಕೂಲವಾಗಲಿದೆ. ಆ ಭಾಗದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಇದು ಮದಲೂರು ಭಾಗದ ಜನರ ಬಹಳ ದಿನಗಳ ಬೇಡಿಕೆಯಾಗಿದೆ. ಹೀಗಾಗಿ ಬೇಡಿಕೆ ಈಡೇರಿಸುವ ಬಗ್ಗೆ ಇಂದು ಘೋಷಣೆ ಮಾಡುವ ಸಾಧ್ಯತೆಯಿದೆ. ಕೆರೆಗೆ ನೀರು ಹರಿಸುವ ಘೋಷಣೆ ಮೂಲಕ ಮತದಾರರನ್ನು ಸೆಳೆಯಲು ಸಿಎಂ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇಂದು ಮಧ್ಯಾಹ್ನದೊಳಗೆ ಖಚಿತತೆ ಸಿಗಲಿದೆ.

ಇದನ್ನೂ ಓದಿ: ವಿದೇಶದಿಂದ ಡ್ರಗ್ಸ್​ ತರಿಸಿ ಮಾರುತ್ತಿದ್ದ ಬೆಂಗಳೂರಿನ ಸಾಫ್ಟ್​ವೇರ್​ ಇಂಜಿನಿಯರ್ ಬಂಧನ

ಆರ್​ಆರ್​ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಘೋಷಿಸಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೊನೆಗೂ ಚುನಾವಣಾ ಅಖಾಡಕ್ಕೆ ಇಳಿಯುತ್ತಿದ್ದಾರೆ. ಇಂದು ಶಿರಾದಲ್ಲಿ ಸಿಎಂ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ. ನಾಳೆ ಆರ್​ಆರ್​ ನಗರದಲ್ಲಿ ಸಿಎಂ ಪ್ರಚಾರ ನಡೆಸಲಿದ್ದಾರೆ. ಇಂದು ಶಿರಾದ ಮದಲೂರು, ಶಿರಾ ನಗರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್​ ಗೌಡ ಪರ ಸಿಎಂ ಮತಯಾಚನೆ ಮಾಡಲಿದ್ದಾರೆ. ನಾಳೆ ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಬಿಎಸ್​ ಯಡಿಯೂರಪ್ಪ ಪ್ರಚಾರ ಕೈಗೊಳ್ಳಲಿದ್ದಾರೆ.

ಜೆಡಿಎಸ್​ ಶಾಸಕ ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ನ. 3ರಂದು ಉಪಚುನಾವಣೆ ನಡೆಯಲಿದೆ. ಶಿರಾ ಕ್ಷೇತ್ರದಿಂದ ಸತ್ಯನಾರಾಯಣ ಅವರ ಹೆಂಡತಿ ಅಮ್ಮಾಜಮ್ಮ ಅವರನ್ನು ಜೆಡಿಎಸ್​ ಕಣಕ್ಕಿಳಿಸಲಿದೆ. ಶಿರಾ ಬಿಜೆಪಿ ಅಭ್ಯರ್ಥಿಯಾಗಿ ಡಾ. ರಾಜೇಶ್ ಗೌಡ ಸ್ಪರ್ಧಿಸಲಿದ್ದಾರೆ. ಶಿರಾದ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಬಿ ಜಯಚಂದ್ರ ಸ್ಪರ್ಧಿಸಲಿದ್ದಾರೆ.
Published by: Sushma Chakre
First published: October 30, 2020, 8:26 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories