Ramesh Jarkiholi Sex CD Case| ರಮೇಶ್ ಜಾರಕಿಹೊಳಿ ಸೆಕ್ಸ್ ಟೇಪ್ ಪ್ರಕರಣ; ಸಂತ್ರಸ್ತ ಯುವತಿ ಪರ ಖ್ಯಾತ ವಕೀಲೆ ಇಂದಿರಾ ಜೈಸಿಂಗ್ ಹಾಜರ್!
ಸೆಕ್ಷನ್ 377 ರ ಅಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ, ಆ ಸಿಡಿಯಲ್ಲಿರುವುದು ತಾನೇ ಎಂದು ಸ್ವತಃ ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದರೂ ಸಹ ಎಸ್ಐಟಿ ಅಧಿಕಾರಗಳು ಈವರೆಗೆ ಅವರನ್ನು ಬಂಧಿಸಿಲ್ಲ.
ಬೆಂಗಳೂರು (ಜೂನ್ 21); ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ ಇಡೀ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಅದರ ಬೆನ್ನಿಗೆ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ, ಪ್ರಕರಣವನ್ನು ಎಸ್ಐಟಿ (SIT) ತನಿಖೆಗೂ ವಹಿಸಲಾಗಿತ್ತು. ಆದರೆ, ಸೆಕ್ಷನ್ 377 ರ ಅಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ, ಆ ಸಿಡಿಯಲ್ಲಿರುವುದು ತಾನೇ ಎಂದು ಸ್ವತಃ ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದರೂ ಸಹ ಎಸ್ಐಟಿ ಅಧಿಕಾರಗಳು ಈವರೆಗೆ ಅವರನ್ನು ಬಂಧಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತು ಎಸ್ಐಟಿ ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆಯೇ? ಎಂಬ ಪ್ರಶ್ನೆ ಉದ್ಭವಿಸುತ್ತಿದೆ. ಈ ನಡುವೆ ಪ್ರಕರಣಕ್ಕೆ ಎಂಟ್ರಿ ಕೊಟ್ಟಿರುವ ಲಿಂಗ ಸಮಾನತೆ, ಮಾನವ ಹಕ್ಕುಗಳಿಗಾಗಿ ಹೋರಾಟ ಮಾಡುವಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಿರುವ ಪದ್ಮಶ್ರೀ ಪುರಸ್ಕೃತ ವಕೀಲೆ ಇಂದಿರಾ ಜೈಸಿಂಗ್ ತಾನು ಸಂತ್ರಸ್ತ ಯುವತಿಯ ಪರ ಕೋರ್ಟ್ನಲ್ಲಿ ಹಾಜರಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, "ಎಸ್ಐಟಿ ಈ ಪ್ರಕರಣವನ್ನು ಮುಚ್ಚಿಹಾಕಲು ನಾನು ಬಿಡುವುದಿಲ್ಲ" ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಎಸ್ಐಟಿ ತನಿಖೆ ನಿರ್ಣಾಯಕ ಹಂತ ತಲುಪಿರುವ ಬೆನ್ನಲ್ಲೇ, ಜೂನ್ 23 ರಂದು ಪ್ರಕರಣ ಯಾವ ಸ್ವರೂಪ ಪಡೆಯಲಿದೆ ಎಂಬುದು ಕುತೂಹಲ ಕೆರಳಿಸಿದೆ. ಇಂದಿರಾ ಅವರು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ವಕಾಲತ್ತು ವಹಿಸುತ್ತಿರುವುದು ಪೊಲೀಸ್ ವಲಯದಲ್ಲಿ ಮತ್ತು ರಾಜಕೀಯ ವಲಯದಲ್ಲಿ ಚರ್ಚೆಗೆ ನಾಂದಿ ಹಾಡಿದೆ.
"ವಿಶೇಷ ತನಿಖಾ ತಂಡ(SIT) ಸ್ವತಂತ್ರವಾಗಿ ತನಿಖೆ ನಡೆಸುತ್ತಿಲ್ಲ. ಹೀಗಾಗಿ, ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು. ಸಿಬಿಐ ತನಿಖೆ ನಡೆಸಬೇಕು ಎಂದು ಸಂತ್ರಸ್ತ ಯುವತಿ ಈ ಹಿಂದೆ ಅರ್ಜಿ ಸಲ್ಲಿಸಿದ್ದರು. ಏಕ ಸದಸ್ಯ ಪೀಠದ ಮುಂದೆ ಸಲ್ಲಿಸಿರುವ ಎಲ್ಲಾ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಬೇಕು" ಎಂದು ಅರ್ಜಿದಾರರ ಪರ ವಕೀಲರಾದ ಇಂದಿರಾ ಜೈಸಿಂಗ್ ಕೋರಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಸಂಚನಲ ಮೂಡಿಸಿ, ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಕಾರಣವಾಗಿದ್ದ ಸಿಡಿ ಪ್ರಕರಣ ಇಂದಿರಾ ಜೈಸಿಂಗ್ ಆಗಮನದಿಂದ ಮತ್ತೆ ಹೊಸ ಆರಂಭ ಪಡೆಯಲಿದೆ ಎಂದು ಹೇಳಲಾಗುತ್ತಿದೆ.
ಲಿಂಗ ಸಮಾನತೆ ಹಾಗೂ ಮಾನವ ಹಕ್ಕುಗಳ ಹೋರಾಟ ವಿಚಾರವಾಗಿ ಇಂದಿರಾ ಜೈಸಿಂಗ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಇವರ ಸೇವೆಯನ್ನು ಗುರುತಿಸಿ 2005 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 2018 ರಲ್ಲಿ ಫಾರ್ಚ್ಯೂನ್ ಮ್ಯಾಗಝೀನ್ ಪ್ರಕಟಿಸಿದ ವಿಶ್ವದ 50 ಪ್ರಭಾವಿ ನಾಯಕರ ಪಟ್ಟಿಯಲ್ಲಿ ಇಂದಿರಾ ಕೂಡ ಒಬ್ಬರು.
ಮಾನವ ಹಕ್ಕುಗಳ ರಕ್ಷಣೆ ವಿಚಾರದಲ್ಲಿ ಇಂದಿರಾ ಜೈಸಿಂಗ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ. ಅಡಿಷನಲ್ ಸಾಲಿಸಟರ್ ಜನರಲ್ ಹುದ್ದೆ ಅಲಂಕರಿಸಿದ ಪ್ರಥಮ ಮಹಿಳಾ ವಕೀಲರು ಎಂಬ ಕೀರ್ತಿ ಕೂಡ ಇವರಿಗೆ ಇದೆ.
ಇಂದಿರಾ ಜೈಸಿಂಗ್, 1940 ಜೂನ್ 3 ಮುಂಬೈನಲ್ಲಿ ಜನಿಸಿದ್ದರು. ಮುಂಬೈನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ 1962 ರಲ್ಲಿ ಪದವಿ ಮುಗಿಸಿದ್ದರು. ಮುಂಬಯಿ ವಿಶ್ವ ವಿದ್ಯಾಲಯದಲ್ಲಿ ಕಾನೂನು ಪದವಿ ಪೂರ್ಣಗೊಳಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ನಲ್ಲಿ ಇವರ ಎಂಟ್ರಿ ಹಲವು ಕುತೂಹಲಕ್ಕೆ ಕಾರಣವಾಗಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ