ನಮ್ಮ ಬಳಿಯೂ ಬಿಜೆಪಿಯವರು ಸಂಪರ್ಕದಲ್ಲಿದ್ದಾರೆ; ಮಾಜಿ ಸಿಎಂ ಸಿದ್ದರಾಮಯ್ಯ

ಮಹಾರಾಷ್ಟ್ರದಲ್ಲಿ ಕಳ್ಳರ ರೀತಿ ಬಿಜೆಪಿಯವರು ಅಧಿಕಾರಕ್ಕೆ ಬಂದಿದ್ದಾರೆ. ರಾತ್ರೋರಾತ್ರಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಎನ್​ಸಿಪಿ ನಾಯಕ ಅಜಿತ್ ಪವಾರ್ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅದಕ್ಕೆ ಬಿಜೆಪಿಗೆ ಸೇರಿಕೊಂಡಿದ್ದಾರೆ-ಸಿದ್ದರಾಮಯ್ಯ

Latha CG | news18-kannada
Updated:November 26, 2019, 12:57 PM IST
ನಮ್ಮ ಬಳಿಯೂ ಬಿಜೆಪಿಯವರು ಸಂಪರ್ಕದಲ್ಲಿದ್ದಾರೆ; ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಸಿಎಂ ಸಿದ್ದರಾಮಯ್ಯ
  • Share this:
ಹುಬ್ಬಳ್ಳಿ(ನ.26): ನಮ್ಮ ಬಳಿಯೂ ಬಿಜೆಪಿಯವರು ಸಂಪರ್ಕದಲ್ಲಿದ್ದಾರೆ. ಹಾಗಂತ ನಾವು ಯಾವತ್ತಾದರೂ ಅವರನ್ನು ಪಕ್ಷಕ್ಕೆ ಕರೆದಿದ್ದೇವಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಹೋಗುವವರು ಈಗಾಗಲೇ ಬಿಜೆಪಿಗೆ ಹೋಗಿದ್ದಾರೆ. ಮತ್ತೆ ಯಾವ ಶಾಸಕರೂ ಬಿಜೆಪಿಗೆ ಹೋಗಲ್ಲ ಎಂದು ಸ್ಪಷ್ಟಪಡಿಸಿದರು. 

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಇದೇ ವೇಳೆ ಬಿಜೆಪಿ ನಾಯಕ ವಿರುದ್ಧ ಕಿಡಿಕಾರಿದರು. ಬಿಜೆಪಿಯಿಂದ ಮತ್ತೆ ಆಪರೇಷನ್​ ಕಮಲ ಮಾಡುವವರು ನಂಬಿಕೆ ಇಲ್ಲದವರು. ಯಾರೇ ಆಗಲಿ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರಬೇಕು.  ಆದರೆ ಬಿಜೆಪಿಗೆ ಹೀಗೆ ಅಧಿಕಾರಕ್ಕೆ ಬರಬೇಕೆಂದಿಲ್ಲ. ಬಿಜೆಪಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದು ಟೀಕಿಸಿದರು.

ಹುಳಿಮಾವು ಕೆರೆ ಪ್ರದೇಶಕ್ಕೆ ಸಿಎಂ ಬಿಎಸ್​ವೈ ಭೇಟಿ; ಇಂದು ಸಂಜೆಯೊಳಗೆ ಸಂತ್ರಸ್ತರ ಖಾತೆಗೆ 50 ಸಾವಿರ ಜಮಾ

ಮಹಾರಾಷ್ಟ್ರ ಬಿಜೆಪಿ ಕುರಿತು ತೀವ್ರ ವಾಗ್ದಾಳಿ ನಡೆಸಿದ ಅವರು, ಮಹಾರಾಷ್ಟ್ರದಲ್ಲಿ ಕಳ್ಳರ ರೀತಿ ಬಿಜೆಪಿಯವರು ಅಧಿಕಾರಕ್ಕೆ ಬಂದಿದ್ದಾರೆ. ರಾತ್ರೋರಾತ್ರಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಎನ್​ಸಿಪಿ ನಾಯಕ ಅಜಿತ್ ಪವಾರ್ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅದಕ್ಕೆ ಬಿಜೆಪಿಗೆ ಸೇರಿಕೊಂಡಿದ್ದಾರೆ. ಅವರ ಮೇಲಿನ ಎಲ್ಲಾ ಪ್ರಕರಣಗಳನ್ನು ವಜಾಗೊಳಿಸಿಕೊಳ್ಳಲಿಕ್ಕೆ ಬಿಜೆಪಿಗೆ ಹೋಗಿದ್ದಾರೆ ಎಂದು ಟೀಕೆ ಮಾಡಿದರು.

First published: November 26, 2019, 12:57 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading