ನವೆಂಬರ್‌ 17ರಿಂದ ಪದವಿ, ಇಂಜಿನಿಯರಿಂಗ್​ ಕಾಲೇಜುಗಳ ಆರಂಭ; ಎಸ್‌ಒಪಿ ಬಿಡುಗಡೆ ಮಾಡಿದ ಡಿಸಿಎಂ

ಎಸ್‌ಒಪಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಸೂಚನೆಗಳಿದ್ದು, ಅವುಗಳ ಪ್ರಕಾರವೇ ತರಗತಿಗಳು ನಡೆಯುತ್ತವೆ. ಹಾಗೆಯೇ, ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೂ ನಿಗದಿತ ಸೂಚನೆಗಳಿವೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
ಬೆಂಗಳೂರು (ನ.9): ಕೋವಿಡ್‌ ಸಂಕಷ್ಟದ  ಹಿನ್ನೆಲೆಯಲ್ಲಿ ಸ್ಥಗಿತವಾಗಿರುವ ಪದವಿ, ಇಂಜಿನಿಯರಿಂಗ್​‌ ಹಾಗೂ ಡಿಪ್ಲೊಮೋ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್‌ 17ರಿಂದ ಆರಂಭಿಸಲಾಗುವುದು. ತರಗತಿಗಳನ್ನು ನಡೆಸುವ ಕುರಿತು ಯುಜಿಸಿ ಮಾರ್ಗಸೂಚಿಯಂತೆ ಉನ್ನತ ಶಿಕ್ಷಣ ಇಲಾಖೆ ಪ್ರಮಾಣಿತ ಕಾರ್ಯಚರಣಾ ವಿಧಾನ (ಎಸ್​ಒಪಿ) ಬಿಡುಗಡೆ ಮಾಡಿದೆ. ಈ ಹಿನ್ನಲೆ  ಆಫ್‌ಲೈನ್‌ ತರಗತಿಗಳ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.  ಎಸ್‌ಒಪಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಸೂಚನೆಗಳಿದ್ದು, ಅವುಗಳ ಪ್ರಕಾರವೇ ತರಗತಿಗಳು ನಡೆಯುತ್ತವೆ. ಹಾಗೆಯೇ, ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೂ ನಿಗದಿತ ಸೂಚನೆಗಳಿವೆ ಎಂದು ಅವರು ತಿಳಿಸಿದರು. ಸ್ನಾತಕೋತ್ತರ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನೀಡಿರುವ  ಮಾರ್ಗಸೂಚಿಗಳು ಕೆಳಗಿನಂತಿವೆ

ಆಯ್ಕೆ 1. ಭೌತಿಕ ತರಗತಿಗಳಿಗೆ ಹಾಜರಾಗುವುದು

 • ಭೌತಿಕ ತರಗತಿಗಳನ್ನು ನವೆಂಬರ್‌ 17ರಿಂದ ಪ್ರಾರಂಭಿಸುವುದು. ಭೌತಿಕವಾಗಿ ಕಾಲೇಜಿಗೆ ಬಂದು ತರಗತಿಗಳಿಗೆ ಹಾಜರಾಗಲು ಸಿದ್ಧವಿರುವ ವಿದ್ಯಾರ್ಥಿಗಳಿಗೆ ಅವರ ಪೋಷಕರಿಂದ ನಿಗದಿತ ನಮೂನೆಯಲ್ಲಿ ಸಹಿ ಮಾಡಿದ ಒಪ್ಪಿಗೆ ಪತ್ರ ಪಡೆಯುವುದು.

 • ಭೌತಿಕ ತರಗತಿಗಳನ್ನು ನಡೆಸುವಾಗ  ದೈಹಿಕ ಅಂತರವನ್ನು ಕಾಪಾಡಿಕೊಂಡು ಸುರಕ್ಷಿತವಾಗಿ ತರಗತಿಗಳನ್ನು ನಡೆಸಲು ಅವಶ್ಯವಿರುವಂತೆ ತರಗತಿ ವೇಳಾಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ಧಪಡಿಸಿಕೊಳ್ಳುವುದು.

 •  ಬೋಧನಾ, ಪ್ರಯೋಗಾಲಯ ಮತ್ತು ಪ್ರಾಜೆಕ್ಟ್ ತರಗತಿಗಳನ್ನು ಅವಶ್ಯಕವಿದ್ದಲ್ಲಿ ಪಾಳಿ ವ್ಯವಸ್ಥೆಯ ಮೇರೆಗೆ ನಡೆಸುವುದು.


ಆಯ್ಕೆ-2: ಆನ್‌ಲೈನ್ ತರಗತಿಗಳ ಮೂಲಕ ಅಭ್ಯಾಸ ಮಾಡುವುದು:

 •  ಭೌತಿಕ ತರಗತಿಗಳಿಗೆ ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕವೇ ತರಗತಿಗಳನ್ನು ನಡೆಸುವುದು. ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಬಯಸಿದ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಬಗ್ಗೆ ಇರುವ ಅನುಮಾನ ಅಥವಾ ಸಮಸ್ಯೆಗಳನ್ನು ನಿವಾರಿಸುವ ಸಂಬಂಧ ಪ್ರತಿ ದಿನವು ಭೌತಿಕ ಸಂಪರ್ಕ ತರಗತಿಗಳನ್ನು ನಡೆಸುವುದು.

 •  ಸಂಪರ್ಕ ತರಗತಿಗಳನ್ನು ನಡೆಸುವಾಗ ಮಾರ್ಗಸೂಚಿಗಳ ಪ್ರಕಾರ ದೈಹಿಕ ಅಂತರವನ್ನು ಕಾಪಾಡಿಕೊಂಡು ತರಗತಿ ನಡೆಸುವುದು

 • ಎಲ್ಲಾ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಮುಂದಿನ ಕನಿಷ್ಠ ಒಂದು ತಿಂಗಳ  ಅಧ್ಯಯನ  ಸಾಮಗ್ರಿಗಳನ್ನು ಪ್ರತಿ  ತರಗತಿಗೆ ಸಂಬಂಧಿಸಿದಂತೆ ತಯಾರಿಸಿ ವಿದ್ಯಾರ್ಥಿಗಳಿಗೆ ಟೆಲಿಗ್ರಾಂ/ವಾಟ್ಸಾಪ್/ಇ-ಮೇಲ್ ಮೂಲಕ ಕಡ್ಡಾಯವಾಗಿ ನೀಡುವುದು. ಅಧ್ಯಯನ ಸಾಮಗ್ರಿಗಳು Video Lectures, PowerPoint Presentations, E-Notes, E-Books, Audio Books ಮತ್ತು Practice Questions ಇತ್ಯಾದಿಗಳ ರೂಪದಲ್ಲಿ ಇರತಕ್ಕದ್ದು. ಸದರಿ ಅಧ್ಯಯನ ಸಾಮಗ್ರಿಗಳನ್ನು ಕಾಲೇಜಿನ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಅಪ್‌ಲೋಡ್‌ ಮಾಡತಕ್ಕದ್ದು.


ಸ್ನಾತಕೋತ್ತರ, ಅಂತಿಮ ವರ್ಷ ಹೊರತುಪಡಿಸಿ ಇತರೆ ವಿದ್ಯಾರ್ಥಿಗಳಿಗೆ:

 • ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸುವುದು. ಈ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಬಗ್ಗೆ ಇರುವ ಅನುಮಾನ ಅಥವಾ ಸಮಸ್ಯೆಗಳನ್ನು ನಿವಾರಿಸುವ ಸಂಬಂಧ ಪ್ರತಿದಿನವೂ ಭೌತಿಕ ಸಂಪರ್ಕ ತರಗತಿಗಳನ್ನು  ನಡೆಸುವುದು.

 • ಸಂಪರ್ಕ ತರಗತಿಗಳನ್ನು ನಡೆಸುವಾಗ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಒಟ್ಟು ತರಗತಿ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಇಲಾಖೆಯಿಂದ ಹೊರಡಿಸಲಾಗಿರುವ ಮತ್ತು ಪ್ರಸ್ತುತ ಮಾರ್ಗ ಸೂಚಿಗಳ ಪ್ರಕಾರ ದೈಹಿಕ ಅಂತರವನ್ನು ಕಾಪಾಡಿಕೊ

 • ಎಲ್ಲಾ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಮುಂದಿನ ಕನಿಷ್ಠ ಒಂದು ತಿಂಗಳ ಅಧ್ಯಯನ ಸಾಮಾಗ್ರಿಗಳನ್ನು ಪ್ರತಿ Period/ Session ಗೆ ಸಂಬಂಧಿಸಿದಂತೆ ತಯಾರಿಸಿ ವಿದ್ಯಾರ್ಥಿಗಳಿಗೆ ಟೆಲಿಗ್ರಾಂ/ ವಾಟ್ಸಾಪ್/ ಇ-ಮೇಲ್ ಮೂಲಕ ಕಡ್ಡಾಯವಾಗಿ ನೀಡುವುದು. ಅಧ್ಯಯನ ಸಾಮಗ್ರಿಗಳು Video Lectures, PowerPoint Presentations, E-Notes, E-Books, Audio Books ಮತ್ತು Practice Questions ಇತ್ಯಾದಿಗಳ ರೂಪದಲ್ಲಿಇರತಕ್ಕದ್ದು. ಈ ಅಧ್ಯಯನ ಸಾಮಗ್ರಿಗಳನ್ನು ಕಾಲೇಜಿನ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಅಪ್‌ಲೋಡ್‌   ಮಾಡತಕ್ಕದ್ದು.

 • ಆನ್‌ಲೈನ್/ಸಂಪರ್ಕ ತರಗತಿಗಳಿಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ಆನ್-ಕ್ಯಾಂಪಸ್ ಹಾಗೂ ಆಫ಼್-ಕ್ಯಾಂಪಸ್ ಹಾಸ್ಟೆಲ್‌ಗಳಲ್ಲಿ ಉಳಿದು ಕೊಳ್ಳಬಹುದು.
 • ಸಾಮಾನ್ಯ ಮಾರ್ಗಸೂಚಿಗಳು:
  ಕಾಲೇಜಿನ ಸಂಪೂರ್ಣ ಕಟ್ಟಡ, ಮುಖ್ಯದ್ವಾರ, ಶೌಚಾಲಯ ಹಾಗೂ ಎಲ್ಲಾ ಕೊಠಡಿಗಳಲ್ಲಿನ ಪೀಠೋಪಕರಣ ಮತ್ತು ಪಠ್ಯಸಾಮಾಗ್ರಿಗಳನ್ನು ಸ್ಯಾನಿಟೈಸ್ ಮಾಡಿಸುವುದು.

 • ಬೋಧಕರು, ವಿದ್ಯಾರ್ಥಿಗಳು ಹಾಗೂ ಇತರೆ ಸಿಬ್ಬಂದಿ ಕಡ್ಡಾಯವಾಗಿ 3 ದಿನಗಳ ಮುಂಚೆ ಕೋವಿಡ್-19 (RTPCR)‌ ಪರೀಕ್ಷೆಯನ್ನು ಮಾಡಿಕೊಂಡು ವರದಿ ನೆಗೆಟಿವ್​​ ಇದ್ದಲ್ಲಿ ಮಾತ್ರ  ಹಾಜರಾಗುವುದು.

 • ಎಲ್ಲಾ ಕಾಲೇಜುಗಳು ತಮ್ಮ ತಮ್ಮ ಸಮೀಪವಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳೊಂದಿಗೆ ಮ್ಯಾಪಿಂಗ್​ ಮಾಡಿಕೊಳ್ಳವುದು.

 • ಪ್ರತಿ ತರಗತಿಯಿಂದ ಒಬ್ಬ ವಿದ್ಯಾರ್ಥಿಯನ್ನು ಗುರುತಿಸಿ ತನ್ನ ಸಹಪಾಠಿಗಳಲ್ಲೇನಾದರು ಕೋವಿಡ್‌ ಗೆ ಸಂಬಂಧಿಸಿದ ಲಕ್ಷಗಳನ್ನು ಕಂಡುಬಂದಲ್ಲಿ ಅದನ್ನು ಕೋವಿಡ್‌ ಕಾರ್ಯಪಡೆ‌ ಗಮನಕ್ಕೆ ತರುವಂತೆ ಸೂಚಿಸುವುದು.

 • ಕಾಲೇಜುಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮನೆಯಿಂದಲೇ ಊಟ ಮತ್ತು ಕುಡಿಯುವ ನೀರನ್ನು ಸ್ವತ: ತಂದು ಅವರೇ ಉಪಯೋಗಿಸುವುದು.

 • ಉಪನ್ಯಾಸಕರು ಕಡ್ಡಾಯವಾಗಿ ಮಾಸ್ಕ್‌ ಮತ್ತು ಫೇಸ್​ಶೀಲ್ಡ್​ ಧರಿಸುವುದು. ಕಾಲೇಜುಗಳಲ್ಲಿ ಲೈಬ್ರರಿ ಮತ್ತು ಕ್ಯಾಂಟೀನ್‌ಗಳನ್ನು ತೆರೆಯುವಂತಿಲ್ಲ. ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಎನ್‌.ಸಿ.ಸಿ ಹಾಗೂ ಎನ್‌.ಎಸ್‌.ಎಸ್‌  ಚಟುವಟಿಕೆಗಳನ್ನು  ಪ್ರಾರಂಭಿಸುವಂತಿಲ್ಲ.


ಪ್ರವೇಶ/ ನಿರ್ಗಮನ ಕೇಂದ್ರಗಳ ಸುರಕ್ಷತಾ ಕ್ರಮಗಳು:

 • ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಥರ್ಮಲ್ ಸ್ಕ್ಯಾನರ್ ಮತ್ತು ಸಾನಿಟೈಸರ್ಗಳ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕು.

 • ಪ್ರವೇಶ/ ನಿರ್ಗಮನ ಸ್ಥಳಗಳಲ್ಲಿ ಜನಸಂದಣಿಯನ್ನು ತಪ್ಪಿಸಬೇಕು. ವಿವಿಧ ಕೋರ್ಸುಗಳಿಗೆ ಸೀಮಿತ ವಿದ್ಯಾರ್ಥಿ ಸಂಖ್ಯೆಯನ್ನು ನಿಗಧಿಗೊಳಿಸಿ, ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನದ ಸಮಯಗಳನ್ನು ಅನುಸರಿಸಬೇಕು.

 • ಆವರಣದ ಒಳಗೆ ಮತ್ತು ಹೊರಗೆ ಕ್ಯೂ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು, ನೆಲದ ಮೇಲೆ 6 ಅಡಿಗಳ ಅಂತರವಿರುವ ನಿರ್ದಿಷ್ಟ ಗುರುತುಗಳನ್ನು ಮಾಡುವುದು ಮತ್ತು ಅದನ್ನು ಪಾಲಿಸಬೇಕು.

 • ಒಂದು ವೇಳೆ ಪ್ರವೇಶ/ ನಿರ್ಗಮನಕ್ಕೆ ಒಂದಕ್ಕಿಂತ ಹೆಚ್ಚು ಗೇಟ್ ಗಳನ್ನು ಸಂಸ್ಥೆಯು ಹೊಂದಿದ್ದಲ್ಲಿ, ಜನಸಂದಣಿಯನ್ನು ತಪ್ಪಿಸಲು, ಎಲ್ಲಾ ಗೇಟ್ ಗಳನ್ನು ಸಾಕಷ್ಟು ಎಚ್ಚರಿಕೆಯಿಂದ ಬಳಸಬೇಕು. ವಿದ್ಯಾರ್ಥಿಗಳ ಪ್ರವೇಶ ಮತ್ತು ನಿರ್ಗಮನದ ಮೇಲ್ವಿಚಾರಣೆಯನ್ನು ಮಾಡಬೇಕು.

 • ವಿದ್ಯಾರ್ಥಿ,  ಬೋಧಕ, ಬೋಧಕೇತರ ಸಿಬ್ಬಂದಿಯ ಥರ್ಮಲ್‌ ತಪಾಸಣೆ, ಮುಖಗವಸು/ ಮಾಸ್ಕ್ ಧರಿಸುವುದು, ಕೈಗಳನ್ನು ಶುದ್ಧಿಗೊಳಿಸುವುದನ್ನು ಎಲ್ಲಾ ಪ್ರವೇಶ ಕೇಂದ್ರಗಳಲ್ಲಿ ಖಚಿತಪಡಿಸಿಕೊಳ್ಳಬೇಕು.

 • ಜ್ವರ, ಕೆಮ್ಮು, ಉಸಿರಾಟದ ತೊಂದರೆಯ ಲಕ್ಷಣಗಳನ್ನು ಹೊಂದಿರುವವರು ಶಿಕ್ಷಣ ಸಂಸ್ಥೆಯ ಆವರಣದೊಳಗೆ ಪ್ರವೇಶಿಸುವುದನ್ನು ನಿಷೇಧಿಸುವುದು.

Published by:Seema R
First published: