Karnataka Monsoon (2021 ಜುಲೈ 09):ರಾಜ್ಯಕ್ಕೆ ನೈರುತ್ಯ ಮುಂಗಾರು ಜುಲೈ.08ರಂದು ಭಾರೀ ಮಳೆ ತರಲಿದೆ. ನಂತರದ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈ ಹಿಂದೆಯೇ ಸೂಚನೆ ನೀಡಿತ್ತು. ಅದರಂತೆಯೇ ಗುರುವಾರ ರಾತ್ರಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಅಲ್ಲದೆ, ಮುಂದಿನ ನಾಲ್ಕು-ಐದು ದಿನ ಭಾರೀ ಮಳೆಯ ನಿರೀಕ್ಷೆ ಇದೆ. ಅಸಲಿಗೆ ಮುಂಗಾರು ರಾಜ್ಯಕ್ಕೆ ಪ್ರವೇಶ ಪಡೆದು ಒಂದು ತಿಂಗಳಾಗಿದ್ದರೂ ಸಹ ಈ ವರೆಗೆ ಹೇಳಿಕೊಳ್ಳುವಂತಹ ಉತ್ತಮ ಮಳೆಯಾಗಿರಲಿಲ್ಲ. ಪಶ್ಚಿಮ ಘಟ್ಟ - ಮಲೆನಾಡನ್ನು ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆಯಾಗಿದೆ. ಇನ್ನೂ ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗಿದ್ದರೂ ಸಹ ಜುಲೈ.07 ರಂದು ಮಳೆಯಾಗಿರಲಿಲ್ಲ.
ಆದರೆ, ಜುಲೈ 7ರವರೆಗೂ ಮುಂಗಾರಿಗೆ ಸಮಯ ಸೂಕ್ತವಾಗಿಲ್ಲ. ಆನಂತರವಷ್ಟೇ ಹೆಚ್ಚಿನ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಮುಂಗಾರು ಚುರುಕಾಗುವುದಾಗಿ ತಿಳಿಸಲಾಗಿದೆ. ಜುಲೈನಲ್ಲಿ ಶೇ.94 -106 (ದೀರ್ಘಾವಧಿ ಸರಾಸರಿ) ಮಳೆ ಜುಲೈ ತಿಂಗಳ ಎರಡನೇ ವಾರದಲ್ಲಿ ನೈಋತ್ಯ ಮುಂಗಾರು ಚುರುಕು ಪಡೆಯಲಿದೆ. ಆಗ ದೇಶಾದ್ಯಂತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮಹೋಪಾತ್ರ ತಿಳಿಸಿದ್ದಾರೆ. .
ಈ ವರ್ಷ ನೈಋತ್ಯ ಮುಂಗಾರು ದಕ್ಷಿಣ ಭಾರತ ಹಾಗೂ ಉತ್ತರ ಭಾರತದಲ್ಲಿ ಸಾಮಾನ್ಯ ರೀತಿ ಇರಲಿದ್ದು ಕೇಂದ್ರ ಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇರಲಿದೆ. ಆದರೆ ಭಾರತ ಪೂರ್ವ ಭಾಗದಲ್ಲಿ ಮತ್ತು ಈಶಾನ್ಯ ಭಾರತದಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಕಡಿಮೆ ಮಟ್ಟದಲ್ಲಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನೈಋತ್ಯ ಮುಂಗಾರಿನ ಕಾಲಾವಧಿಯಲ್ಲಿ(ಜೂನ್‌ನಿಂದ-ಸೆಪ್ಟೆಂಬರ್) ದೇಶಾದ್ಯಂತ ಮಳೆಯ ಪ್ರಮಾಣ ಸಾಮಾನ್ಯವಾಗಿರಲಿದೆ ಎಂದು ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭವಾಗಲಿದೆ. ಕರಾವಳಿ ಜಿಲ್ಲೆಗಳಲ್ಲೂ ವರುಣ ಆರ್ಭಟಿಸಲಿದ್ದಾನೆ. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಜುಲೈ 5ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: Encounter: ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆ
ಕಲ್ಯಾಣ ಕರ್ನಾಟಕದಲ್ಲಿ ಕಳೆದ ವಾರ ಜೋರಿದ್ದ ಮಳೆ ಈ ವಾರ ಇಳಿಕೆಯಾಗಿದೆ. ಆದರೆ, ನೈರುತ್ಯ ಮುಂಗಾರಿನಲ್ಲಿ ಈ ಭಾಗಕ್ಕೆ ಜುಲೈ.08ರ ನಂತರ ಉತ್ತಮ ಮಳೆಯಾಗಲಿದೆ ಎನ್ನಲಾಗುತ್ತಿದೆ. ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ನೈಋತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಇದನ್ನೂ ಓದಿ: ಪೊಲೀಸರೆ ನನ್ನ ಬಳಿ ಬರಲಿ; ತನ್ನ ಉದ್ಯೋಗಿ ಪರ ಟ್ವಿಟರ್ ಇಂಡಿಯಾ ಕೋರ್ಟ್ ನಲ್ಲಿ ಹೀಗೆ ಹೇಳಿದ್ಯಾಕೆ?
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ