ಸ್ಪೀಕರ್ ಕಾಗೇರಿ ಟೀಚರ್ ಅಲ್ಲ ನಾವು ಪ್ರೈಮರಿ ಸ್ಕೂಲ್ ಮಕ್ಕಳೂ ಅಲ್ಲ; ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

ಸ್ಪೀಕರ್ ಕಾಗೇರಿ ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಅಲ್ಲ. ಸ್ಪೀಕರ್ ಸದನದಲ್ಲಿ ಅಂಪೈರ್ ರೀತಿ ಇರಬೇಕು, ಅವರೇ ಆಟಗಾರರ ರೀತಿ ಮೈದಾನಕ್ಕೆ ಇಳಿದರೆ ನಾವು ಆಟಗಾರರ ರೀತಿಯಲ್ಲಿಯೇ ಎದುರಿಸುತ್ತೇವೆ ಎಂದು ಬಿಜೆಪಿ ಆರೋಪಕ್ಕೆ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ.

Sushma Chakre | news18-kannada
Updated:October 12, 2019, 12:53 PM IST
ಸ್ಪೀಕರ್ ಕಾಗೇರಿ ಟೀಚರ್ ಅಲ್ಲ ನಾವು ಪ್ರೈಮರಿ ಸ್ಕೂಲ್ ಮಕ್ಕಳೂ ಅಲ್ಲ; ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು
ಸಿದ್ದರಾಮಯ್ಯ
  • Share this:
ಬೆಂಗಳೂರು (ಅ. 12): ಈ ಬಾರಿಯ ವಿಧಾನಸಭಾ ಅಧಿವೇಶನಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ತಾವು ಮಾತನಾಡಿದ್ದನ್ನು ಮಾತ್ರ ಜನರಿಗೆ ತಲುಪಿಸಲು ಹಾಗೂ ವಿರೋಧಪಕ್ಷದವರು ಏನು ಮಾತನಾಡಿದ್ದಾರೆಂದು ಜನರಿಗೆ ತಿಳಿಯದಂತೆ ಮಾಡುವ ಉದ್ದೇಶದಿಂದಲೇ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿವೇಶನಕ್ಕೆ ಬೇರೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮೊದಲು ಆರೋಪ ಮಾಡಿದ್ದರು.

ಅದಕ್ಕೆ ಪೂರಕವಾಗಿ ಇಂದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ವಿರೋಧಪಕ್ಷಗಳ ದನಿಯನ್ನು ದಮನಿಸಿ ಆಡಳಿತ ಪಕ್ಷಕ್ಕೆ ನೆರವಾಗುವ ಉದ್ದೇಶದಿಂದಲೇ ಸ್ಪೀಕರ್ ಅವರು ಟಿವಿ ಚಾನೆಲ‌್‌ಗಳ ಕ್ಯಾಮೆರಾಗಳಿಗೆ ನಿರ್ಬಂಧ ಹೇರಿರುವುದು ಕಳೆದೆರಡು ದಿನಗಳ ಕಲಾಪದಿಂದ ಸ್ಪಷ್ಟವಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


'ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡ ಆಡಳಿತ ಪಕ್ಷದ ಸದಸ್ಯರು, ಸರ್ಕಾರದ ವೈಫಲ್ಯದ ಬಗ್ಗೆ ಆಡಿದ ಮಾತುಗಳು ಮತ್ತು ಅವರ ಮುಖಗಳನ್ನು ಸರ್ಕಾರಿ ಕೃಪಾಪೋಷಿತ ಮಾಧ್ಯಮವಾದ ಚಂದನ ವಾಹಿನಿ ಸೆನ್ಸಾರ್ ಮಾಡಿ ಬಿತ್ತರಿಸುತ್ತಿರುವುದು ಖಂಡನೀಯ' ಎಂದು ನೇರವಾಗಿಯೇ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.ಐಟಿ ದಾಳಿ ಪ್ರಕರಣ; ಮಾಜಿ ಡಿಸಿಎಂ ಪರಮೇಶ್ವರ್ ಖಜಾನೆಯಲ್ಲಿತ್ತು 100 ಕೋಟಿಗೂ ಅಧಿಕ ಅಕ್ರಮ ಹಣ!

ನಿನ್ನೆ ರಾತ್ರಿ ರಾಜ್ಯ ಬಿಜೆಪಿ ಟ್ವಿಟ್ಟರ್​ ಪೇಜಿನಲ್ಲಿ ಸಿದ್ದರಾಮಯ್ಯ ಗೂಂಡಾ ಸಂಸ್ಕೃತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಸದನದಲ್ಲಿ ಸಿದ್ದರಾಮಯ್ಯ ಮಾತನಾಡುತ್ತಿರುವ ವಿಡಿಯೋ ತುಣುಕನ್ನು ಹಂಚಿಕೊಂಡಿದ್ದ ರಾಜ್ಯ ಬಿಜೆಪಿ ನಾಯಕರು, 'ಈ ವಿಡಿಯೋ ನೋಡಿದವರಿಗೆ ಕಾಂಗ್ರೆಸ್ ಹಾಗೂ ಗೂಂಡಾ ಸಂಸ್ಕೃತಿಗೂ ಯಾವುದೇ ವ್ಯತ್ಯಾಸವಿಲ್ಲ ಎಂಬುದರ ಅರಿವಾಗುತ್ತದೆ. ತಮ್ಮ 5 ವರ್ಷದ ಅವಧಿಯಲ್ಲಿ ಇದೇ ಧೋರಣೆ ಪ್ರದರ್ಶಿಸಿ ಅಧಿಕಾರ ಕಳೆದುಕೊಂಡ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಈ ವರ್ತನೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಿರ್ನಾಮವಾಗುವುದು ಖಚಿತ' ಎಂದು ಭವಿಷ್ಯ ನುಡಿದಿದ್ದರು.ಸ್ಪೀಕರ್ ವಿರುದ್ಧ ಸಿದ್ದರಾಮಯ್ಯ ಗುಡುಗು:

'ಸ್ಪೀಕರ್ ಅವರು ಕ್ಲಾಸ್ ಟೀಚರ್ ಅಲ್ಲ, ನಾವು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೂ ಅಲ್ಲ. ಸ್ಪೀಕರ್ ಸದನದಲ್ಲಿ ಅಂಪೈರ್ ರೀತಿ ಇರಬೇಕು, ಅವರೇ ಆಟಗಾರರ ರೀತಿಯಲ್ಲಿ ಮೈದಾನಕ್ಕೆ ಇಳಿದರೆ ನಾವು ಆಟಗಾರರ ರೀತಿಯಲ್ಲಿಯೇ ಎದುರಿಸುತ್ತೇವೆ' ಎಂದು ಬಿಜೆಪಿ ಆರೋಪಕ್ಕೆ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ.'ಸ್ಪೀಕರ್ ಕಾಗೇರಿಯವರ ಜೊತೆ ನನಗೆ ವೈಯಕ್ತಿಕ ಜಗಳವೇನಿಲ್ಲ. ವಿಧಾನಮಂಡಲದ ಶಿಷ್ಟಾಚಾರ-ನಡವಳಿಕೆಗಳ ಬಗ್ಗೆ ನನಗೂ ತಿಳಿದಿದೆ. ಆದರೆ ಅಧಿಕಾರ ವಹಿಸಿಕೊಂಡ ಕೂಡಲೇ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡಿದ ಸ್ಪೀಕರ್, ಮೊದಲ ದಿನದಿಂದಲೇ ಬಿಜೆಪಿ ಸದಸ್ಯರ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದು ಖಂಡನೀಯ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.First published: October 12, 2019, 12:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading