news18-kannada Updated:February 13, 2020, 6:16 PM IST
ರಾಜ್ಯಪಾಲರಿಗೆ ಆಹ್ವಾನಿಸಿದ ಸ್ಪೀಕರ್-ಸಭಾಪತಿ
ಬೆಂಗಳೂರು (ಫೆ.13): ಫೆ.17ರಿಂದ ಅಧಿವೇಶನ ಆರಂಭವಾಗಲಿದ್ದು, ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವಂತೆ ರಾಜ್ಯಪಾಲ ವಾಜುಭಾಯಿ ವಾಲಾ ಅವರಿಗೆ ಸರ್ಕಾರದಿಂದ ಅಧಿಕೃತವಾಗಿ ಆಹ್ವಾನಿಸಲಾಗಿದೆ
ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸಭಾಪರಿ ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಆಹ್ವಾನಿಸದರು.
ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಮಾಡಿದ ಭಾಷಣದ ಮೇಲೆ ಸದನದಲ್ಲಿ ಚರ್ಚೆಗಳು ನಡೆಯಲಿದ್ದು, ಮಾರ್ಚ್ 5ರಂದು ಮುಖ್ಯಮಂತ್ರಿಗಳು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಇದಾದ ಬಳಿಕ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.
ಇದನ್ನು ಓದಿ: Karnataka Budget 2020: ಈ ಅವಧಿಯ ಮೊದಲ ಬಜೆಟ್ ಮಂಡಿಸಲಿರುವ ಬಿಎಸ್ವೈ; ಮಾರ್ಚ್.5ಕ್ಕೆ ಆಯವ್ಯಯ, ಗರಿಗೆದರಿದ ನಿರೀಕ್ಷೆಗಳು
ಬಜೆಟ್ ಮಂಡನೆಗೆ ಈಗಾಗಲೇ ಸಿಎಂ ಸಿದ್ಧತೆ ನಡೆಸಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ರಾಜ್ಯ ಬಜೆಟ್ ಮೇಲೆ ಜನರ ನಿರೀಕ್ಷೆಗಳು ಕೂಡ ಹೆಚ್ಚಾಗಿವೆ.
First published:
February 13, 2020, 6:16 PM IST