ವಿಧಾನಮಂಡಲ ಅಧಿವೇಶನ ದಿನಾಂಕ ಘೋಷಿಸಿದ ಸ್ಪೀಕರ್​; ಮಾರ್ಚ್​5ಕ್ಕೆ ರಾಜ್ಯ ಬಜೆಟ್​ ಮಂಡಿಸಲಿರುವ ಬಿಎಸ್​ವೈ

ಈ ಬಾರಿಯ ಅಧಿವೇಶನವೂ ಲೋಕಸಭೆ ಹಾಗೂ ರಾಜ್ಯಸಭೆ ಮಾದರಿಯಲ್ಲೇ ನಡೆಯಲಿದ್ದು, ಕಲಾಪ ನಡೆಯುವ ಪ್ರಮುಖ ಸದನಕ್ಕೆ ಮಾಧ್ಯಮಗಳಿಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ. ಕಳೆದ ಬಾರಿಯ ಅಧಿವೇಶನದಲ್ಲೂ ಮಾಧ್ಯಮಗಳ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.

MAshok Kumar | news18-kannada
Updated:February 14, 2020, 1:21 PM IST
ವಿಧಾನಮಂಡಲ ಅಧಿವೇಶನ ದಿನಾಂಕ ಘೋಷಿಸಿದ ಸ್ಪೀಕರ್​; ಮಾರ್ಚ್​5ಕ್ಕೆ ರಾಜ್ಯ ಬಜೆಟ್​ ಮಂಡಿಸಲಿರುವ ಬಿಎಸ್​ವೈ
ವಿಶ್ವೇಶ್ವರ ಹೆಗಡೆ ಕಾಗೇರಿ
  • Share this:
ಬೆಂಗಳೂರು (ಫೆಬ್ರವರಿ 14); ಚಳಿಗಾಲದಲ್ಲಿ ನಡೆಯಬೇಕಿದ್ದ ರಾಜ್ಯ ವಿಧಾನಮಂಡಲ ಅಧಿವೇಶನಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಇಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ "ಫೆಬ್ರವರಿ 17 ರಿಂದ ಮಾರ್ಚ್ 31ರ ವರೆಗೆ ರಾಜ್ಯ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದೆ, ಮಾರ್ಚ್​.05 ರಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.

ವಿಧಾನಮಂಡಲ ಅಧಿವೇಶನ ಕರೆಯುವ ಸಲುವಾಗಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, “ಫೆಬ್ರವರಿ 17ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನ ಮಾರ್ಚ್ 31ರ ವರೆಗೆ ನಡೆಯಲಿದೆ. ಈ ನಿರ್ಧಾರಕ್ಕೆ ನಾನು ರಾಜ್ಯ ಸರ್ಕಾರವನ್ನು ಅಭಿನಂದಿಸುತ್ತೇನೆ. ರಾಜ್ಯಪಾಲರಿಗೂ ಈಗಾಗಲೇ ಆಹ್ವಾನ ನೀಡಲಾಗಿದ್ದು, ಮೊದಲ ದಿನವೇ ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ವಜುಭಾಯಿ ವಾಲಾ ಎರಡೂ ಸದನಗಳನ್ನೂ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಫೆಬ್ರವರಿ 22ರ ವರೆಗೆ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆ ನಡೆಯಲಿದೆ. ಮತ್ತೆ ಮಾರ್ಚ್ 2 ರಂದು ಅಧಿವೇಶನ ಆರಂಭವಾಗಲಿದ್ದು, ಮಾರ್ಚ್.5 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಅಧಿವೇಶನದಲ್ಲಿ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಸೇರಿದಂತೆ 6 ವಿಧೇಯಕಗಳ ಸ್ವೀಕೃತಕ್ಕೆ ಸರ್ಕಾರ ಮನವಿ ಮಾಡಿದೆ. ಈ ಕುರಿತು ಸದನದಲ್ಲಿ ಚರ್ಚೆಯೂ ನಡೆಯಲಿದೆ" ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ಈ ಬಾರಿಯ ಅಧಿವೇಶನವೂ ಲೋಕಸಭೆ ಹಾಗೂ ರಾಜ್ಯಸಭೆ ಮಾದರಿಯಲ್ಲೇ ನಡೆಯಲಿದ್ದು, ಮಾಧ್ಯಮಗಳಿಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ. ಕಳೆದ ಬಾರಿಯ ಅಧಿವೇಶನದಲ್ಲೂ ಮಾಧ್ಯಮಗಳ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.

ಇದನ್ನೂ ಓದಿ : ಹೊಸಪೇಟೆ ಅಪಘಾತ ಪ್ರಕರಣ; ನ್ಯಾಯಕ್ಕಾಗಿ ಕಣ್ಣೀರಿಡುತ್ತಿರುವ ಮೃತ ರವಿನಾಯ್ಕ್ ಕುಟುಂಬ
First published: February 14, 2020, 1:21 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading