HOME » NEWS » State » SPECIAL POOJ TO RAMA BY SRI RAM SENE CHIEF PROMOD MUTHALIK IN DHARAWAD GNR

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ - ಧಾರವಾಡದಲ್ಲಿ ವಿಶೇಷ ಪೂಜೆ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆ ನೆರವೇರಿಯುತ್ತಿದ್ದು, ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಸಂಘಟನೆಯಿಂದ ವಿಶೆಷ ಪೂಜೆ ನಡೆಸಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

news18-kannada
Updated:August 5, 2020, 3:56 PM IST
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ - ಧಾರವಾಡದಲ್ಲಿ ವಿಶೇಷ ಪೂಜೆ
ಧಾರವಾಡದಲ್ಲಿ ಪ್ರಮೋದ್​ ಮುತಾಲಿಕ್​ ಅವರಿಂದ ರಾಮನಿಗೆ ಪೂಜೆ
  • Share this:
ಧಾರವಾಡ(ಆ.05): ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೇರವೇರುವ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಸಂಭ್ರಮ‌ ಮನೆ ಮಾಡಿದೆ.  ಹನುಮಂತ ದೇವಸ್ಥಾನ ಹಾಗೂ ಶ್ರೀರಾಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆದಿವೆ. ಅಲ್ಲದೇ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​​ ಮುತಾಲಿಕ್​​ ಅವರು ರಾಮನಿಗೆ ವಿಶೇಷ ಪೂಜೆ ನೆರವೇರಿಸಿದ್ದಾರೆ.

ಇಲ್ಲಿನ ಕೆಲಗೇರಿಯಲ್ಲಿನ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮನೆಯಲ್ಲಿ ಪೂಜೆ ಸಲ್ಲಿಸಲಾಯಿತು. ಶ್ರೀರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಆರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ನೇರವೇರಿದವು. ನಂತರ ಪ್ರಮೋದ್​​ ಮುತಾಲಿಕ್​ ಅವರು ಭಜನೆ ಮಾಡಿ, ಪರಸ್ಪರ ಸಿಹಿ ಹಂಚಿಕೊಂಡು ಶ್ರೀರಾಮ ಸೇನಾ ಕಾರ್ಯಕರ್ತರೊಂದಿಗೆ ಸಂಭ್ರಮಿಸಿದ್ದಾರೆೆೆ.

ರಾಮಮಂದಿರಕ್ಕೆ ಭೂಮಿ ಪೂಜೆ ಹಿನ್ನೆಲೆ ಧಾರವಾಡದ ನುಗ್ಗಿಕೇರಿ ಹನುಮಂತ ದೇವರಿಗೆ ವಿಶೇಷ ಪೂಜೆ ಮಾಡಲಾಯಿತು. ಧಾರವಾಡ ಹೊರವಲಯದಲ್ಲಿರುವ ಹನುಮಂತ ದೇವರ ದೇವಸ್ಥಾನದಲ್ಲಿ ಸಮಿತಿಯಿಂದ ವಿಶೇಷ ಪೂಜೆ ಸಲ್ಲಿಸಲಾಗಿದೆ. ವಿವಿಧ ದೇವಸ್ಥಾನಗಳಲ್ಲಿ ಸಹ ಪೂಜೆ ಸಲ್ಲಿಸಲಾಗಿದೆ.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆ ನೆರವೇರಿಯುತ್ತಿದ್ದು, ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಸಂಘಟನೆಯಿಂದ ವಿಶೆಷ ಪೂಜೆ ನಡೆಸಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಧಾರವಾಡದ ರಾಮ ಮಂದಿರ ಹಾಗೂ ಲೈನ್ ಬಜಾರ ಹನುಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದರು.ಈ ಸಂದರ್ಭದಲ್ಲಿ ಆರ್.ಎಸ್.ಎಸ್ ಹಾಗೂ ಭಜರಂಗದಳದ ಕಾರ್ಯಕರ್ತರು ಸಂಭ್ರಮದಲ್ಲಿ ಭಾಗಿಯಾಗಿದ್ದರು.

ಇನ್ನು, ಹಲವು ವರ್ಷಗಳ ಕಾಲ ವಿವಾವದ ಸುಳಿಯಲ್ಲಿ ಸಿಲುಕಿದ್ದ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣ ಮಾಡಲು ಕೊನೆಗೂ ಸಮಯ ಕೂಡಿ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಗೆ ತೆರಳಿ, ರಾಮ ಮಂದಿರ ನಿರ್ಮಾಣ ಮಾಡಲು ಶಿಲಾನ್ಯಸ ನೆರವೇರಿಸಿದ್ದಾರೆ. ಅನೇಕ ಸಾಧು-ಸಂತರು, ಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾದರು.
Youtube Video
ಇದನ್ನೂ ಓದಿ: Ram Mandir Bhumi Pujan: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಯೋಧ್ಯೆ; ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಮೋದಿ

ಹಲವು ವರ್ಷಗಳ ಕಾಲ ವಿವಾವದ ಸುಳಿಯಲ್ಲಿ ಸಿಲುಕಿದ್ದ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣ ಮಾಡಲು ಕೊನೆಗೂ ಸಮಯ ಕೂಡಿ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಗೆ ತೆರಳಿ, ರಾಮ ಮಂದಿರ ನಿರ್ಮಾಣ ಮಾಡಲು ಶಿಲಾನ್ಯಸ ನೆರವೇರಿಸಿದ್ದಾರೆ. ಅನೇಕ ಸಾಧು-ಸಂತರು, ಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾದರು.
Published by: Ganesh Nachikethu
First published: August 5, 2020, 3:54 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories