ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್, ಟೇಕಾಫ್​ ವಿಳಂಬ; ಪ್ರಯಾಣಿಕರ ಪರದಾಟ

ಇಂದು ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ಮಂಗಳೂರಿನಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿತ್ತು. ಬೆಳಗ್ಗೆ 10 ಗಂಟೆಯ ನಂತರ ವಿಮಾನ ಲ್ಯಾಂಡಿಂಗ್​ಗೆ ಅನುಮತಿ ದೊರೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

news18-kannada
Updated:February 15, 2020, 10:30 AM IST
ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್, ಟೇಕಾಫ್​ ವಿಳಂಬ; ಪ್ರಯಾಣಿಕರ ಪರದಾಟ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
  • Share this:
ಮಂಗಳೂರು (ಫೆ. 15): ಮುಂಜಾನೆಯಿಂದ ಮಂಗಳೂರಿನಲ್ಲಿ ಪ್ರತಿಕೂಲ ಹವಾಮಾನ ಇದ್ದುದರಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ಬೆಳಗ್ಗೆ 7 ಗಂಟೆಯಿಂದ ವಿಮಾನದ ಲ್ಯಾಂಡಿಂಗ್ ಮತ್ತು ಟೇಕಾಫ್​ ಸ್ಥಗಿತಗೊಂಡಿದೆ.

ದುಬೈ ಸೇರಿ ದೇಶದ ನಾನಾ ಭಾಗಗಳು ಮತ್ತು ವಿವಿಧ ದೇಶಗಳಿಂದ ಲ್ಯಾಂಡಿಂಗ್ ಆಗಬೇಕಿದ್ದ ವಿಮಾನಗಳ ಸಮಯದಲ್ಲಿ ಇಂದು ವ್ಯತ್ಯಯವಾಗಿದೆ. ಬೆಳಗ್ಗೆ 7 ಗಂಟೆಯಿಂದ ಮಂಗಳೂರಿನಲ್ಲಿ ಹವಾಮಾನ ವೈಪರೀತ್ಯ ಉಂಟಾದ್ದರಿಂದ ವಿಮಾನ ಹಾರಾಟದಲ್ಲಿ ಸಮಸ್ಯೆ ಉಂಟಾಗಿತ್ತು. ಈ ಕಾರಣದಿಂದ ಲ್ಯಾಂಡಿಂಗ್ ಮತ್ತು ಟೇಕಾಫ್​ ಸ್ಥಗಿತವಾಗಿತ್ತು. ಇದರಿಂದ ಕೆಲಕಾಲ ವಿಮಾನ ಪ್ರಯಾಣಿಕರಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು.

ಇಂದು ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ಮಂಗಳೂರಿನಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿತ್ತು. ಬೆಳಗ್ಗೆ 10 ಗಂಟೆಯ ನಂತರ ವಿಮಾನ ಲ್ಯಾಂಡಿಂಗ್​ಗೆ ಅನುಮತಿ ದೊರೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಗಳೂರಿನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಲ್ಯಾಂಡ್ ಆಗದ ಕಾರಣ ದುಬೈ ವಿಮಾನವನ್ನು ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಲ್ಯಾಂಡ್ ಮಾಡಲಾಗಿದೆ.

ಇದನ್ನೂ ಓದಿ: ಮೋಜು-ಮಸ್ತಿಗಾಗಿ ಹೆದ್ದಾರಿಯಲ್ಲಿ ದರೋಡೆ; ನಾಲ್ವರ ಬಂಧನ, ಪೊಲೀಸ್ ಅಧಿಕಾರಿ ಮಗ ಎಸ್ಕೇಪ್

ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಾಗಿದ್ದ ಸ್ಪೈಸ್​ ಜೆಟ್ ವಿಮಾನದ ಮಾರ್ಗ ಬದಲಾಯಿಸಲಾಗಿದ್ದು, ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದೆ. ಹೈದರಾಬಾದ್​ನಿಂದ ಬಂದ ವಿಮಾನಕ್ಕೂ ಮಂಗಳೂರಿನಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗಿಲ್ಲ.
First published:February 15, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ