• Home
  • »
  • News
  • »
  • state
  • »
  • ಶ್ರೀರಾಮ ಸೇನೆಯಿಂದ ಮುಸ್ಲಿಂ ವ್ಯಾಪಾರಿಗಳ ಕಲ್ಲಂಗಡಿ ನಾಶ: ಭಯೋತ್ಪಾದಕರಿಗೂ, ಈ ಕಿರಾತಕರಿಗೆ ವ್ಯತ್ಯಾಸವಿಲ್ಲ ಅಂದ್ರು HDK

ಶ್ರೀರಾಮ ಸೇನೆಯಿಂದ ಮುಸ್ಲಿಂ ವ್ಯಾಪಾರಿಗಳ ಕಲ್ಲಂಗಡಿ ನಾಶ: ಭಯೋತ್ಪಾದಕರಿಗೂ, ಈ ಕಿರಾತಕರಿಗೆ ವ್ಯತ್ಯಾಸವಿಲ್ಲ ಅಂದ್ರು HDK

ಈ ಸಂಬಂಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ(Former CM HD Kumaraswamy) ಪ್ರತಿಕ್ರಿಯೆ ನೀಡಿ ಶ್ರೀರಾಮಸೇನೆಯ ಕಾರ್ಯಕರ್ತರ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.

ಈ ಸಂಬಂಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ(Former CM HD Kumaraswamy) ಪ್ರತಿಕ್ರಿಯೆ ನೀಡಿ ಶ್ರೀರಾಮಸೇನೆಯ ಕಾರ್ಯಕರ್ತರ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.

ಅನ್ನಕ್ಕೆ ಮಣ್ಣು ಹಾಕುವುದು ಯಾವ ಧರ್ಮ?, *ಬದುಕಿಗೆ ಬೆಂಕಿ ಇಡುವುದು ಯಾವ ಧರ್ಮ? ಮನುಷ್ಯತ್ವಕ್ಕೆ ಸಮಾಧಿ ಕಟ್ಟುವುದು ಯಾವ ಧರ್ಮ?

  • Share this:

ಧಾರವಾಡದ ನುಗ್ಗಿಕೇರಿಯ ಶ್ರೀ ಆಂಜನೇಯ ದೇವಸ್ಥಾನದಲ್ಲಿ (Nuggikeri Anjaneya Temple, Dharwad) ಮುಸ್ಲಿಂ ಅಂಗಡಿಗಳನ್ನು (Muslim Traders Shop) ಶ್ರೀರಾಮ ಸೇನೆ ಕಾರ್ಯಕರ್ತರು (Sri Rama Sena Activist) ಬಲವಂತವಾಗಿ ತೆರವು ಮಾಡಿದ್ದಾರೆ. ಇಂದು ದೇವಸ್ಥಾನ ಬಳಸಿ ಆಗಮಿಸಿದ ಶ್ರೀರಾಮ ಸೇನೆಯ ಕಾರ್ಯಕರ್ತರು ಕಲ್ಲಂಗಡಿ ಹಣ್ಣುಗಳನ್ನು (Watermoelon) ಒಡೆಯುವ ಮೂಲಕ ಅಂಗಡಿ ಖಾಲಿ ಮಾಡಿಸಿದ್ದಾರೆ. ಐವರು ಮುಸ್ಲಿಂ ವ್ಯಾಪಾರಿಗಳ ಕಲ್ಲಂಗಡಿಗಳನ್ನು ನಾಶ ಮಾಡಲಾಗಿದ್ದು, ಇದರ ವಿಡಿಯೋ(Video)ಗಳು ಸೋಶಿಯಲ್ ಮೀಡಿಯಾ(Social Media)ದಲ್ಲಿ ವೈರಲ್ ಆಗಿದೆ. ಒಂದು ವಾರದ ಹಿಂದೆ ದೇವಸ್ಥಾನದ ಆವರಣದಲ್ಲಿರುವ ಮುಸ್ಲಿಂ ವ್ಯಾಪಾರಿಗಳ ಅಂಗಡಿ ತೆಗೆಸುವಂತೆ ಶ್ರೀರಾಮ ಸೇನೆಯ ಕಾರ್ಯಕರ್ತರು ದೇವಸ್ಥಾನ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದ್ದರು. ಇದೀಗ ಈ ಸಂಬಂಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ(Former CM HD Kumaraswamy) ಪ್ರತಿಕ್ರಿಯೆ ನೀಡಿದ್ದು, ಶ್ರೀರಾಮಸೇನೆಯ ಕಾರ್ಯಕರ್ತರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.


ಕುಮಾರಸ್ವಾಮಿ ಅವರು ಟ್ವಿಟರ್ ನಲ್ಲಿ ತಮ್ಮ ಅಭಿಪ್ರಾಯದ ಜೊತೆಗೆ ಕಲ್ಲಂಗಡಿ ಒಡೆದಿರುವ ದೃಶ್ಯ, ವ್ಯಾಪರಸ್ಥರು ಮತ್ತು ದೇವಸ್ಥಾನದ ಅರ್ಚಕರ ಹೇಳಿಕೆಯ ವಿಡಿಯೋಗಳನ್ನ ಹಂಚಿಕೊಂಡಿದ್ದಾರೆ.


ಇದೊಂದು ಪರಮ ಕಿರಾತಕ ಕೃತ್ಯ!


ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರಾಮಭಕ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮು‌ಸ್ಲಿಮರ ಅಂಗಡಿಗಳನ್ನು ನಾಶಪಡಿಸಿ, ಅವರು ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿರುವುದು ಹೇಯ & ಪರಮ ಕಿರಾತಕ ಕೃತ್ಯ.ಕಾಶ್ಮೀರದಲ್ಲಿ ರಕ್ತದೋಕುಳಿ ಹರಿಸುವ ಭಯೋತ್ಪಾದಕರಿಗೂ, ಶಾಂತಿ-ಸೌಹಾರ್ದತೆಗೆ ಕಿಚ್ಚಿಡುತ್ತಿರುವ ಈ ಕಿರಾತಕರಿಗೂ ವ್ಯತ್ಯಾಸವೇ ಇಲ್ಲ. ತಿನ್ನುವ ಅನ್ನಕ್ಕೆ ಮಣ್ಣುಹಾಕಿ ಬದುಕಿಗೆ ಬೆಂಕಿ ಇಡುವ ಇಂಥ ಪ್ರವೃತ್ತಿ ಅನಾಗರಿಕ-ಅಸಹ್ಯ. ಕರ್ನಾಟಕವನ್ನು ಈ ದುಷ್ಟರು, ಶಿಲಾಯುಗದತ್ತ ಹಿಮ್ಮೆಟ್ಟಿಸುತ್ತಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ.


ಇದನ್ಣೂ ಓದಿ:  Amit Shah ಅವರಿಗೆ ಇಂಗ್ಲಿಷ್ ಬರಲ್ವಾ? ಹುಳಿ ಹಿಂಡುವ ಹೇಳಿಕೆ ಆಘಾತಕಾರಿ: HD Kumaraswamy


ಈ ನೀಚರಿಗೆ ತಕ್ಕ ಪಾಠ ಕಲಿಸಲೇಬೇಕು


ಈ ರಕ್ಕಸರು ಕಲ್ಲಂಗಡಿಯನ್ನು ರಸ್ತೆಗೆಸೆದು ನಾಶ ಮಾಡಿದ ಪರಿಯನ್ನು ಗಮಿನಿಸಿದರೆ ಸಾಕು; ಇವರ ರಾಕ್ಷಸ ಪ್ರವೃತ್ತಿ ಉಗ್ರರಿಗಿಂತ ಕಮ್ಮಿಯೇನಲ್ಲ. ಅನ್ನವನ್ನೇ ಹಾಳುಗೆಡವಿದ ಈ ನೀಚರಿಗೆ ತಕ್ಕ ಪಾಠ ಕಲಿಸಲೇಬೇಕು.ಇವರ ವಿರುದ್ಧ ಸರಕಾರವು ಕೂಡಲೇ ಭಯೋತ್ಪಾದನೆ ವಿರುದ್ಧದ ಕಾಯ್ದೆ ಅಡಿ ಕೇಸು ದಾಖಲಿಸಬೇಕು. ಸರ್ವ ಜನಾಂಗದ ತೋಟಕ್ಕೆ ಸಮಾಧಿ ಕಟ್ಟುವ ಕೆಲಸವನ್ನು ಬಿಜೆಪಿ ಸರಕಾರ ಮಾಡುತ್ತಿದೆಯಾ? ಎಂಬ ಸಂಶಯ ನನ್ನದು.


ʼಸತ್ತ ಸರಕಾರಕ್ಕೆ ನಾನೇ ಸಾಹುಕಾರʼ


ʼಮೌನಂ ಸಮ್ಮತಿ ಲಕ್ಷಣಂʼ ಎನ್ನುವಂತೆ ಸಿಎಂ ಬಸವರಾಜ ಬೊಮ್ಮಾಯಿ, ಬಾಯಿಗೆ ಬೀಗ ಹಾಕಿಕೊಂಡು; ʼಸತ್ತ ಸರಕಾರಕ್ಕೆ ನಾನೇ ಸಾಹುಕಾರʼ ಎನ್ನುವಂತೆ ಬೆಂಕಿ ನಡುವೆ ಪಿಟೀಲು ಬಾರಿಸುತ್ತಿದ್ದ ನೀರೋ ದೊರೆಯನ್ನು ಮೀರಿಸುತ್ತಿದ್ದಾರೆ.


ಆಂಜನೇಯನಿಂದ ಕಲಿತ ಆದರ್ಶ ಧರ್ಮ ಇದೆನಾ?


ಅನ್ನಕ್ಕೆ ಮಣ್ಣು ಹಾಕುವುದು ಯಾವ ಧರ್ಮ?, *ಬದುಕಿಗೆ ಬೆಂಕಿ ಇಡುವುದು ಯಾವ ಧರ್ಮ? ಮನುಷ್ಯತ್ವಕ್ಕೆ ಸಮಾಧಿ ಕಟ್ಟುವುದು ಯಾವ ಧರ್ಮ? ಮಾನವೀಯತೆಯ ಸಾಕಾರಮೂರ್ತಿ ಶ್ರೀರಾಮಚಂದ್ರನಿಂದ ಇವರು ಕಲಿತದ್ದು ಯಾವ ಧರ್ಮ? ಸೇವೆಯನ್ನೇ ಧರ್ಮವೆಂದು ನಂಬಿದ ಶ್ರೀ ಆಂಜನೇಯನಿಂದ ಇವರು ಕಲಿತ ಆದರ್ಶ ಧರ್ಮ ಇದೇನಾ ಎಂದು ಖಾರವಾಗಿ ಪ್ರಶ್ನೆ ಮಾಡಿದ್ದಾರೆ.ಇದನ್ನೂ ಓದಿ:  ಅರಗ ಜ್ಞಾನೇಂದ್ರ ಅಲ್ಲ, ಅರ್ಧ ಜ್ಞಾನಿ; ಕೋಮುವಾದ ಬಿತ್ತಲು ಬಿಜೆಪಿ ಪ್ರಯತ್ನ; Nalpad ವಾಗ್ದಾಳಿಇವರನ್ನ ರಾಜ್ಯದಿಂದ ಗಡಿಪಾರು ಮಾಡಿ


ನನ್ನ ಪ್ರಕಾರ ಇವರು ಹಿಂದೂಗಳೇ ಅಲ್ಲ, ಮನಷ್ಯರೂ ಅಲ್ಲ. ಧರ್ಮಾಂದತೆಯ ಮತ್ತಿನಲ್ಲಿ ತೇಲುತ್ತಿರುವ ಕ್ರೂರ ಮೃಗಗಳು. ಅಂಗಡಿಗಳನ್ನು ನಾಶಪಡಿಸಿ, ಕಲ್ಲಂಗಡಿಯನ್ನು ಹಾಳುಗೆಡವಿದ ಎಲ್ಲ ಕಿರಾತಕರ ವಿರುದ್ಧ ಸರಕಾರ ಕೂಡಲೇ ಕ್ರಿಮಿನಲ್ ಕೇಸು ದಾಖಲಿಸಬೇಕು, ರಾಜ್ಯದಿಂದಲೇ ಗಡೀಪಾರು ಮಾಡಬೇಕು ಎಂದು ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.

Published by:Mahmadrafik K
First published: