• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಶ್ರೀ ಕೃಷ್ಣನ ಅಗ್ರಪೂಜೆಗೆ ಶಿಶುಪಾಲನೂ ಹೀಗೆ ವಿರೋಧಿಸಿದ್ದ: Hamsalekha ಹೇಳಿಕೆಗೆ ಪೇಜಾವರ ಶ್ರೀಗಳ ಪ್ರತಿಕ್ರಿಯೆ

ಶ್ರೀ ಕೃಷ್ಣನ ಅಗ್ರಪೂಜೆಗೆ ಶಿಶುಪಾಲನೂ ಹೀಗೆ ವಿರೋಧಿಸಿದ್ದ: Hamsalekha ಹೇಳಿಕೆಗೆ ಪೇಜಾವರ ಶ್ರೀಗಳ ಪ್ರತಿಕ್ರಿಯೆ

ಪೇಜಾವರ ಶ್ರೀ

ಪೇಜಾವರ ಶ್ರೀ

ಇಂತಹ ಮಾತು ಹಂಸಲೇಖ (Music Director Hamsalekha) ಬಾಯಿಂದ ಬರಬಾರದಿತ್ತು. ಸಮಾಜ ಅವರನ್ನು ಎತ್ತರದಲ್ಲಿ ಇರಿಸಿ ಗೌರವಿಸುತ್ತದೆ. ಪ್ರಚಾರಕ್ಕೋಸ್ಕರ ಸಾಕಷ್ಟು ಮಂದಿ ಹೀಗೆ ಮಾಡುತ್ತಾರೆ. ಹಂಸಲೇಖ ಅವರಿಗೆ ಇದರಿಂದ ಪ್ರಚಾರ ಬೇಕಾಗಿರಲಿಲ್ಲ.

  • Share this:

ಉಡುಪಿ: ಪದ್ಮವಿಭೂಷಣ ಪ್ರಶಸ್ತಿ (Padma Vibhushan award) ಬಂದಿರುವುದು ನನ್ನ ಗುರುಗಳಿಗೆ (Sri Vishwesha Theertha Swamiji). ಹಾಗಾಗಿ ಹಂಸಲೇಖ ಅವರು ನನ್ನ ಗುರುಗಳನ್ನೇ ಟೀಕಿಸಿರಬೇಕು. ಇಂತಹ ಮಾತು ಹಂಸಲೇಖ (Music Director Hamsalekha) ಬಾಯಿಂದ ಬರಬಾರದಿತ್ತು. ಸಮಾಜ ಅವರನ್ನು ಎತ್ತರದಲ್ಲಿ ಇರಿಸಿ ಗೌರವಿಸುತ್ತದೆ. ಪ್ರಚಾರಕ್ಕೋಸ್ಕರ ಸಾಕಷ್ಟು ಮಂದಿ ಹೀಗೆ ಮಾಡುತ್ತಾರೆ. ಹಂಸಲೇಖ ಅವರಿಗೆ ಇದರಿಂದ ಪ್ರಚಾರ ಬೇಕಾಗಿರಲಿಲ್ಲ. ಶ್ರೀ ಕೃಷ್ಣನಿಗೆ (Lord Srikrishna) ಅಗ್ರಪೂಜೆ ನೀಡುವಾಗ ಶಿಶುಪಾಲನೂ (Shishupala) ಇದೇ ರೀತಿ ವಿರೋಧಿಸಿದ್ದ. ಶಿಶುಪಾಲನಿಗೆ ಕೃಷ್ಣನೇ ತಕ್ಕಶಾಸ್ತಿ  ಮಾಡಿದ್ದನು. ನನ್ನ ಗುರುಗಳು ಸಮಾಜದ ಎಲ್ಲರ ಹೃದಯದಲ್ಲಿ ಕಷ್ಣನನ್ನು ಕಂಡವರು. ಆದ್ದರಿಂದಲೇ ಅವರು ದಲಿತರ ಕೇರಿಗೂ (Dalita House) ಹೋಗುತ್ತಿದ್ದರು ಎಂದು ಸಂಗೀತ ನಿರ್ದೇಶಕ ಹಂಸಲೇಖ ಅವರ ಹೇಳಿಕೆಗೆ ಪೇಜಾವರ ಶ್ರೀಗಳು (Sri Vishwaprasanna Theertha Swamiji) ಉತ್ತರ ನೀಡಿದ್ದಾರೆ.


ಸಮಾಜದ ಎಲ್ಲರ ಉದ್ಧಾರವನ್ನು ವಿಶ್ವೇಶತೀರ್ಥರು ಬಯಸಿದ್ದರು. ಗುರುಗಳು ಜನರ ಹೃದಯದಲ್ಲಿ ಯಾವ ಕೃಷ್ಣನನ್ನು ಕಂಡಿದ್ದರೋ ಆ ಕೃಷ್ಣನೇ ಅದಕ್ಕೆ ಬೇಕಾದ ಪ್ರತಿಕಾರ ಮಾಡುತ್ತಾನೆ. ನಮ್ಮ ಉದ್ದೇಶ ಪ್ರಾಮಾಣಿಕವಾಗಿದೆ. ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲಿಸುವುದಿಲ್ಲ. ಯಾರ ಹೊಗಳಿಕೆಗೂ ನಾವು ಈ ಕೆಲಸವನ್ನು ಮಾಡಿದ್ದಲ್ಲ ಎಂದರು.


ಇದನ್ನೂ ಓದಿ: Bitcoin ಹಗರಣದಲ್ಲಿ ಭಾಗಿಯಾಗಿಲ್ಲವಾದರೆ BJP ನಾಯಕರು ಸಿಡಿಮಿಡಿಗೊಳ್ಳುತ್ತಿರುವುದು ಏಕೆ: Priyank Kharge ಪ್ರಶ್ನೆ


ದಲಿತರ ಜೊತೆ ನಾವು ಇದ್ದೇವೆ, ದಲಿತರು ನಮ್ಮಿಂದ ಹೊರತಲ್ಲ. ಈ ಐಕ್ಯ ಸಂದೇಶ ನೀಡುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ. ಗುರುಗಳ ಅಭಿಮಾನದಿಂದ ಯಾರಾದರೂ ಪ್ರತಿಭಟಿಸಿದರೆ ಅದು ಅವರವರ ವೈಯಕ್ತಿಕ ವಿಚಾರ. ನಾವಂತೂ ಯಾವುದೇ ಪ್ರತಿಭಟನೆ ನಡೆಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.


ಹಂಸಲೇಖ ಹೇಳಿದ್ದೇನು?


ಮೈಸೂರಿನಲ್ಲಿ ನಡೆದ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹೋಗಿದ್ದರು. ಈ ವೇಳೆ  'ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ..? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ..? ಲಿವರ್ ಫ್ರೈ ತಿಂತಾರಾ, ಆಗತ್ತಾ..? ಅಂದರೆ, ದಲಿತರ ಮನೆಗೆ  ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಅಂತ ಹೇಳಿಕೆ ನೀಡಿದ್ದರು.




ಇಷ್ಟೇ ಅಲ್ಲದೆ ದಲಿತರನ್ನು ಬಲಿತರು ತಮ್ಮ ಮನೆಗಳಿಗೆ ಕರೆದುಕೊಂಡು ಹೋಗಬೇಕು. ಅವರ ಮನೆಯಲ್ಲಿ ಊಟ ಹಾಕಬೇಕು, ದಲಿತರ ಮುಟ್ಟಿದ ಲೋಟಗಳನ್ನು ನಾವು ತೊಳೆಯುತ್ತೀವಿ ಎಂದು ಬಲಿತರು ಹೇಳಬೇಕು' ಎಂದು ಹಂಸಲೇಖ ಹೇಳಿದ್ದರು.


ಇದನ್ನೂ ಓದಿ:  Hamsalekha ಅವರೇ Muslim ಸ್ನೇಹಿತರನ್ನ ಕರೆಸಿ ಹಂದಿಮಾಂಸದ ಊಟ ಹಾಕಿ, ಅವರು ತಿನ್ನುತ್ತಾರಾ ನೋಡಿ: ಪ್ರತಾಪ್ ಸಿಂಹ


ಕ್ಷಮೆ ಕೇಳಿದ ಹಂಸಲೇಖ


ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಹಂಸಲೇಖ ಕ್ಷಮೆ ಕೇಳಿದ್ದಾರೆ. ಕ್ಷಮೆ ಕೇಳಿರುವ ವಿಡಿಯೋವನ್ನು ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. 'ಮೊದಲಿಗೆ ಕ್ಷಮೆ ಇರಲಿ, ಎರಡನೇದಾಗಿಯೂ ಕ್ಷಮೆ ಇರಲಿ.. ಎಲ್ಲ ಮಾತುಗಳು ವೇದಿಕೆಗೆ ಅಲ್ಲ ಅನ್ನೋದು ನನಗೆ ಗೊತ್ತಿದೆ, ತಪ್ಪು.




ಅದು ಒಂದು ಪ್ರಶಸ್ತಿ ಪುರಸ್ಕಾರ ಸಭೆ ಅದು. ಆ ವೇದಿಕೆ ಮೇಲೆ ನುಡಿದರೆ ಮುತ್ತಿನ ಹಾರದಂತೆ ಇರಬೇಕು ಎನ್ನುವಂತೆ ಇರಬೇಕಿತ್ತು. ನಾನು ಹಾಗೇ ಅಲಂಕರಿಸಬೇಕಿತ್ತು, ತಪ್ಪು. ಅಸ್ಪೃಶ್ಯತೆ ನಮ್ಮ ದೇಶಕ್ಕೆ ಅಂಟಿದ ಶಾಪ.  ಅಸ್ಪೃಶ್ಯತೆಯ ಅನಿಷ್ಟವನ್ನು ತೊಡೆದು ಹಾಕೋದಕ್ಕೆ ಪೇಜಾವರ ಶ್ರೀಗಳು ಸೇರಿದಂತೆ ಎಲ್ಲ ಗುರು-ಹಿರಿಯರು ಪ್ರಯತ್ನ, ಸಂಧಾನಗಳನ್ನು ಮಾಡುತ್ತಲೇ ಇದ್ದಾರೆ. ಆ ಪ್ರಯತ್ನ, ಸಂಧಾನಗಳ ಬಗ್ಗೆ ನನಗೆ ಅಪಾರವಾದ ಗೌರವ ಇದೆ.


ನಿಮ್ಮ ಮಸನ್ಸುಗಳಿಗೆ ತಪ್ಪಾಗಿದ್ದಾರೆ ಕ್ಷಮಿಸಿ


‘ನಾನು ಅಲ್ಲಿ ಆಡಿದ ಕೆಲ ಮಾತುಗಳು ನನ್ನ ಹೆಂಡತಿಗೂ ಇಷ್ಟವಾಗಲಿಲ್ಲ. ಆಕೆಯ ಕ್ಷಮೆಯನ್ನೂ ನಾನು ಕೇಳಿದ್ದೇನೆ. ನಾನು ಸಂಗೀತಗಾರ. ನನಗ್ಯಾಕೆ ಈ ಟ್ರೋಲ್. ಕಂಟ್ರೋಲ್ ಆಗಿರುವುದಷ್ಟೇ ನಮ್ಮ ಕೆಲಸ. ಯಾರ ಮನಸ್ಸನ್ನು ನೋಯಿಸುವ ಇಷ್ಟವಿಲ್ಲ. ನನ್ನ ಸಂಗೀತ ಹೇಗೆ ಎಲ್ಲರಿಗೂ ಸುಖ ಕೊಡುತ್ತದೆಯೋ, ನನ್ನ ಮಾತು, ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು. ನನ್ನ ಮಾತುಗಳಿಂದ ನಿಮ್ಮ ಮಸನ್ಸುಗಳಿಗೆ ತಪ್ಪಾಗಿದ್ದಾರೆ ಕ್ಷಮಿಸಿ ಎಂದು ಹಂಸಲೇಖ ಹೇಳಿದ್ದಾರೆ.

top videos
    First published: