ಕೃಷಿ ವಿರೋಧಿ ನೀತಿ ಹಾಗೂ ಕಾಯ್ದೆಗಳನ್ನ ವಿರೋಧಿಸಿ ವಿವಿಧ ರೈತ ಸಂಘಟನೆಗಳು ರಾಜ್ಯದಲ್ಲಿ ಪ್ರತಿಭಟನೆ ಮಾಡುತ್ತಿವೆ. ಇದೇ ವಿಷಯವಾಗಿ ಸೆ. 28ರಂದು ಕರ್ನಾಟಕ ಬಂದ್ ಮಾಡಲು ನಿರ್ಧರಿಸಲಾಗಿದೆ. ಆದರೆ ಅಖಿಲ ಭಾರತ ರೈತ ಸಂಘರ್ಷ ಸಮಿತಿ ಮಾತ್ರ ಈ ಬಂದ್ಗೆ ನಿರ್ಧಾರ ಮಾಡಿದೆ. ಉಳಿದ ರೈತ ಸಂಘಟನೆಗಳು ಇನ್ನೂ ಈ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ. ಇನ್ನು ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತಂತೆ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಕೆಲವರು ಇದು ರೈತ ವಿರೋಧಿ ಕಾಯ್ದೆ ಅಂದರೆ, ಮತ್ತೆ ಕೆಲವರು ಕಾಯ್ದೆಯಿಂದ ರೈತರಿಗೆ ಲಾಭಗಳೇ ಹೆಚ್ಚು ಎನ್ನುತ್ತಿದ್ದಾರೆ. ಈ ಕಾಯ್ದೆಯಲ್ಲಿರುವ ಅನುಕೂಲಗಳ ಬಗ್ಗೆ ಅರಿಯದೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕೆಲವರು ಟೀಕಿಸುತ್ತಿದ್ದಾರೆ. ಇನ್ನೂ ಕೆಲವರು ರಾಜಕೀಯ ಹಿತಾಸಕ್ತಿಯಿಂದಾಗಿ ರೈತರನ್ನು ಕೆಲವರು ದಾರಿ ತಪ್ಪಿಸುತ್ತಿದ್ದಾರೆ ಎಂದೂ ದೂರ ಲಾಗುತ್ತಿದೆ. ಈಗ ನಟ ಶ್ರೀಮುರಳಿ ಸಹ ರೈತರ ವಿಚಾರದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ರೋರಿಂಗ್ ಸ್ಟಾರ್ ಶ್ರೀಮುರಳಿ ಸದ್ಯ ಮದಗಜ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಬಿಡುವು ಮಾಡಿಕೊಂಡು ರೈತರ ಪರವಾಗಿ ಒಂದು ಟ್ವೀಟ್ ಮಾಡಿದ್ದಾರೆ.
'ಒಂದಿಲ್ಲೊಂದು ರೂಪದಲ್ಲಿ ನಾವೆಲ್ಲ ಕೃಷಿ ಹಿನ್ನೆಲೆಯಿಂದಲೇ ಬಂದವರು. ರಾಜಕಾರಣಿಯೋ, ಕಲಾವಿದರೋ ಅಥವಾ ಉದ್ಯಮಿಯೋ, ಅದು ಯಾರೇ ಆದರೂ ಸರಿ, ರೈತರು ತಮ್ಮ ಜಮೀನುಗಳಲ್ಲಿ ಕಷ್ಟಪಟ್ಟು ಬೆವರು ಹರಿಸಿ ಬೆಳೆ ಬೆಳೆದರೆ ಮಾತ್ರ ನಾವೆಲ್ಲ ಅಚ್ಚುಕಟ್ಟಾಗಿ ಕುಳಿತು ಭೋಜನ ಸವಿಯುವುದು. ಹಾಗಾಗಿ ಯಾರೇ ಆದರೂ ಸರಿ, ರೈತರ ಬಗ್ಗೆ ಅಗೌರವ ತೋರುವುದು ಸರಿಯಲ್ಲ' ಎಂದು ಟ್ವೀಟ್ ಮಾಡಿದ್ದಾರೆ ಶ್ರೀಮುರಳಿ.
ಇದನ್ನೂ ಓದಿ: ಯಥರ್ವ್-ಆಯ್ರಾಳ ಮುದ್ದಾದ ಹೊಸ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್..!
ಕರ್ನಾಟಕ ಬಂದ್ಗೆ ಕರೆ ನೀಡುವ ವಿಷಯದಲ್ಲಿ ರೈತ ಸಂಘಟನೆಗಳ ನಡುವೆಯೇ ಒಡಕು ಇರುವುದು ಸ್ಪಷ್ಟವಾಗಿದೆ. ಆದರೆ, ಮೂಲಗಳ ಪ್ರಕಾರ ಸೆ. 28ರಂದು ಕರ್ನಾಟಕ ಬಂದ್ಗೆ ಬಹುತೇಕ ಎಲ್ಲ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಬೆಂಬಲ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಾಳೆ ಈ ಬಗ್ಗೆ ಅಂತಿಮ ಚಿತ್ರಣ ಸಿಗುವ ನಿರೀಕ್ಷೆ ಇದೆ.
ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿರುವುದು ರಾಜ್ಯದ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕಾಯ್ದೆಗಳು ರೈತ ವಿರೋಧಿಯಾಗಿದ್ದು, ರೈತರ ಬೆನ್ನೆಲುಬು ಮುರಿಯುತ್ತವೆ ಎಂದು ವಿವಿಧ ರೈತ ಸಂಘಟನೆಗಳ ಮುಖಂಡರು ಪ್ರತಿಭಟಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದಲೂ ಪ್ರತಿಭಟನೆ ನಡೆಯುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ