• Home
  • »
  • News
  • »
  • state
  • »
  • Dattapeetha: ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬರುತ್ತಿದೆ; ಶ್ರೀರಾಮಸೇನೆಯ ರಾಜ್ಯ ಕಾರ್ಯಾಧ್ಯಕ್ಷ

Dattapeetha: ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬರುತ್ತಿದೆ; ಶ್ರೀರಾಮಸೇನೆಯ ರಾಜ್ಯ ಕಾರ್ಯಾಧ್ಯಕ್ಷ

ಶ್ರೀರಾಮಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ

ಶ್ರೀರಾಮಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ

ಪ್ರತಿ ವರ್ಷ ಬರೋದು, ಹೆಣ ಇಲ್ಲದ ಗೋರಿ ನೋಡೋದು ವಾಪಸ್ ಹೋಗೋದು ಆಗಿದೆ. ಎಚ್ಚರಿಕೆ ನೀಡಿ ಬೇಜಾರು ಮತ್ತು ಆಕ್ರೋಶವಾಗಿದೆ. ನಮಗೆ ಈ‌ ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬರುತ್ತಿದೆ ಎಂದು ಹೇಳಿದರು.

  • Share this:

ಇಂದು ಚಿಕ್ಕಮಗಳೂರು ನಗರದ ಶಂಕರ ಮಠದಲ್ಲಿ (Shankara Mutt, Chikkamagaluru) 18ನೇ ವರ್ಷದ ಶ್ರೀರಾಮ ಸೇನೆಯ ದತ್ತಮಾಲಾ ಅಭಿಯಾನಕ್ಕೆ (Dattamala Campaign) ಚಾಲನೆ ನೀಡಲಾಯ್ತು. ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ (Gangadhara Kulkarni) ಸೇರಿದಂತೆ 50ಕ್ಕೂ ಹೆಚ್ಚು ಶ್ರೀರಾಮಸೇನೆಯ ಕಾರ್ಯಕರ್ತರಿಂದ (Srirama sena activist) ಮಾಲಾಧಾರಣೆ ಮಾಡಿಕೊಂಡರು. ಇಂದಿನಿಂದ ಏಳು ದಿನ ದತ್ತಮಾಲಾ ಅಭಿಯಾನ ನಡೆಯಲಿದೆ. ಮಾಲಾಧಾರಿಗಳು ನವೆಂಬರ್ 13 ರಂದು ದತ್ತಪೀಠದಲ್ಲಿ (Datta Peetha) ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಬಿಜೆಪಿ ಸರ್ಕಾರದ (BJP Government) ವಿರುದ್ಧ ವಾಗ್ದಾಳಿ ನಡೆಸಿದರು.


ಪ್ರತಿ ವರ್ಷ ಬರೋದು, ಹೆಣ ಇಲ್ಲದ ಗೋರಿ ನೋಡೋದು ವಾಪಸ್ ಹೋಗೋದು ಆಗಿದೆ. ಎಚ್ಚರಿಕೆ ನೀಡಿ ಬೇಜಾರು ಮತ್ತು ಆಕ್ರೋಶವಾಗಿದೆ. ನಮಗೆ ಈ‌ ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬರುತ್ತಿದೆ ಎಂದು ಹೇಳಿದರು.


ಹಿಂದೂ ಅರ್ಚಕರನ್ನು ನೇಮಿಸಿ


ಧರ್ಮದ ವಿಚಾರದಲ್ಲಿ ಡ್ರಾಮಾ ಒಳ್ಳೆಯದು ಅಲ್ಲ, ತಕ್ಷಣ ಏನಾದ್ರು ಆಗಲಿ ಎಂದು ಗಟ್ಟಿ ನಿರ್ಧಾರ ಮಾಡಿ. ಕೂಡಲೇ ದತ್ತಪೀಠವನ್ನ ಹಿಂದೂಗಳ ಪೀಠವೆಂದು ಆದೇಶಿಸಿ, ಹಿಂದೂ ಅರ್ಚಕರ ನೇಮಿಸಬೇಕು ಎಂದು ಗಂಗಾಧರ ಕುಲಕರ್ಣಿ ಆಗ್ರಹಿಸಿದರು.


ನವೆಂಬರ್ 13ನೇ ತಾರೀಖಿನೊಳಗೆ ಅರ್ಚಕರ ನೇಮಿಸದಿದ್ದರೆ ಪರಿಸ್ಥಿತಿ ಕಠಿಣವಾಗುತ್ತದೆ. ಹೇಗೆ ಬಿಜೆಪಿ ಅಧ್ಯಕ್ಷರ ಕಾರ್ ಅಲುಗಾಡಿತ್ತೋ, ಅದೇ ರೀತಿ ಸರ್ಕಾರ ಅಲುಗಾಡುತ್ತೆ ಎಂದು ಎಚ್ಚರಿಕೆ ಸಂದೇಶ ನೀಡಿದರು.


ಸಿಎಂ ಸ್ಥಾನ ಕಳೆದುಕೊಳ್ಳಬೇಕಾಗುತ್ತೆ


ದತ್ತಪೀಠವನ್ನ ಹಿಂದೂಗಳಿಗೆ ಒಪ್ಪಿಸದಿದ್ದರೆ ಯಡಿಯೂರಪ್ಪರ (Former CM BS Yediyurappa) ಪೀಠ ಹೋಗುತ್ತೆ ಎಂದು ಹೇಳಿದ್ದೆ ದತ್ತ ಗುರುಗಳ ಶಾಪದಿಂದ ಯಡಿಯೂರಪ್ಪ ಪೀಠ ಕಳೆದುಕೊಂಡರು. ಈಗ ಸಿಎಂ ಬಸವರಾಜ್ ಬೊಮ್ಮಾಯಿಗೂ (CM Basavaraj Bommai) ಹೇಳ್ತಿದ್ದೀವಿ, ಮುಂದೆ ಸರ್ಕಾರ ಬರಬೇಕಂದ್ರೆ ತಕ್ಷಣ ದತ್ತಪೀಠವನ್ನ ಹಿಂದುಗಳಿಗೆ ಒಪ್ಪಿಸಿ ಎಂದು ಒತ್ತಾಯಿಸಿದರು. ಇಲ್ಲವಾದರೆ, ಯಡಿಯೂರಪ್ಪನವರಿಗೆ ಆದ ಪರಿಸ್ಥಿತಿಯೇ ನಿಮಗೂ ಆಗುತ್ತೆ ಎಂದು ಭವಿಷ್ಯ ನುಡಿದರು.


ಇದನ್ನೂ ಓದಿ:  Datta Peetha: ದತ್ತಪೀಠದ ಹೋಮ ನಡೆಯುವ ಪವಿತ್ರ ಜಾಗದಲ್ಲಿ ಮಾಂಸಾಹಾರ! ಗೋರಿಗೆ ಅರ್ಪಿಸಿದರಾ ಕಿಡಿಗೇಡಿಗಳು?


ತುಳಸಿ ಕಟ್ಟೆ ಜಾಗದಲ್ಲಿ ಹೋಮಕ್ಕೆ ಭಜರಂಗದಳ ಪಟ್ಟು


ಹಿಂದೂ ಸಂಘಟನೆಗಳು (Hindu Organization) ಈ ಬಾರಿಯ ದತ್ತ ಜಯಂತಿಯಲ್ಲಿ (Datta Jayanti) ನಾವು ಮಂಟಪದಲ್ಲಿ ಹೋಮ ಮಾಡಲ್ಲ ಎಂದು ಚಿಕ್ಕಮಗಳೂರು (Chikkamagluru) ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.


ಈ ಹಿಂದೆ ಹೇಗೆ ತುಳಸಿಕಟ್ಟೆ ಇದ್ದ ಜಾಗದಲ್ಲಿ ಹೋಮ ನಡೆಯುತ್ತಿತ್ತೋ ಅದೇ ಜಾಗದಲ್ಲಿ ಈ ವರ್ಷ ಹೋಮ ಮಾಡುತ್ತೇವೆ. ಹೋಮ ಮಂಟಪ ಅಪವಿತ್ರವಾಗಿದೆ. ಆ ಜಾಗದಲ್ಲಿ ಹೋಮ ಮಾಡಲ್ಲ ಎಂದು ಜಿಲ್ಲಾಡಳಿತಕ್ಕೆ ತಿಂಗಳ ಮುಂಚೆಯೇ ಭಜರಂಗದಳ ಕಾರ್ಯಕರ್ತರು (Bhajarangadala Activist) ಎಚ್ಚರಿಕೆ ನೀಡಿದ್ದಾರೆ.


ಭಜರಂಗದಳ ಪತ್ರ


ನವೆಂಬರ್ 28ರಿಂದ ಆರಂಭವಾಗುವ ದತ್ತಜಯಂತಿ ಎಂಟು ದಿನಗಳ ಕಾಲ ನಡೆಯಲಿದ್ದು ಡಿಸೆಂಬರ್ 8ನೇ ತಾರೀಖಿನಂದು ಹೋಮ ಮಂಟಪದಲ್ಲಿ (Homa Mantapa) ಹೋಮ ಮಾಡೋದಿಲ್ಲ. ತುಳಸಿಕಟ್ಟೆಯೇ ಬಳಿ ಮಾಡೋದು ಎಂದು ಸರ್ಕಾರಕ್ಕೆ ನೇರವಾಗಿ ಎಚ್ಚರಿಕೆ ನೀಡಿದ್ದು, ನಮಗೆ ಹೋಮ ಮಾಡಲು ಬೇರೆ ಜಾಗ ಕೊಡಿ ಎಂದು ತಿಂಗಳ ಮುಂಚೆಯೇ ಭಜರಂಗದಳ ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ಬಿ ಎಸ್ ಯಡಿಯೂರಪ್ಪಗೆ ದತ್ತಾತ್ರೇಯನ ಶಾಪ ಇದೆ, ಶಾಪ ವಿಮೋಚನೆಗೆ ದತ್ತಪೀಠಕ್ಕೆ ಬರಬೇಕು: ಗಂಗಾಧರ್ ಕುಲಕರ್ಣಿ


ಹೋಮದ ವಿಚಾರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಅನ್ನೋದು ಭಜರಂಗದಳದ ಉದ್ದೇಶ. ಅದಕ್ಕೆ ಜಿಲ್ಲಾಡಳಿತ ಕೂಡ ಬೆಂಬಲಿಸಲಿ ಎಂದು ಮನವಿ ಮಾಡಿದ್ದಾರೆ.

Published by:Mahmadrafik K
First published: