ಎಡಪಂಥೀಯರ ವಿರುದ್ಧ ನ್ಯಾಯಾಲಯದಲ್ಲಿ ಶೀಘ್ರದಲ್ಲಿ ಪ್ರಕರಣ ದಾಖಲು: ಶ್ರೀರಾಮ ಸೇನೆ ಮುಖಂಡ


Updated:August 31, 2018, 4:46 PM IST
ಎಡಪಂಥೀಯರ ವಿರುದ್ಧ ನ್ಯಾಯಾಲಯದಲ್ಲಿ ಶೀಘ್ರದಲ್ಲಿ ಪ್ರಕರಣ ದಾಖಲು: ಶ್ರೀರಾಮ ಸೇನೆ ಮುಖಂಡ

Updated: August 31, 2018, 4:46 PM IST
ಮಹೇಶ ವಿ. ಶಟಗಾರ, ನ್ಯೂಸ್ 18 ಕನ್ನಡ

ವಿಜಯಪುರ(ಆ. 31): ಪತ್ರಕರ್ತೆ ಗೌರಿ ಲಂಕೇಶ ಕೊಲೆ ಪ್ರಕರಣ ಸಂಬಂಧ ವಿನಾಕಾರಣ ಹಿಂದೂ ಸಂಘಟನೆಗಳ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದ್ದು, ಅಂಥ ಸಂಘಟನೆ ಮತ್ತು ಮುಖಂಡರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ಮುಖಂಡ ನೀಲಕಂಠ ಕಂದಗಲ್ ತಿಳಿಸಿದ್ದಾರೆ.

ವಿಜಯಪುರದಲ್ಲಿ ನಾನಾ ಹಿಂದೂಪರ ಸಂಘಟನೆಗಳ ಮುಖಂಡರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರಿ ಲಂಕೇಶ ಕೊಲೆ ಪ್ರಕರಣದಲ್ಲಿ ಸನಾತನ ಸಂಸ್ಥೆ ವಿರುದ್ಧ ಎಡಪಂಥಿಯರಿಂದ ಅಪಪ್ರಚಾರ ನಡೆಯುತ್ತಿದೆ. ಇದನ್ನು ಖಂಡಿಸಿ ನಾಳೆ ನಾನಾ ಹಿಂದೂ ಪರ ಸಂಘಟನೆಗಳಿಂದ ವಿಜಯಪುರದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಎಡಪಂಧೀಯ ಮುಖಂಡರು ಹಿಂದೂ ಪರ ಸಂಘಟನೆಗಳು ಹಾಗೂ ಸನಾತನ ಸಂಸ್ಥೆಯನ್ನು ನಿಷೇಧ ಮಾಡುವ ಹುನ್ನಾರ ನಡೆಸಿದ್ದಾರೆ. ಸಿಂದಗಿಯ ಪಾಕಿಸ್ತಾನ ದ್ವಜ ಹಾರಿಸಿದ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿತ್ತು. ನ್ಯಾಯಾಲಯ ಆರೋಪ ಮುಕ್ಯಗೊಳಿಸಿದೆ. ಇಂಥ ಅನೇಕ ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾಗಿದ್ದರೂ, ಎಡಪಂಥೀಯ ಮುಖಂಡರು ಅಪಪ್ರಚಾರ ನಡೆಸುತ್ತಿದ್ದಾರೆ. ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸಲಾಗಿದೆ, ಅವರಿಗೆ ಹಿಂಸೆ ನೀಡಿರುವ ಎಸ್‌ಐಟಿ ಪೊಲೀಸರು ತಮಗೆ ಬೇಕಾದ ರೀತಿಯಲ್ಲಿ ಹೇಳಿಕೆಗಳನ್ನು ಬರೆಯಿಸಿಕೊಂಡಿದ್ದಾರೆ, ಬಂಧಿತರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ಕಾಯ್ದೆಯಡಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಹಿಂದೂ ಪರ ಸಂಘಟನೆಗಳ ಮೇಲೆ ಸುಳ್ಳು ಆರೋಪ ಮಾಡುವವರ ವಿರುದ್ಧ ಒಂದು ತಿಂಗಳಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
First published:August 31, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ