ಡಿಸಿಎಂ ಸ್ಥಾನ ಸಿಗದಿದ್ದಕ್ಕೆ ಬೇಸರವಿಲ್ಲ; ಪ್ರಮಾಣವಚನ ಗೈರಾಗುವುದಕ್ಕೆ ಕಾರಣ ಬೇರೆ ಎಂದು ಶ್ರೀರಾಮುಲು

ಉಪಮುಖ್ಯ ಮಂತ್ರಿ ಸ್ಥಾನ ಸಿಗದಕ್ಕೆ ಯಾವುದೇ ಅಸಮಾಧಾನವಿಲ್ಲ, ಬೇರೆ ಪಕ್ಷದಿಂದ ಶಾಸಕರು ಬರುವಾಗಲೇ ಅವರಿಗೆ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು. ಅದರಂತೆ ನಾವು ನಡೆದುಕೊಂಡಿದ್ದೇವೆ. ನಾನು ಕಾರ್ಯಕ್ರಮದಿಂದ ಹೊರಗುಳಿದಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ

Seema.R | news18-kannada
Updated:February 6, 2020, 12:57 PM IST
ಡಿಸಿಎಂ ಸ್ಥಾನ ಸಿಗದಿದ್ದಕ್ಕೆ ಬೇಸರವಿಲ್ಲ; ಪ್ರಮಾಣವಚನ ಗೈರಾಗುವುದಕ್ಕೆ ಕಾರಣ ಬೇರೆ ಎಂದು ಶ್ರೀರಾಮುಲು
ಉಪಮುಖ್ಯ ಮಂತ್ರಿ ಸ್ಥಾನ ಸಿಗದಕ್ಕೆ ಯಾವುದೇ ಅಸಮಾಧಾನವಿಲ್ಲ, ಬೇರೆ ಪಕ್ಷದಿಂದ ಶಾಸಕರು ಬರುವಾಗಲೇ ಅವರಿಗೆ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು. ಅದರಂತೆ ನಾವು ನಡೆದುಕೊಂಡಿದ್ದೇವೆ. ನಾನು ಕಾರ್ಯಕ್ರಮದಿಂದ ಹೊರಗುಳಿದಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ
  • Share this:
ಕೊಡಗು (ಫೆ.06): ಉಪಚುನಾವಣೆಯಲ್ಲಿ ಗೆದ್ದ 10 ಜನ ಅರ್ಹ ಶಾಸಕರು ಬಿಎಸ್​ ಯಡಿಯೂರಪ್ಪ ಸಂಪುಟದಲ್ಲಿ ನೂತನ ಮಂತ್ರಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಈ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮೂಲ ಬಿಜೆಪಿಗರ ಗೈರು ಎದ್ದು ಕಾಣುತ್ತಿತ್ತು. ಶ್ರೀರಾಮುಲು, ಈಶ್ವರಪ್ಪ ಸೇರಿದಂತೆ 20ಕ್ಕೂ ಅಧಿಕ ಮಂದಿ ನಾಯಕರು ಕಾರ್ಯಕ್ರಮಕ್ಕೆ ಹಾಜರಾಗದಿರುವುದು ಹಲವು ಅನುಮಾನಗಳ ಜೊತೆ ನೂತನ ಸಚಿವರ ಬಗ್ಗೆಗ್ಗಿನ ಅಸಮಾಧಾನವನ್ನು ತೋರುತ್ತಿತ್ತು. 

ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಉಪಮುಖ್ಯ ಮಂತ್ರಿ ಸ್ಥಾನ ಸಿಗದಕ್ಕೆ ಯಾವುದೇ ಅಸಮಾಧಾನವಿಲ್ಲ, ಬೇರೆ ಪಕ್ಷದಿಂದ ಶಾಸಕರು ಬರುವಾಗಲೇ ಅವರಿಗೆ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು. ಅದರಂತೆ ನಾವು ನಡೆದುಕೊಂಡಿದ್ದೇವೆ. ನಾನು ಕಾರ್ಯಕ್ರಮದಿಂದ ಹೊರಗುಳಿದಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಸ್ಪಷ್ಟನೆ ನೀಡಿದರು.

ಅಲ್ಲದೇ ತಮ್ಮ ಮಗಳ ಮದುವೆ ತಯಾರಿ ನಡೆಯುತ್ತಿದ್ದು, ಆ ಕೆಲಸದಲ್ಲಿ ಮಗ್ನ ನಾಗಿದ್ದೇನೆ. ಗಣ್ಯರ ಆಹ್ವಾನ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿರುವುದರಿಂದ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಿಲ್ಲ ಎಂದು ಸಮಾಜಾಯಿಷಿ ನೀಡಿದರು.

ಪಕ್ಷದಲ್ಲಿ ಮೂಲ ಬಿಜೆಪಿಗರು, ವಲಸಿಗ ಬಿಜೆಪಿಗರು ಎನ್ನುವ ಪ್ರಶ್ನೆಯೇ ಇಲ್ಲ. ಅವರೆಲ್ಲರೂ ಪಕ್ಷದ ಸದಸ್ಯತ್ವ ಪಡೆದು ಚುನಾವಣೆಯಲ್ಲಿ ಗೆದ್ದು ಬಂದಿದ್ದಾರೆ. ಅವರಿಗೆ ಸಚಿವ ಸ್ಥಾನ ಕೊಡಲಾಗುತ್ತಿದೆ, ನಮ್ಮ ನಾಯಕರಾದ ಯಡಿಯೂರಪ್ಪನವರು ಅದನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ನಾವೆಲ್ಲಾ ಒಂದೇ ಪಕ್ಷದವರು ಎಂದರು.

ಇದನ್ನು ಓದಿ: ನಾಟ್​ ರೀಚಬಲ್​ ಆದ ಮಹೇಶ್​ ಕುಮಟಳ್ಳಿ ; ಕೆಳ ಬಿದ್ದ ಹೂ ಅರಳುವುದಿಲ್ಲ ಎಂದು ನಿಗೂಢವಾಗಿ ಬರೆದ ಅಥಣಿ ಶಾಸಕ

ಇನ್ನು ಡಿಸಿಎಂ ಸ್ಥಾನಕ್ಕಾಗಿ ಲಾಬಿ ಮಾಡಿದರೂ ಈ ಸ್ಥಾನ ಕೈ ತಪ್ಪಿದ ಬಗ್ಗೆ ಪ್ರತಿಕ್ರಿಯಿಸಿದರ ಅವರು, ಇದು ನಮ್ಮ ಸಮುದಾಯದ ಬೇಡಿಕೆಯಾಗಿತ್ತು. ಈ ಬಗ್ಗೆ ಪಕ್ಷ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
First published:February 6, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading