SSLC, PUC Exam Time Table | ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ ‌ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯ ಮೌಲ್ಯಮಾಪನವನ್ನು ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಸುರೇಶ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಬೆಂಗಳೂರು; ಕೊರೋನಾ ಆತಂಕದಲ್ಲಿಯೇ ಕಳೆದ ಒಂದು ವರ್ಷದ ಬಳಿಕ ಶಾಲೆ, ಕಾಲೇಜುಗಳು ಆರಂಭವಾಗಿದೆ. ಏತನ್ಮಧ್ಯೆ 2020-21ರ ಶೈಕ್ಷಣಿಕ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್  ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

    ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಠ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.

    ಇದನ್ನು ಓದಿ: ಮೈಸೂರಿನಲ್ಲಿ ಹಕ್ಕಿಜ್ವರ ಭೀತಿ: ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದೇನು?

    ಒಂದರಿಂದ ಒಂಬತ್ತಕ್ಕೆ ಪಠ್ಯ ಕಡಿತವಿಲ್ಲ:

    ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ ‌ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯ ಮೌಲ್ಯಮಾಪನವನ್ನು ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಸುರೇಶ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
    Published by:HR Ramesh
    First published: