ಈ ವರ್ಷದ ಎಸ್ಎಸ್ಎಲ್ ಸಿ ಫಲಿತಾಂಶ (SSLC Results) ಮೇ 19ರಂದು ಪ್ರಕಟವಾಗಲಿದೆ. ಈಗಾಗಲೇ ಶಿಕ್ಷಣ ಇಲಾಖೆ (Education Department) ಪರೀಕ್ಷೆಯ ಕೀ ಉತ್ತರಗಳನ್ನು (Key Answer) ಪ್ರಕಟಿಸಿದೆ. ವಿದ್ಯಾರ್ಥಿಗಳಿಗೆ (Students) ತಮಗೆ ಎಷ್ಟು ಅಂಕ ಸಿಗಬಹುದು ಎಂದು ಅಂದಾಜು ಮಾಡಿಕೊಂಡಿದ್ದಾರೆ. ಫಲಿತಾಂಶ ಬಂದ ಬಳಿಕ ಕೆಲ ವಿದ್ಯಾರ್ಥಿಗಳು ತಮಗೆ ಅಂಕಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಮರು ಮೌಲ್ಯಮಾಪನಕ್ಕೆ (Re Valuation) ಮುಂದಾಗುತ್ತಾರೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಮುನ್ನ ಉತ್ತರ ಪತ್ರಿಕೆಯ ನಕಲು ಪ್ರತಿ (Answer Paper Duplicate Copy) ಪಡೆದುಕೊಳ್ಳಬೇಕು. ಇದರಲ್ಲಿ ಎಲ್ಲಿ ಅಂಕಗಳು ಹೆಚ್ಚು ಕಡಿತವಾಗಿದೆ ಎಂಬುವುದು ಗೊತ್ತಾಗಲಿದೆ. ಈಗ ವಿದ್ಯಾರ್ಥಿಗಳು ಮನೆಯಲ್ಲಿಯೇ ಕುಳಿತು ಮೂರು ದಿನದಲ್ಲಿ ಉತ್ತರ ಪತ್ರಿಕೆಯನ್ನು ಪಡೆದುಕೊಳ್ಳಬಹುದು.
ಇಲಾಖೆಯ ವೆಬ್ ಸೈಟ್ ನಲ್ಲಿ ಉತ್ತರ ಪತ್ರಿಕೆ ಲಭಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮುಂದಾಗಿದೆ. ಇದರಿಂದ ವಿದ್ಯಾರ್ಥಿಗಳ ಇ-ಮೇಲ್ ಗೆ ಉತ್ತರ ಪತ್ರಿಕೆ ಕಳುಹಿಸಲು ಆಗುತ್ತಿದ್ದ ತಾಂತ್ರಿಕ ತೊಂದರೆಗಳು ಈ ವ್ಯವಸ್ಥೆಯಿಂದ ದೂರವಾಗಲಿದೆ.
ಉತ್ತರ ಪತ್ರಿಕೆ ನಕಲು ಪ್ರತಿ ಹೀಗೆ ಪಡೆದುಕೊಳ್ಳಿ
*ಮರು ಮೌಲ್ಯಮಾಪನ ಅಥವಾ ಮರು ಎಣಿಕೆ ಬಯಸುವ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ನೋಂದಣಿ ಸಂಖ್ಯೆ ಮತ್ತು ಒಟಪಿ ಹೋಗಲಿದೆ. ಈ ಮೂಲಕ ವಿದ್ಯಾರ್ಥಿಗಳ ಹೆಸರಿನಲ್ಲಿ ಲಾಗ್ ಇನ್ ಕ್ರಿಯೇಟ್ ಆಗಲಿದೆ.
*ಕ್ರಿಯೇಟ್ ಆಗಿರುವ ಲಾಗಿನ್ ಗೆ ಪರೀಕ್ಷಾ ಮಂಡಳಿ ವಿದ್ಯಾರ್ಥಿ ಹೇಳಿದ ಉತ್ತರ ಪತ್ರಿಕೆಯನ್ನು ಅಪ್ಲೋಡ್ ಮಾಡುತ್ತದೆ.
*ಆ ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಮತ್ತು ಓಟಿಪಿ ದಾಖಲಿಸಿಬೇಕು. ನಂತರ ಅಲ್ಲಿರುವ ನಕಲು ಪ್ರತಿಯನ್ನು ಡೌನ್ ಲೌಡ್ ಮಾಡಿಕೊಳ್ಳಬೇಕು.
ಇದನ್ನೂ ಓದಿ: Kodagu: ಕರ್ನಾಟಕ ಲ್ಯಾಂಡ್ ರೆವೆನ್ಯೂ ಆಕ್ಟ್ಗೆ ತಿದ್ದುಪಡಿ; ರೈತರಲ್ಲಿ ನೆಮ್ಮದಿ ಮೂಡಿಸಿದೆ; R Ashok
ಈ ಮೊದಲು ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು ಸ್ಕ್ಯಾನ್ ಮಾಡಿ ಅಂಚೆ ಮೂಲಕ ಕಳುಹಿಸಲಾಗುತ್ತಿತ್ತು. ಈ ವ್ಯವಸ್ಥೆ ತುಂಬಾ ಸಮಯ ತೆಗೆದುಕೊಳ್ಳುತ್ತಿತ್ತು. ಕಳೆದ 4 ವರ್ಷಗಳಿಂದ ವಿದ್ಯಾರ್ಥಿಗಳ ಮೇಲ್ ಗೆ ಉತ್ತರ ಪತ್ರಿಕೆಯನ್ನ ಕಳುಹಿಸಲಾಗುತ್ತಿದೆ. ಇದೀಗ ಈ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಣೆಗೊಳಿಸಲಾಗುತ್ತಿದೆ.
ಯಾಕೆ ಈ ಬದಲಾವಣೆ?
ಕಳೆದ 4 ವರ್ಷಗಳಿಂದ ಮರು ಮೌಲ್ಯಮಾಪನ ಮತ್ತು ಮರು ಎಣಿಕೆ ಬಯಸುವ ವಿದ್ಯಾರ್ಥಿಗಳ ಮೇಲ್ ಗೆ ಉತ್ತರ ಪತ್ರಿಕೆ ಹೋಗುತ್ತಿತ್ತು. ಆದ್ರೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ವೇಳೆ ಮೇಲ್ ಐಡಿ ತಪ್ಪಾಗಿ (ಸ್ಪೆಲಿಂಗ್ ಎರರ್) ನಮೂದಿಸೋದು ಕಂಡು ಬಂದಿದೆ. ಈ ಹಿನ್ನೆಲೆ ಹೊಸ ಬದಲಾವಣೆ ತರಲಾಗುತ್ತಿದೆ.
ಈ ಹೊಸ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ನೇರವಾಗಿ ಇಲಾಖೆಯ ವೆಬ್ ಸೈಟ್ ಗೆ ಹೋಗಿ ಉತ್ತರ ಪತ್ರಿಕೆಯನ್ನು ಪಡೆದುಕೊಳ್ಳಬಹುದಾಗಿದೆ.
ಈ ಬಾರಿ ಸಿಗಲಿದೆ ಗ್ರೇಸ್ ಮಾರ್ಕ್ಸ್
ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿರುವ ಯಾವುದಾದರೂ ಮೂರು ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿನ ಶೇ.10 ಕೃಪಾಂಕಗಳನ್ನು ಅಗತ್ಯವಾರು ಹಂಚಿಕೆ ಮಾಡಿದಾಗ ವಿದ್ಯಾರ್ಥಿ ಪಾಸಾಗುವುದಾದರೆ ಮಾತ್ರ ಇದರ ಉಪಯೋಗ ಸಿಗಲಿದೆ.
ಪರೀಕ್ಷೆ ಬರೆದಿರುವ ಆರು ವಿಷಯಗಳ ಪೈಕಿ ಮೂರು ವಿಷಯಗಳಲ್ಲಿ ಉತ್ತೀರ್ಣರಾಗಿದ್ದು, ಇನ್ನುಳಿದ ಮೂರು ವಿಷಯಗಳಲ್ಲಿ ಅನುತ್ತಿರ್ಣವಾಗಿದ್ದರೆ ಆ ಮೂರು ವಿಷಯಗಳಲ್ಲಿ ಥಿಯರಿ ಪರೀಕ್ಷೆಯ ತಲಾ 80 ಅಂಕದ ಶೇ.10ರಷ್ಟು ಅಂದರೆ ಮೂರು ವಿಷಯಗಳಿಂದ 24 ಅಂಕಗಳು ಗ್ರೇಸ್ ಅಂಕಗಳಾಗಿ ದೊರೆಯುತ್ತವೆ.
ಇದನ್ನೂ ಓದಿ: PSI ದೈಹಿಕ ಪರೀಕ್ಷೆಯಲ್ಲಿಯೂ ಅಕ್ರಮ: ಹುಬ್ಬಳ್ಳಿ ಯುವಕನ ವಶಕ್ಕೆ ಪಡೆದ CID
ಗ್ರೇಸ್ ಮಾರ್ಕ್ಸ್ ಹಂಚಿಕೆ ಮಾಡುವುದು ಹೇಗೆ?
ಕನ್ನಡ ಭಾಷಾ ವಿಷಯಕ್ಕೆ 100 ಅಂಕಗಳಿಗೆ ಥಿಯರಿ ಪರೀಕ್ಷೆ ಇರುವುದರಿಂದ ಶೇ.10 ಅಂದರೆ 10 ಅಂಕಗಳಾಗುತ್ತದೆ. ಹಾಗಾಗಿ ಅನುತ್ತೀರ್ಣ ವಿಷಯಗಳಲ್ಲಿ ಪ್ರಥಮ ಭಾಷೆ ಕನ್ನಡ ಇದ್ದಲ್ಲಿ ಮೂರು ವಿಷಯಗಳ ಕೃಪಾಂಕ ಸಂಖ್ಯೆ ಆಗ 26 ಆಗಲಿದೆ. ಈ ಅಂಕಗಳನ್ನು ಅನುತ್ತೀರ್ಣ ವಿಷಯಗಳಿಗೆ ಹಂಚಿಕೆ ಮಾಡಿ ಪಾಸು ಮಾಡಲಾಗುತ್ತದೆ. ಆದರೆ, ಈ ಗ್ರೇಸ್ ಅಂಕಗಳನ್ನುಯಾವ ರೀತಿ ಹಂಚಿಕೆ ಮಾಡಲಾಗುತ್ತದೆ ಎಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ