ಕರ್ನಾಟಕದಲ್ಲಿ SSLC ಪರೀಕ್ಷೆ ಖಚಿತ; ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟನೆ 

SSLC Exam 2020: ಗ್ರಾಮೀಣ ಭಾಗಗಳಿಂದ ಬರುವ ವಿದ್ಯಾರ್ಥಿಗಳಿಗೆ ಓಡಾಡಲು ಸಮಸ್ಯೆಯಾದಲ್ಲಿ ಅಂತ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ಹಾಸ್ಟೆಲ್ ವ್ಯವಸ್ಥೆ ಕೂಡ ಮಾಡಿದ್ದೇವೆ. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡುವ ಪ್ರಮೇಯವೇ ಇಲ್ಲ ಎಂದು ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಸಚಿವ ಬಿ ಶ್ರೀರಾಮುಲು

ಸಚಿವ ಬಿ ಶ್ರೀರಾಮುಲು

  • Share this:
ಕೊಡಗು; ಬೇರೆ ಕೆಲವು ರಾಜ್ಯಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ಧು ಮಾಡಿರುವಂತೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಮಡಿಕೇರಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಮಡಿಕೇರಿಯಲ್ಲಿ ನಡೆದ ಕೊರೋನಾ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ ಅವರು, ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಒಂದು ಗಂಟೆ ಮುಂಚಿತವಾಗಿಯೇ ಬರಲು ವ್ಯವಸ್ಥೆ ಮಾಡಲಾಗುವುದು. ಹೀಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ತಪ್ಪದೇ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಅಲ್ಲದೆ ಸ್ಯಾನಿಟೈಸರ್ ಕೂಡ ಮಾಡಲಾಗುವುದು. ಅದಕ್ಕಾಗಿ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯಿಂದ ವಿಶೇಷ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇನ್ನು ಗ್ರಾಮೀಣ ಭಾಗಗಳಿಂದ ಬರುವ ವಿದ್ಯಾರ್ಥಿಗಳಿಗೆ ಓಡಾಡಲು ಸಮಸ್ಯೆಯಾದಲ್ಲಿ ಅಂತ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ಹಾಸ್ಟೆಲ್ ವ್ಯವಸ್ಥೆ ಕೂಡ ಮಾಡಿದ್ದೇವೆ. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡುವ ಪ್ರಮೇಯವೇ ಇಲ್ಲ" ಎಂದು ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಶಾಲೆಗಳನ್ನು ತೆರೆಯುವ ವಿಷಯಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಅವರು, "ಅದಕ್ಕಾಗಿಯೇ ಒಂದು ವಿಶೇಷ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಶಾಲೆ ತೆರೆದಲ್ಲಿ ಆಗುವ ಸಾಧಕ ಬಾಧಕಗಳ ಬಗ್ಗೆಯೂ ಚರ್ಚಿಸಲಾಗುತ್ತಿದೆ. ಸಮಿತಿಯು ನೀಡುವ ವರದಿಯನ್ನು ಪರಿಶೀಲಿಸಿ ಬಳಿಕ ಶಾಲೆ ಆರಂಭಿಸುವ ವಿಷಯಕ್ಕೆ ಸಂಬಂಧಿಸಿ ಚರ್ಚಿಸಲಾಗುವುದು" ಎಂದು ತಿಳಿಸಿದ್ದಾರೆ.
First published: