• Home
  • »
  • News
  • »
  • state
  • »
  • SSLC Exam 2022: ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

SSLC Exam 2022: ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಎಸ್‌ಎಸ್‌ಎಲ್‌ಸಿ ಬೋರ್ಡ್‌ ಬಿಡುಗಡೆ ಮಾಡಿರುವ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು ಮತ್ತು ‌ಪೋಷಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 28 ರ ವರೆಗೆ ಅವಕಾಶ ನೀಡಲಾಗಿದೆ. ತಾತ್ಕಾಲಿಕ ವೇಳಾಪಟ್ಟಿ ವಿವಿರ ಹೀಗಿದೆ.

  • News18 Kannada
  • Last Updated :
  • Karnataka, India
  • Share this:

2022-23ನೇ ಸಾಲಿನ ಎಸ್ಎಸ್ಎಲ್‌ಸಿ (SSLC Exam) ಪರೀಕ್ಷೆಗೆ ತಾತ್ಕಾಲಿಕ ವೇಳಾಪಟ್ಟಿ (Time Table) ಬಿಡುಗಡೆ ಮಾಡಲಾಗಿದೆ. ಎಸ್ಎಸ್ಎಲ್‌ಸಿ ಬೋರ್ಡ್ ವೇಳಾಪಟ್ಟಿ ಪ್ರಕಟ ಮಾಡಿದೆ. ಏಪ್ರಿಲ್ 1 ರಿಂದ 15 ರ ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಬೋರ್ಡ್‌ ಬಿಡುಗಡೆ ಮಾಡಿರುವ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು (SSLC Student) ಮತ್ತು ‌ಪೋಷಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 2ರ ವರೆಗೆ ಅವಕಾಶ ನೀಡಲಾಗಿದೆ. ತಾತ್ಕಾಲಿಕ ವೇಳಾಪಟ್ಟಿ  ಪ್ರಕಾರ ಯಾವ ದಿನ ಯಾವ ಪರೀಕ್ಷೆ (Exam) ನಡೆಯುತ್ತದೆ.


ಎಸ್ಎಸ್ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ


ಏಪ್ರಿಲ್ 1 - ಪ್ರಥಮ ಭಾಷೆ ವಿಷಯ


ಏಪ್ರಿಲ್ 4 - ಗಣಿತ


ಏಪ್ರಿಲ್ 6 - ದ್ವಿತೀಯ ಭಾಷೆ ವಿಷಯ


ಏಪ್ರಿಲ್ 10 - ವಿಜ್ಞಾನ


ಏಪ್ರಿಲ್ 12 - ತೃತೀಯ ಭಾಷೆ ವಿಷಯ


ಏಪ್ರಿಲ್ 15 - ಸಮಾಜ ವಿಜ್ಞಾನ ವಿಷಯಕ್ಕೆ ಪರೀಕ್ಷೆ ನಡೆಸುವುದಾಗಿ ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಲಾಗಿದೆ.


Shivamogga degree Student Wearing Hijab Denied Permission To Write exam


ದ್ವಿತೀಯ ಪಿಯು ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
ಬೆಂಗಳೂರು (ಅ.21): 2023 ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ದಿನಾಂಕ 10-3-2023ರಿಂದ 29-3-2023ರ ವರೆಗೆ ನಡೆಸಲು ಪಿಯು ಬೋರ್ಡ್ ತೀರ್ಮಾನಿಸಿದ್ದು, ಇಂದು(ಅಕ್ಟೋಬರ್ 21) ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.


ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.


ಈ ವರ್ಷದಿಂದಲೇ ಭಗವದ್ಗೀತೆ ತರಬೇತಿ

 ವಿದ್ಯಾರ್ಥಿಗಳಿಗೆ ಭಗವದ್ಗೀತೆ ಭೋದನೆಗೆ ಸಂಬಂಧಿಸಿದಂತೆ ಹಲವು ದಿನಗಳಿಂದ ಚರ್ಚೆಯಾಗಿದ್ದು, ಇದೀಗ ಪರಿಷತ್​ನಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ. ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ (Bhagavad Gita) ಬೋಧನೆ ಆರಂಭಿಸುವ ಚಿಂತನೆ ನಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ತಿಳಿಸಿದರು. ವಿಧಾನ ಪರಿಷತ್​ನಲ್ಲಿ ಈ ವಿಚಾರವನ್ನು ಸದಸ್ಯ ಎಂ.ಕೆ.ಪ್ರಾಣೇಶ್ (MK Pranesh) ಪ್ರಸ್ತಾಪಿಸಿದರು.


ಇದನ್ನೂ ಓದಿ: H D Kumaraswamy: ಕನ್ನಡದ ಕತ್ತು ಹಿಸುಕುವುದೇ ಬಿಜೆಪಿಯ ನಿತ್ಯ ಕಾಯಕ; ಎಚ್​ಡಿಕೆ ಕಿಡಿ


ಏನಾಯ್ತು ಭಗವದ್ಗೀತೆ ಬೋಧನೆ ವಿಚಾರ


ಪರಿಷತ್​ನಲ್ಲಿಈ ಬಗ್ಗೆ ಮಾತಾಡಿದ ಎಂ.ಕೆ ಪ್ರಾಣೇಶ್​, ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ? ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಕೇಳಿದರು.


ಬನಾರಸ್ ವಿವಿ ಮಾಡಲ್ ಫಾಲೋ ಮಾಡಲು ಚಿಂತನೆ


ಸರ್ಕಾರ ಈಗಾಗಲೇ ಭಗವದ್ಗೀತೆಯ ಭೋಧನೆಗೆ ಸಂಬಂಧ ಸಮಿತಿ ರಚನೆ ಮಾಡಿದೆ. ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು ಯಾವ ತರಗತಿಯಿಂದ ಯಾವ ತರಗತಿಗಳಿಗೆ ಯಾವ ಮಾದರಿಯಲ್ಲಿ ಭಗವದ್ಗೀತೆ ಭೋದನೆ ಮಾಡಬೇಕು? ಯಾವ ರೀತಿಯಲ್ಲಿ ನೈತಿಕ ಶಿಕ್ಷಣ ನೀಡಬೇಕು ಅಂತಾ ಸಮಿತಿ ಮಾಹಿತಿ ನೀಡಲಿದೆ.


ಇದನ್ನೂ ಓದಿ: H D Kumaraswamy: ಇನ್ಸ್​ಪೆಕ್ಟರ್ ನಂದೀಶ್ ಸಾವು ಹೃದಯಾಘಾತವಲ್ಲ ಕೊಲೆ! ಉನ್ನತ ಮಟ್ಟದ ತನಿಖೆಗೆ ಎಚ್​ಡಿಕೆ ಆಗ್ರಹ


ಪ್ರತ್ಯೇಕವಾದ ಪಠ್ಯ ರಚನೆಯ ಮೂಲಕ ಮಕ್ಕಳಿಗೆ ಗೀತೆ ಭೋದನೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಗುಜರಾತ್ ಹಾಗೂ ಬನಾರಸ್ ವಿವಿ ಮಾಡಲ್ ಫಾಲೋ ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಗುಜರಾತ್ ಸರ್ಕಾರ ಪಠ್ಯದಲ್ಲಿ ತಂದಿರುವ ಭಗ್ವತಗೀತಾ ಮಾದರಿಯಲ್ಲಿಯೇ ರಾಜ್ಯದಲ್ಲೂ ಫಾಲೋ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

Published by:ಪಾವನ ಎಚ್ ಎಸ್
First published: