SSLC Question Paper Leak: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, 10 ಜನರ ಬಂಧನ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಪೊಲೀಸ್ ಅಧಿಕಾರಿಗಳ ಪ್ರಕಾರ, ಖಾಸಗಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರೊಬ್ಬರು ರಾಮನಗರದ ಪರೀಕ್ಷಾ ಕೇಂದ್ರವೊಂದರಲ್ಲಿ ಸಂಗ್ರಹಿಸಲಾಗಿದ್ದ ವಿಜ್ಞಾನ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದಿದ್ದರು.

  • Share this:

ರಾಮನಗರ ಜಿಲ್ಲೆಯ ಮಾಗಡಿಯಲ್ಲಿ (Magadi, Ramanagara) ಎಸ್ಎಸ್ಎಲ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ (SSLC Question Paper Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) ನಿನ್ನೆ 10 ಜನರನ್ನು ಬಂಧಿಸಿದ್ದರು. ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಸ್ಥಳೀಯ ವಿಜಿ, ಕೆಂಪೇಗೌಡ ಶಾಲೆಯ ಪ್ರಿನ್ಸಿಪಲ್ ಶ್ರೀನಿವಾಸ್, ಕ್ಲರ್ಕ್ ರಂಗೇಗೌಡ, ರಂಗನಾಥ ಶಾಲೆಯ ಕೃಷ್ಣಮೂರ್ತಿ, ಸುಬ್ರಹ್ಮಣ್ಯ, ಅರ್ಜುನ್, ಅಲೀಮ್ ಉಲ್ಲಾ ಬೇಗ್, ನಾಗರಾಜು, ಲೋಕೇಶ್, ಶ್ರೀನಿವಾಸ್ ಎಂಬ ಶಿಕ್ಷಕರ ಬಂಧನಕ್ಕೆ ಒಳಪಡಿಸಲಾಗಿತ್ತು. ವಿಚಾರಣೆ ಬಳಿಕ ಎಲ್ಲರೂ ನ್ಯಾಯಾಲಯದ (Court) ಮುಂದೆ ಹಾಜರು ಪಡಿಸಲಾಗಿತ್ತು.


ಕೆಂಪೇಗೌಡ ಶಾಲೆಯ ಪ್ರಿನ್ಸಿಪಲ್ ಶ್ರೀನಿವಾಸ್, ಕ್ಲರ್ಕ್ ರಂಗೇಗೌಡ, ರಂಗನಾಥ ಶಾಲೆಯ ಕೃಷ್ಣಮೂರ್ತಿ ಎಂಬವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದು, ಇನ್ನುಳಿದ ಏಳು ಜನರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಸದ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ಆರೋಪಿಗಳ ಬಂಧನಕ್ಕೆ ಬಿ.ಸಿ.ನಾಗೇಶ್ ಆದೇಶ


ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಆದೇಶದಂತೆ ಶಿಕ್ಷಕರ ಬಂಧನ ಮಾಡಲಾಗಿತ್ತು. ಕಳೆದ ಮೂರು ದಿನಗಳಿಂದ ಬಿಇಒ ಯತಿಕುಮಾರ್ ಎಂಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದರೆ. ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯ ಗೊತ್ತಿದ್ದರೂ ಯತಿಕುಮಾರ್ ಮೌನವಾಗಿದ್ದರು ಎಂಬ ಆರೋಪಗಳು ಕೇಳಿ ಬಂದಿವೆ.


ಪೊಲೀಸ್ ಅಧಿಕಾರಿಗಳ ಪ್ರಕಾರ, ಖಾಸಗಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರೊಬ್ಬರು ರಾಮನಗರದ ಪರೀಕ್ಷಾ ಕೇಂದ್ರವೊಂದರಲ್ಲಿ ಸಂಗ್ರಹಿಸಲಾಗಿದ್ದ ವಿಜ್ಞಾನ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದಿದ್ದರು.


ಫೋಟೋ ತೆಗೆದು ಹಣಕ್ಕಾಗಿ ಬ್ಲ್ಯಾಕ್ಮೇಲ್


ಈ ಫೋಟೋಗಳನ್ನು ಗುಮಾಸ್ತನಿಗೆ ರವಾನೆ ಮಾಡಿ, ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ್ದರು. ಮುಖ್ಯೋಪಾಧ್ಯಾಯರ ಸ್ನೇಹಿತನಾಗಿರುವ ಸ್ಥಳೀಯ ಪತ್ರಕರ್ತ ಕೆಂಪೇಗೌಡ ಶಾಲೆಯ ಶಿಕ್ಷಕರಿಗೂ ಬ್ಲಾಕ್ ಮೇಲ್ ಮಾಡಿ ಸೋರಿಕೆಯನ್ನು ಪೊಲೀಸರಿಗೆ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ.


ಇದನ್ನೂ ಓದಿ:  Chitradurga: ಮನೆ ಕಳೆದುಕೊಂಡು ಪರದಾಟ, ಸಚಿವ ಶ್ರೀರಾಮುಲು ಕ್ಷೇತ್ರದಲ್ಲಿ ಬೀದಿಗೆ ಬಿದ್ದ ಕುಟುಂಬಗಳು


ಪರೀಕ್ಷೆಯ ದಿನದಂದು, ಪ್ರಶ್ನೆ ಪತ್ರಿಕೆಯ ಬಗ್ಗೆ ತಿಳಿದ ಶಿಕ್ಷಕರು ಪರೀಕ್ಷಾ ಸಭಾಂಗಣದಲ್ಲಿ ಪ್ರಶ್ನೆಗಳಿಗೆ ಉತ್ತರಿಸಲು ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.


ಉತ್ತಮ ಅಂಕಗಳಿಸಲು ವಿದ್ಯಾರ್ಥಿಗಳಿಗೆ ಸಹಾಯ


ತನಿಖೆ ಸಮಯದಲ್ಲಿ ಯಾರೂ ತಮ್ಮ ವೈಯಕ್ತಿಕ ಲಾಭಕ್ಕಾಗಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿಲ್ಲ ಎಂಬ ಅಂಶ ತಿಳಿದು ಬಂದಿದೆ. ಗ್ರಾಮೀಣ ಭಾಗದ ಅಧಿಕಾರಿಗಳು ಮತ್ತು ಶಿಕ್ಷಕರು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವ ಮೂಲಕ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಲು ಸಹಾಯ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.


ಆರೋಪಿಗಳು ನ್ಯಾಯಾಂಗ ಬಂಧನಕ್ಕೆ


ಸದ್ಯ ಆರೋಪಿಗಳ ವಿರುದ್ಧ IPC ಸೆಕ್ಷನ್ 417,418,420,201,120B ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕ ಶಿಕ್ಷಣ ಕಾಯಿದೆ 1983 ರ ಸೆಕ್ಷನ್ 24(A) ಮತ್ತು 115(A) ಅಡಿಯಲ್ಲಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ 2000 ರ ಕಲಂ 66 ರ ಅಡಿಯಲ್ಲಿ ಆರೋಪಿಗಳನ್ನು ಈಗ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.


ಈ ವರ್ಷವೂ ಬಾಲಕಿಯರೇ ಮೇಲುಗೈ


ಈ ಬಾರಿ ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.  ಶೇ. 90.29ರಷ್ಟು ಬಾಲಕಿಯರು, ಶೇ. 81.30ರಷ್ಟು ಬಾಲಕರು ಪಾಸ್ ಆಗಿದ್ದಾರೆ. ಒಟ್ಟೂ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ 40,061 ಮಂದಿ ಗ್ರೇಸ್ ಮಾರ್ಕ್ ಮೂಲಕ ಪಾಸ್ ಆಗಿದ್ದಾರೆ.


ಇದನ್ನೂ ಓದಿ:  SSLC Result 2022: ಎಸ್ಎಸ್‌ಎಲ್‌ಸಿಯಲ್ಲಿ 85.63ರಷ್ಟು ಫಲಿತಾಂಶ, 145 ವಿದ್ಯಾರ್ಥಿಗಳಿಗೆ ಔಟ್ ಆಫ್‌ ಔಟ್ ಮಾರ್ಕ್ಸ್‌!


145 ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್ ಮಾರ್ಕ್ಸ್


ಒಟ್ಟು 145 ಮಂದಿ ಈ ಬಾರಿ 625ಕ್ಕೆ 625 ಅಂಕ ಪಡೆದು,  ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಬಾರಿಯೂ ಫಲಿತಾಂಶದಲ್ಲಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು  ಮೆಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದ ಶೇಕಡಾ 91.32ರಷ್ಟು ವಿದ್ಯಾರ್ಥಿಗಳು ಹಾಗೂ ನಗರ ಪ್ರದೇಶದ  ಶೇಕಡಾ 86.64ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

Published by:Mahmadrafik K
First published: