ಬೆಂಗಳೂರು: ರಾಜ್ಯದ ಎಸ್ಎಸ್ಎಲ್‌ಸಿ (SSLC) ವಿದ್ಯಾರ್ಥಿಗಳ (Students) ಪರೀಕ್ಷಾ ಫಲಿತಾಂಶ (Exam Result) ಪ್ರಕಟಗೊಂಡಿದೆ. ಈಗಷ್ಟೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ (Education Minister) ಬಿ.ಸಿ. ನಾಗೇಶ್ (B.C. Nagesh) ಫಲಿತಾಂಶ ಪ್ರಕಟಿಸಿದ್ದಾರೆ. ಬೆಂಗಳೂರಿನ (Bengaluru) ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಸಚಿವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದಾರೆ. ಮಧ್ಯಾಹ್ನದ ಬಳಿಕ ವೆಬ್‌ಸೈಟ್‌ನಲ್ಲಿ (Website) ಫಲಿತಾಂಶ ಪ್ರಕಟಗೊಳ್ಳಲಿದೆ. ಇಲಾಖೆಯ ವೆಬ್‌ಸೈಟ್ https://karresults.nic.in ಹಾಗೂ ಮತ್ತು www.kseeb.kar.nic.in ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ನೋಡಬಹುದು.
ಶೇಕಡಾ 85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ
ಈ ಬಾರಿ ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ. 90.29ರಷ್ಟು ಬಾಲಕಿಯರು, ಶೇ. 81.30ರಷ್ಟು ಬಾಲಕರು ಪಾಸ್ ಆಗಿದ್ದಾರೆ. ಒಟ್ಟೂ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ 40,061 ಮಂದಿ ಗ್ರೇಸ್ ಮಾರ್ಕ್ ಮೂಲಕ ಪಾಸ್ ಆಗಿದ್ದಾರೆ.
145 ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್ ಮಾರ್ಕ್ಸ್
ಒಟ್ಟು 145 ಮಂದಿ ಈ ಬಾರಿ 625ಕ್ಕೆ 625 ಅಂಕ ಪಡೆದು, ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಬಾರಿಯೂ ಫಲಿತಾಂಶದಲ್ಲಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಮೆಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದ ಶೇಕಡಾ 91.32ರಷ್ಟು ವಿದ್ಯಾರ್ಥಿಗಳು ಹಾಗೂ ನಗರ ಪ್ರದೇಶದ ಶೇಕಡಾ 86.64ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
SSLC ಫಲಿತಾಂಶ ಪ್ರಕಟ.
ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ.
ಉತ್ತೀರ್ಣ ಪ್ರಮಾಣ:
ಬಾಲಕಿಯರು- ಶೇ. 90.29
ಬಾಲಕರು- ಶೇ. 81.30.
8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
7,30,881 ವಿದ್ಯಾರ್ಥಿಗಳು ಉತ್ತೀರ್ಣ.
ಪೂರಕ ಪರೀಕ್ಷೆ- ಜೂನ್ 27, 2022.#sslcresults
— B.C Nagesh (@BCNagesh_bjp) May 19, 2022
ಈ ಬಾರಿ ಪರಿಪೂರ್ಣ ಅಂಕ ಅಂದರೆ 625ಕ್ಕೆ 625 ಅಂಕಗಳನ್ನು 145 ಮಕ್ಕಳು ಪಡೆದಿದ್ದಾರೆ. ಈ ಪೈಕಿ 21 ಸರ್ಕಾರಿ ಶಾಲೆ, 8 ಅನುದಾನಿತ ಶಾಲೆ ಹಾಗೂ 116 ಖಾಸಗಿ ಶಾಲೆಗಳ ಮಕ್ಕಳು ಪೂರ್ಣ ಅಂಕ ಪಡೆದಿದ್ದಾರೆ.
ಈ ಬಾರಿ ಜಿಲ್ಲೆಗಳಿಗಿಲ್ಲ ಸ್ಥಾನ
ಈ ಬಾರಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಅಂತಿಮ ಅಂತ ಜಿಲ್ಲೆಗಳಿಗೆ ಗ್ರೇಡ್ ನೀಡಲಾಗಿಲ್ಲ. ಬದಲಾಗಿ ಎ, ಬಿ, ಸಿ ಅಂತ ಗ್ರೇಡ್ ನೀಡಲಾಗಿದೆ. 32 ಶೈಕ್ಷಣಿಕ ಜಿಲ್ಲೆಗಳಿಗೆ A grade, 2 ಶೈಕ್ಷಣಿಕ ಜಿಲ್ಲೆಗೆ B Grade ನೀಡಲಾಗಿದೆ.
ಮಧ್ಯಾಹ್ನದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟ
ಸಚಿವರು ಈಗಾಗಲೇ ಎಸ್ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶ ಘೋಷಿಸಿದ್ದಾರೆ. ಆದರೆ ಮಧ್ಯಾಹ್ನದ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು. https://karresults.nic.in ಹಾಗೂ ಮತ್ತು www.kseeb.kar.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಇನ್ನು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.
ಫಲಿತಾಂಶ ನೋಡುವುದು ಹೇಗೆ?
karresults.nic.in ಈ ಅಧಿಕೃತ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ನಂಬರ್ ನಮೂದಿಸಿದರೆ ಸಾಕು, ಫಲಿತಾಂಶದ ವಿವರ ಪ್ರಕಟವಾಗಲಿದೆ. ಕೆಲವೊಮ್ಮ ಒಂದೇ ಸಲ ಎಲ್ಲಾ ವಿದ್ಯಾರ್ಥಿಗಳು ಫಲಿತಾಂಶವನ್ನು ನೋಡುವ ಕಾರಣಕ್ಕೆ, ಸರ್ವರ್ ಬ್ಯುಸಿ ಆಗಿ ಫಲಿತಾಂಶ ತೋರಿಸದಿದ್ದರೂ ವಿದ್ಯಾರ್ಥಿಗಳು ಭಯ ಪಡದೆ, ಮತ್ತೊಮ್ಮೆ ಪ್ರಯತ್ನಿಸಿ. ಇಲ್ಲವೇ ಮಧ್ಯಾಹ್ನ ವೇಳೆಗೆ ಫಲಿತಾಂಶದ ವಿವರಗಳನ್ನು ಎಲ್ಲಾ ಶಾಲೆಗಳಿಗೂ ರವಾನಿಸಲಾಗಿರುತ್ತದೆ. ನೀವು ನಿಮ್ಮ ಶಾಲೆಗೆ ತೆರಳಿ ಫಲಿತಾಂಶವನ್ನು ನೋಡಬಹುದು.
ಇದನ್ನೂ ಓದಿ: SSLC ಬಳಿಕ ಮುಂದ್ಯಾವ ಕೋರ್ಸ್? ಇಲ್ಲಿವೆ ಓದಿ ವಿದ್ಯಾರ್ಥಿಗಳಿಗೆ ಸಲಹೆ
ಫಲಿತಾಂಶವನ್ನು ಈ ರೀತಿ ಚೆಕ್ ಮಾಡಿ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ. ಬಳಿಕ ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ಟೈಪ್ ಮಾಡಿ. ನಂತರ 'Submit' ಎಂಬಲ್ಲಿ ಕ್ಲಿಕ್ ಮಾಡಿ. ಅಲ್ಲಿ ಫಲಿತಾಂಶದ ಪೇಜ್ ಓಪನ್ ಆಗುತ್ತದೆ. ಫಲಿತಾಂಶವನ್ನು ಡೌನ್‌ಲೋಡ್ ಮಾಡಿ ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್ ತೆಗೆದುಕೊಳ್ಳಿ.
ಪರೀಕ್ಷೆ ಬರೆದಿದ್ದ 8.73 ಲಕ್ಷ ವಿದ್ಯಾರ್ಥಿಗಳು
ಈ ವರ್ಷ ಮಾರ್ಚ್ 28 ರಿಂದ ಏಪ್ರಿಲ್ 11ರವರೆಗೆ ನಡೆದ ಪರೀಕ್ಷೆಗೆ ರಾಜ್ಯದಾದ್ಯಂತ 8.73 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ರಾಜ್ಯದ 15,387 ಶಾಲೆಗಳಿಂದ ಒಟ್ಟು 8,73,884 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರೆ, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು ಸೇರಿದಂತೆ ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಪೂರಕ ಪರೀಕ್ಷೆ ನಡೆಯುವುದು ಯಾವಾಗ?
ಇನ್ನು ಒಂದು ವೇಳೆ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ಯಾವುದೇ ವಿದ್ಯಾರ್ಥಿಗಳು ಭಯಪಡುವ ಅಗತ್ಯ ಇಲ್ಲ. ಯಾಕೆಂದ್ರೆ ಅನುತೀರ್ಣಗೊಂಡ ವಿದ್ಯಾರ್ಥಿಗಳಿಗೆ ಜೂನ್ ಜೂನ್ 27ರಂದು ಪೂರಕ ಪರೀಕ್ಷೆ ನಡೆಸುವ ಸಾಧ್ಯೆತೆ ಇದೆ. ಆಗ ಬರೆದು ಪಾಸ್ ಆಗಬಗುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ