• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • SSLC: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ದಿನಾಂಕ ಪ್ರಕಟ ಸೆ. 27 , 29 ರಂದು ನಡೆಯಲಿದೆ ಎಕ್ಸಾಮ್​​

SSLC: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ದಿನಾಂಕ ಪ್ರಕಟ ಸೆ. 27 , 29 ರಂದು ನಡೆಯಲಿದೆ ಎಕ್ಸಾಮ್​​

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಾಂದರ್ಭಿಕ ಚಿತ್ರ

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಾಂದರ್ಭಿಕ ಚಿತ್ರ

ಶೇಕಡಾ 99.9 ದಾಖಲೆಯುತ ಫಲಿತಾಂಶ ಈ ಬಾರಿ ಬಂದಿತ್ತು, ಕೊರೋನಾ ನಡುವೆಯೂ ಸಾಕಷ್ಟು ವಿರೋಧಗಳ ನಡುವೆ ಹಠಕ್ಕೆ ಬಿದ್ದಿದ್ದ ಮಾಜಿ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಜುಲೈ 19, 22ರಂದು ನಡೆಸಿದ್ದರು. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿ ಶೇಕಡಾ 99.9ರಷ್ಟು SSLC ವಿದ್ಯಾರ್ಥಿಗಳು ಉತ್ತೀರ್ಣರಾಗಿ ದಾಖಲೆ ನಿರ್ಮಿಸಿದ್ದರು.

ಮುಂದೆ ಓದಿ ...
 • Share this:

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು SSLC ಪೂರಕ ಪರೀಕ್ಷೆ ದಿನಾಂಕ ಪ್ರಕಟಿಸಿ ಅಧಿಸೂಚನೆ ಹೊರಡಿಸಿದೆ.  ಸೆಪ್ಟೆಂಬರ್ 27 , 29 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆಯು ಇತಿಹಾಸದಲ್ಲೇ ಮೊದಲ ಬಾರಿಗೆ ವಿಶೇಷ ರೀತಿಯಲ್ಲಿ, ಸರಳೀಕೃತವಾಗಿ ನಡೆದ ಮಾದರಿಯಲ್ಲಿಯೇ ನಡೆಯಲಿದೆ ಎಂದು ತಿಳಿಸಿದೆ.


ವಾರ್ಷಿಕ ಪರೀಕ್ಷಾ ಮಾದರಿಯಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಯಾವುದೇ ಬದಲಾವಣೆ ಇಲ್ಲ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ. ಎರಡು ದಿನ ಪರೀಕ್ಷೆ ನಡೆಯಲಿದ್ದು, ಸೆಪ್ಟೆಂಬರ್​ 27 ರಂದು ಸಮಾಜ ವಿಜ್ಞಾನ, ಗಣಿತ,‌ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ. 29 ರಂದು ಕನ್ನಡ, ಇಂಗ್ಲಿಷ್, ಹಿಂದಿ ವಿಷಯಗಳಿಗೆ
ಪರೀಕ್ಷೆ ನಡೆಸಲಾಗುವುದು ಎಂದು ದಿನಾಂಕ ಪ್ರಕಟಿಸಲಾಗಿದೆ.


ಎರಡು ದಿನ ಜರುಗುವ ಪರೀಕ್ಷೆಯಲ್ಲಿ, ಮೊದಲ ದಿನ‌ ಕೋರ್ ವಿಷಯಗಳು ಹಾಗೂ ಎರಡನೇ ದಿನ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಈ ಹಿಂದಿನಂತೆ ಬಹು ಆಯ್ಕೆಯ ಪ್ರಶ್ನೆಗಳನ್ನು ಕೇಳಲಿದ್ದು, ಉತ್ತರವನ್ನು OMR ಶೀಟ್ ನಲ್ಲಿ ಗುರುತು ಮಾಡಬೇಕಾಗುತ್ತದೆ.


ಈ ಹಿಂದೆ ಪರೀಕ್ಷೆಗೆ ನೋಂದಾಯಿತಗೊಂಡ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತದೆ ಅಂದರೆ  ಕೊರೊನಾ ಕಾರಣಕ್ಕೆ ಪರೀಕ್ಷೆಗೆ ಹಾಜರಾಗದೇ ಇರುವ ವಿದ್ಯಾರ್ಥಿಗಳು, ಅನಾರೋಗ್ಯ, ವಿವಿಧ ಕಾರಣಗಳಿಂದ ಗೈರು ಹಾಜರಾದ ಹಾಗೂ ಪರೀಕ್ಷೆ ನೊಂದಾಯಿಸಿ ಬರೆಯದೇ ಇರುವ ವಿದ್ಯಾರ್ಥಿಗಳಿಗೆ ಈ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು.


ಇನ್ನೊಂದು ವಿಶೇಷ ಏನೆಂದರೇ ಹಳೆಯ ವಿದ್ಯಾರ್ಥಿಗಳು ಸಹ ಇಲ್ಲಿ ಬಂಪರ್​ ಲಾಟರಿ ಹೊಡೆದಿದ್ದಾರೆ. ಏಪ್ರಿಲ್ 2019ರಲ್ಲಿ ನಡೆದ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಯಲ್ಲಿ ಫೇಲಾದ‌ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಕೊರೋನಾ ಬರುವುದಕ್ಕೆ ಮುಂಚಿತವಾಗಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಕೃಪೆ ತೋರಿರುವುದು ಈ ಬಾರಿಯ ವಿಶೇಷ ಎಂದೇ ಹೇಳಬಹುದು. ಅಲ್ಲದೇ  2021ನೇ ಸಾಲಿನಲ್ಲಿ ಅನಾರೋಗ್ಯದಿಂದ ಗೈರು ಹಾಜರಾದ‌ ಖಾಸಗಿ ವಿದ್ಯಾರ್ಥಿಗಳಿಗೂ ಪರೀಕ್ಷೆಗೆ ಅವಕಾಶ ನೀಡಲಾಗಿದೆ.


ವಿದ್ಯಾರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿ ಅಲ್ಲಿಸಲು ಅವಕಾಶ ನೀಡಲಾಗಿದ್ದು Www.sslc.Karnataka.gov.in ಮೂಲಕ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು.


ಇದನ್ನೂ ಓದಿ: ದಿನಾಂಕ18 ಆದರೂ ಆಗಿಲ್ಲ ಸಾರಿಗೆ ನೌಕರರಿಗೆ ಜುಲೈ ಸಂಬಳ..! ಮಾಯಾವಾದ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ

top videos


  ಶೇಕಡಾ 99.9 ದಾಖಲೆಯುತ ಫಲಿತಾಂಶ ಈ ಬಾರಿ ಬಂದಿತ್ತು, ಕೊರೋನಾ ನಡುವೆಯೂ ಸಾಕಷ್ಟು ವಿರೋಧಗಳ ನಡುವೆ ಹಠಕ್ಕೆ ಬಿದ್ದಿದ್ದ ಮಾಜಿ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಜುಲೈ 19, 22ರಂದು ನಡೆಸಿದ್ದರು. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿ ಶೇಕಡಾ 99.9ರಷ್ಟು SSLC ವಿದ್ಯಾರ್ಥಿಗಳು ಉತ್ತೀರ್ಣರಾಗಿ ದಾಖಲೆ ನಿರ್ಮಿಸಿದ್ದರು. 4,70,160 ಹುಡುಗರು ಮತ್ತು 4,01,280 ವಿದ್ಯಾರ್ಥಿನಿಯರು ಉತ್ತೀರ್ಣ ಆಗಿದ್ದರು. A+ ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,28,931, A ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,50,317, B ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,87,694, C ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,13,610, ಶೇ. 9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್​ ನೀಡಿ ಪಾಸ್​ ಮಾಡಲಾಗಿತ್ತು. C ಗ್ರೇಡ್​ ಪಡೆದಿರುವ ಶೇ.9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಿ ಪಾಸ್​ ಮಾಡಲಾಗಿತ್ತು.  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

  First published:

  ಸುದ್ದಿ 18ಕನ್ನಡ ಟ್ರೆಂಡಿಂಗ್

  ಮತ್ತಷ್ಟು ಓದು