SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಜೂನ್ 27 ರಿಂದ ಜುಲೈ 4ರವರೆಗೆ ಎಕ್ಸಾಂ

ಶಿಕ್ಷಣ ಇಲಾಖೆ ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೇ 19ರಂದು ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿತ್ತು. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಶಿಕ್ಷಣ ಇಲಾಖೆ ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ (SSLC Supplementary exam) ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೇ 19ರಂದು ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿತ್ತು. ಈ ಬಾರಿ ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ. 90.29ರಷ್ಟು ಬಾಲಕಿಯರು, ಶೇ. 81.30ರಷ್ಟು ಬಾಲಕರು ಪಾಸ್ ಆಗಿದ್ದರು. ಒಟ್ಟೂ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ 40,061 ಮಂದಿ ಗ್ರೇಸ್ ಮಾರ್ಕ್ ಮೂಲಕ ಪಾಸ್ ಆಗಿದ್ದರು. ಒಟ್ಟು 145 ಮಂದಿ ಈ ಬಾರಿ 625ಕ್ಕೆ 625 ಅಂಕ ಪಡೆದು, ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು. ಈ ಬಾರಿಯೂ ಫಲಿತಾಂಶದಲ್ಲಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಮೆಲುಗೈ ಸಾಧಿಸಿದ್ದರು. ಗ್ರಾಮೀಣ ಪ್ರದೇಶದ ಶೇಕಡಾ 91.32ರಷ್ಟು ವಿದ್ಯಾರ್ಥಿಗಳು ಹಾಗೂ ನಗರ ಪ್ರದೇಶದ ಶೇಕಡಾ 86.64ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರು.

SSLC ಪೂರಕ ಪರೀಕ್ಷೆ ವೇಳಾಪಟ್ಟಿ

ಜೂನ್ 27 : ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ

ಜೂನ್ 28 : ಪ್ರಥಮ ಭಾಷೆ ಕನ್ನಡ, ತೆಲುಗು, ಇಂಗ್ಲಿಷ್, ಮರಾಠಿ, ಉರ್ದು, ಸಂಸ್ಕೃತ

ಜೂನ್ 29 : ದ್ವೀತಿಯ ಭಾಷೆ (ಇಂಗ್ಲಿಷ್- ಕನ್ನಡ)

ಜೂನ್ 30 : ಸಮಾಜಶಾಸ್ತ್ರ

ಜುಲೈ 1 : ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)

ಜುಲೈ 2 : ಎಲಿಮೆಂಟ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್ 2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

ಜುಲೈ 4 : ಗಣಿತ, ಸಮಾಜಶಾಸ್ತ್ರ

sslc supplementary exam time table announce mrq
ವೇಳಾಪಟ್ಟಿ


ರಾಮನಗರದಲ್ಲಿ ಪ್ರಶ್ನೆಪತ್ರಿಕೆ ಲೀಕ್

ರಾಮನಗರ ಜಿಲ್ಲೆಯ ಮಾಗಡಿಯಲ್ಲಿ (Magadi, Ramanagara) ಎಸ್ಎಸ್ಎಲ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ (SSLC Question Paper Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) 10 ಜನರನ್ನು ಬಂಧಿಸಿದ್ದರು. ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು.

ಇದನ್ನೂ ಓದಿ;  Controversy: 'ರಾಮ' ರಾಮಾ, ದೇವರ ಬಗ್ಗೆ ಇದೆಂತಾ ಮಾತು! ವಿವಾದದ ಬಳಿಕ ಕಾಂಗ್ರೆಸ್ ನಾಯಕಿ ಹೇಳುವುದೇನು?

ಸ್ಥಳೀಯ ವಿಜಿ, ಕೆಂಪೇಗೌಡ ಶಾಲೆಯ ಪ್ರಿನ್ಸಿಪಲ್ ಶ್ರೀನಿವಾಸ್, ಕ್ಲರ್ಕ್ ರಂಗೇಗೌಡ, ರಂಗನಾಥ ಶಾಲೆಯ ಕೃಷ್ಣಮೂರ್ತಿ, ಸುಬ್ರಹ್ಮಣ್ಯ, ಅರ್ಜುನ್, ಅಲೀಮ್ ಉಲ್ಲಾ ಬೇಗ್, ನಾಗರಾಜು, ಲೋಕೇಶ್, ಶ್ರೀನಿವಾಸ್ ಎಂಬ ಶಿಕ್ಷಕರ ಬಂಧನಕ್ಕೆ ಒಳಪಡಿಸಲಾಗಿತ್ತು.

ಫೋಟೋ ತೆಗೆದು ಹಣಕ್ಕಾಗಿ ಬ್ಲ್ಯಾಕ್ಮೇಲ್

ಈ ಫೋಟೋಗಳನ್ನು ಗುಮಾಸ್ತನಿಗೆ ರವಾನೆ ಮಾಡಿ, ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ್ದರು. ಮುಖ್ಯೋಪಾಧ್ಯಾಯರ ಸ್ನೇಹಿತನಾಗಿರುವ ಸ್ಥಳೀಯ ಪತ್ರಕರ್ತ ಕೆಂಪೇಗೌಡ ಶಾಲೆಯ ಶಿಕ್ಷಕರಿಗೂ ಬ್ಲಾಕ್ ಮೇಲ್ ಮಾಡಿ ಸೋರಿಕೆಯನ್ನು ಪೊಲೀಸರಿಗೆ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ:  Monica Khanna: ಬೆಂಕಿ ತಗುಲಿದ ವಿಮಾನ, ಒಂದೇ ಎಂಜಿನ್​ನಲ್ಲಿ ವಿಮಾನ ಹಾರಿಸಿ 191 ಜೀವ ಉಳಿಸಿದ ದಿಟ್ಟ ಪೈಲಟ್

ಪರೀಕ್ಷೆಯ ದಿನದಂದು, ಪ್ರಶ್ನೆ ಪತ್ರಿಕೆಯ ಬಗ್ಗೆ ತಿಳಿದ ಶಿಕ್ಷಕರು ಪರೀಕ್ಷಾ ಸಭಾಂಗಣದಲ್ಲಿ ಪ್ರಶ್ನೆಗಳಿಗೆ ಉತ್ತರಿಸಲು ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಉತ್ತಮ ಅಂಕಗಳಿಸಲು ವಿದ್ಯಾರ್ಥಿಗಳಿಗೆ ಸಹಾಯ

ತನಿಖೆ ಸಮಯದಲ್ಲಿ ಯಾರೂ ತಮ್ಮ ವೈಯಕ್ತಿಕ ಲಾಭಕ್ಕಾಗಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿಲ್ಲ ಎಂಬ ಅಂಶ ತಿಳಿದು ಬಂದಿದೆ. ಗ್ರಾಮೀಣ ಭಾಗದ ಅಧಿಕಾರಿಗಳು ಮತ್ತು ಶಿಕ್ಷಕರು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವ ಮೂಲಕ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಲು ಸಹಾಯ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಪಿಯಸಿ ಫಲಿತಾಂಶ

5,99,794 ಮಕ್ಕಳಲ್ಲಿ 4,02,697 ಮಕ್ಕಳು ಪಾಸ್ ಆಗಿದ್ದು, ಶೇ.61ರಷ್ಟು ಫಲಿತಾಂಶ ಬಂದಿದೆ. 5,99,794 ಮಕ್ಕಳಲ್ಲಿ 4,02,697 ಮಕ್ಕಳು ಪಾಸ್ ಆಗಿದ್ದು, ಶೇ.61ರಷ್ಟು ಫಲಿತಾಂಶ ಬಂದಿದೆ. ಇನ್ನೂ ಜಿಲ್ಲಾವಾರು ಫಲಿತಾಂಶ ನೋಡೋದಾದ್ರೆ ದಕ್ಷಿಣ ಕನ್ನಡ ಅಗ್ರಸ್ಥಾನ ಶೇ.88.02 ಫಲಿತಾಂಶದೊಂದಿಗೆ ಮೊದಲ ಸ್ಥಾನದಲ್ಲಿದೆ. ಉಡುಪಿ ಶೇ. 86.38 ಫಲಿತಾಂಶದೊಂದಿಗೆ ಎರಡನೇ ಸ್ಥಾನ ಮತ್ತು ವಿಜಯಪುರ ಶೇ.77.14 ಫಲಿತಾಂಶದೊಂದಿಗೆ ಮೂರನೇ ಸ್ಥಾನದಲ್ಲಿದೆ. ಶೇ.49.31 ಫಲಿತಾಂಶದೊಂದಿಗೆ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ. ಕಳೆದ ಬಾರಿ 61.80 ಫಲಿತಾಂಶ ಇತ್ತು ಈ ಬಾರಿ 0.8% ಈ ಬಾರಿ ಹೆಚ್ಚಳವಾಗಿದೆ.
Published by:Mahmadrafik K
First published: