HOME » NEWS » State » STARTING A SCHOOL COLLEGE AT A TIME WHEN CORONA IS WIDESPREAD CAN BE A HUGE DISASTER SAYS HD KUMARASWAMY RH

ಕೊರೋನಾ ವ್ಯಾಪಕವಾಗಿರುವ ಸಮಯದಲ್ಲಿ ಶಾಲಾ-ಕಾಲೇಜು ಆರಂಭಿಸಿದರೆ ಭಾರೀ ಅನಾಹುತ ಎದುರಿಸಬೇಕಾಗುತ್ತದೆ; ಸರ್ಕಾರಕ್ಕೆ ಎಚ್​ಡಿಕೆ ಎಚ್ಚರಿಕೆ

ಶಾಲಾ-ಕಾಲೇಜು ಆರಂಭಿಸುವ ವಿಚಾರದಲ್ಲಿ ಮಾತ್ರ ಸರ್ಕಾರ ಮೈಯೆಲ್ಲ ಕಣ್ಣಾಗಿರಬೇಕು. ಈಗ ಶಾಲಾ-ಕಾಲೇಜು ಆರಂಭಿಸುವ ಉಮೇದಿಯಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಮತ್ತೊಮ್ಮೆ ಆಗ್ರಹಿಸುತ್ತೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.

news18-kannada
Updated:November 6, 2020, 8:56 PM IST
ಕೊರೋನಾ ವ್ಯಾಪಕವಾಗಿರುವ ಸಮಯದಲ್ಲಿ ಶಾಲಾ-ಕಾಲೇಜು ಆರಂಭಿಸಿದರೆ ಭಾರೀ ಅನಾಹುತ ಎದುರಿಸಬೇಕಾಗುತ್ತದೆ; ಸರ್ಕಾರಕ್ಕೆ ಎಚ್​ಡಿಕೆ ಎಚ್ಚರಿಕೆ
ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ
  • Share this:
ಬೆಂಗಳೂರು; ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭ ವಿಚಾರ ಕುರಿತು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ಶಾಲಾ-ಕಾಲೇಜು ಆರಂಭದ ವಿಷಯದಲ್ಲಿ ಆತುರದ ನಿರ್ಧಾರ ಕೈಗೊಳ್ಳದಂತೆ ಸರ್ಕಾರಕ್ಕೆ ಕಿವಿ ಮಾತು ಹೇಳಿದ್ದಾರೆ.

ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತಾಗುತ್ತದೆ.. ಹುಷಾರ್...!! ಇಂತಹ ಯಾವುದೇ ನಿರ್ಧಾರ ತಕ್ಷಣ ಕೈಗೊಳ್ಳಬಾರದು ಎಂದು ಸರ್ಕಾರಕ್ಕೆ  ಕಿವಿಮಾತು ಹೇಳಿದ್ದಾರೆ.

ಇದನ್ನು ಓದಿ: ರಾಮನಗರಕ್ಕೆ ನಿಖಿಲ್, ಚನ್ನಪಟ್ಟಣಕ್ಕೆ ಹೆಚ್ಡಿಕೆ ಬಹುತೇಕ ಫಿಕ್ಸ್; ಜೆಡಿಎಸ್​ನಲ್ಲಿ ಹೊಸ ಪ್ಲ್ಯಾನ್

ಮದ್ದಿಲ್ಲದ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಇಂತಹ ಕಾಲಘಟ್ಟದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ನಿರ್ಧಾರದಿಂದ ಹಿಂದೆ ಸರಿಯಲೇಬೇಕು. ಇಲ್ಲದಿದ್ದರೆ ಸರ್ಕಾರವೇ ಮುಂದಿನ ಎಲ್ಲಾ ಅನಾಹುತಗಳ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಮದ್ದಿಲ್ಲದ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಇಂತಹ ಕಾಲಘಟ್ಟದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ನಿರ್ಧಾರದಿಂದ ಹಿಂದೆ ಸರಿಯಲೇಬೇಕು. ಇಲ್ಲದಿದ್ದರೆ ಸರ್ಕಾರವೇ ಮುಂದಿನ ಎಲ್ಲಾ ಅನಾಹುತಗಳ ಹೊಣೆ ಹೊರಬೇಕಾಗುತ್ತದೆ.

ಶಾಲಾ-ಕಾಲೇಜು ಆರಂಭಿಸುವ ವಿಚಾರದಲ್ಲಿ ಮಾತ್ರ ಸರ್ಕಾರ ಮೈಯೆಲ್ಲ ಕಣ್ಣಾಗಿರಬೇಕು. ಈಗ ಶಾಲಾ-ಕಾಲೇಜು ಆರಂಭಿಸುವ ಉಮೇದಿಯಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಮತ್ತೊಮ್ಮೆ ಆಗ್ರಹಿಸುತ್ತೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.
Published by: HR Ramesh
First published: November 6, 2020, 8:56 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories