ಬೆಂಗಳೂರು; ರಾಜರಾಜೇಶ್ವರ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಬರೋಬ್ಬರಿ 57 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರನ್ನು ಸೋಲಿಸಿದ್ದಾರೆ. ಮುನಿರತ್ನ ಗೆಲುವು ಅಧಿಕೃತವಾಗಿ ಘೋಷಣೆಯಾಗುತ್ತಿದ್ದಂತೆ ರಾಜ್ಯ ಬಿಜೆಪಿ ಟ್ವಿಟ್ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದೆ.
ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯ ಅವರು ಆರ್ ಆರ್ ನಗರದಲ್ಲಿ ಬಿಜೆಪಿ ಅಲೆಯೇ ಇಲ್ಲ ಎಂದು ಹೇಳಿದ್ದರು. ಇದೀಗ ಅಲ್ಲಿ ಭರ್ಜರಿ ಅಂತರದಿಂದ ಗೆಲುವು ದಾಖಲಿಸುತ್ತಿದ್ದಂತೆ ಇದೇ ಹೇಳಿಕೆಯನ್ನು ಇಟ್ಟುಕೊಂಡು ರಾಜ್ಯ ಬಿಜೆಪಿ ಸಿದ್ದರಾಮಯ್ಯ ಅವರನ್ನು ವ್ಯಂಗ್ಯವಾಗಿ ಟೀಕಿಸಿದೆ.
ಸಿದ್ದರಾಮಯ್ಯ: ರಾಜರಾಜೇಶ್ವರಿನಗರದಲ್ಲಿ ಬಿಜೆಪಿಯ ಅಲೆಯೇ ಇಲ್ಲ . . . ಮತದಾರ; ಅಯ್ಯೋ ಸಿದ್ದರಾಮಯ್ಯ ನವರೇ ಇಲ್ಲಿ ನಿಮ್ಮ ಪಕ್ಷವೇ ಇಲ್ಲವಲ್ಲ. ಕಾಂಗ್ರೆಸ್ ಕಾಮಿಡಿಯನ್ ಸಿದ್ದರಾಮಯ್ಯ ಎಂದು ಟ್ವೀಟ್ ಮೂಲಕ ಗೇಲಿ ಮಾಡಿದೆ.
ಸಿದ್ದರಾಮಯ್ಯ: ರಾಜರಾಜೇಶ್ವರಿನಗರದಲ್ಲಿ ಬಿಜೆಪಿಯ ಅಲೆಯೇ ಇಲ್ಲ . . .
ಮತದಾರ: ಅಯ್ಯೋ @siddaramaiah ನವರೇ ಇಲ್ಲಿ ನಿಮ್ಮ @INCKarnataka ಪಕ್ಷವೇ ಇಲ್ಲವಲ್ಲ ! ! ! #CONgressComedianSiddaramaiah
— BJP Karnataka (@BJP4Karnataka) November 10, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ