State Budget 2022: ಶೈಕ್ಷಣಿಕ ಕ್ಷೇತ್ರ- ನೂತನ ಪಠ್ಯಕ್ರಮ ರಚನೆಗೆ ನಿರ್ಧಾರ, ಉದ್ಯೋಗ ವಲಯಕ್ಕೂ ಬಂಪರ್ ಕೊಡುಗೆ

ಚಿನ್ನ ಮತ್ತು ಆಭರಣ ಕುಶಲ ಕರ್ಮಿಗಳ ಹಾಗೂ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಲಿಂಕೇಜ್ ಸೌಲಭ್ಯ ಒದಗಿಸಲು ಖಾಸಗಿ ಸಹಭಾಗಿತ್ವದಲ್ಲಿ 'ಮೆಗಾ ಜ್ಯುವೆಲ್ಲರಿ ಪಾರ್ಕ್' ಸ್ಥಾಪನೆ ಮಾಡಲಾಗ್ತಿದೆ. ಆ ಮೂಲಕ  ಬೆಂಗಳೂರಿನಲ್ಲಿ 10 ಸಾವಿರ ಜನರಿಗೆ ಉದ್ಯೋಗಾವಕಾಶ ಸಿಗಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಇಂದು ಸಿಎಂ ಬಸವರಾಜ್ ಬೊಮ್ಮಾಯಿ(CM Basavaraj Bommai) ತಮ್ಮ ಚೊಚ್ಚಲ ರಾಜ್ಯ ಬಜೆಟ್(State Budget 2022) ಮಂಡನೆ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ(Education Sector) ಏನೆಲ್ಲಾ ಸಿಕ್ಕಿದೆ ಹಾಗೂ ಉದ್ಯೋಗ ವಲಯಕ್ಕೆ ಯಾವೆಲ್ಲಾ ಕೊಡುಗೆಗಳನ್ನು ನೀಡಿದ್ದಾರೆ ಎಂಬ ಕುತೂಹಲ ಜನ ಸಾಮಾನ್ಯರಿಗೆ ಇದ್ದೇ ಇರುತ್ತದೆ. ಇಲ್ಲಿ ನಾವು ಈ ಸಲದ ಬಜೆಟ್​​ನಲ್ಲಿ ಸಿಎಂ ಬೊಮ್ಮಾಯಿ ಶಿಕ್ಷಣ ಕ್ಷೇತ್ರ ಮತ್ತು ಉದ್ಯೋಗ ವಲಯಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಹೇಳಿದ್ದೇವೆ. 

ಗುಣಮಟ್ಟದ ಶಿಕ್ಷಣ

ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ ಮಾಡಲಾಗ್ತಿದೆ. ಹೋಬಳಿ ಮಟ್ಟದಲ್ಲಿ "ಮಾದರಿ ಶಾಲೆಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ ಮಾಡಲಾಗ್ತಿದೆ. ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ ನೀಡಲು ನಿರ್ಧರಿಸಲಾಗಿದೆ. ಆಯ್ದ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ ನೀಡಲಾಗುತ್ತದೆ.

ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ ಮುಖ್ಯ ಮಂತ್ರಿಗಳ ‘ವಿದ್ಯಾರ್ಥಿ ಮಾರ್ಗದರ್ಶಿನಿ‘ ಯೋಜನೆ ಜಾರಿ ಮಾಡಲಾಗಿದೆ.

ಉದ್ಯೋಗ ವಲಯಕ್ಕೆ ಕೊಡುಗೆ

ಬೆಂಗಳೂರಿನಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣ ಮಾಡಲಾಗ್ತಿದೆ. ಚಿನ್ನ ಮತ್ತು ಆಭರಣ ಕುಶಲ ಕರ್ಮಿಗಳ ಹಾಗೂ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಲಿಂಕೇಜ್ ಸೌಲಭ್ಯ ಒದಗಿಸಲು ಖಾಸಗಿ ಸಹಭಾಗಿತ್ವದಲ್ಲಿ 'ಮೆಗಾ ಜ್ಯುವೆಲ್ಲರಿ ಪಾರ್ಕ್' ಸ್ಥಾಪನೆ ಮಾಡಲಾಗ್ತಿದೆ. ಆ ಮೂಲಕ  ಬೆಂಗಳೂರಿನಲ್ಲಿ 10 ಸಾವಿರ ಜನರಿಗೆ ಉದ್ಯೋಗಾವಕಾಶ ಸಿಗಲಿದೆ.

ಮುಂದಿನ ಎರಡು ವರ್ಷ ಸರ್ಕಾರದಿಂದಲೇ ಮೈಶುಗುರ್ ಕಾರ್ಖಾನೆ ನಡೆಸಲು ತೀರ್ಮಾನ ಮಾಡಲಾಗಿದೆ.  ಯಂತ್ರೋಪಕರಣ ದುರಸ್ತಿಗೆ 50 ಕೋಟಿ ಮೀಸಲಿಡಲಾಗಿದೆ.  ಕಲಬುರುಗಿ, ವಿಜಯಪುರದಲ್ಲಿ ಮೆಗಾ -ಟೆಕ್ಸೆಟೈಲ್ ಪಾರ್ಕ್ ಸ್ಥಾಪನೆ ಮಾಡಲಾಗ್ತಿದೆ. ನವಲಗುಂದ , ರಾಣೆಬೆನ್ನೂರಿನಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲಾಗ್ತಿದೆ.

ಗೌರವ ಧನ ಹೆಚ್ಚಳ

GRA ಕಾರ್ಯಕರ್ತೆಯರಿಗೆ ಗ್ರಾಮ ಸಹಾಯಕರಿಗೆ ಮತ್ತು ಬಿಸಿಯೂಟ ತಯಾರಕರಿಗೆ ಹಾಗೂ ಸಹಾಯಕರಿಗೆ ತಲಾ 1000 ರೂ. ಗೌರವಧನ ಹೆಚ್ಚಳ ಮಾಡಲಾಗಿದೆ.  ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾನುಭವ ಆಧಾರದಲ್ಲಿ 1000 ರೂ. – 1500 ರೂ.ಗಳಷ್ಟು ಗೌರವಧನ ಹೆಚ್ಚಿಸಲಾಗಿದೆ.  ಪೌರಕಾರ್ಮಿಕರಿಗೆ ಮಾಸಿಕ 2,000 ರೂ. ಸಂಕಷ್ಟ ಭತ್ಯೆ, ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ರೂ. ಪ್ರೋತ್ಸಾಹಕ ನೀಡಲಾಗ್ತಿದೆ.

ನವಲಗುಂದ ರಾಣೆಬೆನ್ನೂರು ತಾಲೂಕಿನಲ್ಲಿ ಜವಳಿ ಪಾರ್ಕ್ ಸ್ಥಾಪನೆ ಮಾಡಲಾಗ್ತಿದೆ. ಆ ಮೂಲಕ 5000 ಜನರಿಗೆ ಉದ್ಯೋಗಾವಕಾಶ ಸಿಗಲಿದೆ. ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡಲಾಗ್ತಿದೆ.

50 ವರ್ಷ ಮೇಲ್ಪಟ್ಟ ಸಂಕಷ್ಟದಲ್ಲಿರುವ ಕುಸ್ತಿಪಟುಗಳ ಮಾಸಾಶನ ಮೊತ್ತ 1,000 ರೂ. ಗೆ ಹೆಚ್ಚಳ ಮಾಡಲಾಗಿದೆ.  ರಾಜ್ಯದಲ್ಲಿ 3 ಲಕ್ಷ ಹೆಣ್ಣು ಮಕ್ಕಳಿಗೆ ಸ್ವಯಂ-ರಕ್ಷಣೆ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ.

ನೇಕಾರರ ಹಿತರಕ್ಷಣೆಗಾಗಿ  ನೇಕಾರರ ಸಮ್ಮಾನ್" ಯೋಜನೆಯಡಿ ನೋಂದಾಯಿತ ಕೈಮಗ್ಗ ನೇಕಾರರ ವಾರ್ಷಿಕ ನೆರವನ್ನು 5,000 ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ. ರಾಜ್ಯದ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್‌ಗಳ ಮೂಲಕ ನೇಕಾರರು ಪಡೆಯುವ ಸಹಾಯಧನ ಸೌಲಭ್ಯ ಸಾಲದ ಮೇಲೆ ಶೇ.8ರಷ್ಟು ಬಡ್ಡಿ ನೀಡಲಾಗುತ್ತೆ. ನೇಕಾರರ ಮಕ್ಕಳಿಗೆ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ಯೋಜನೆ ಜಾರಿ ಮಾಡಲಾಗಿದೆ.

ಕಾರ್ಮಿಕರ ಕ್ಷೇಮಾಭಿವೃದ್ಧಿ

2.30 ಲಕ್ಷ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2610 ಕೋಟಿ ರೂ. ಗಳ ಯೋಜನೆಗಳ ಅನುಷ್ಠಾನ ಮಾಡಲಾಗ್ತಿದೆ.  ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್‌ ಸಂಚಾರಿ ಕ್ಲಿನಿಕ್ ಪ್ರಾರಂಭ ಮಾಡಲು ನಿರ್ಧರಿಸಲಾಗಿದೆ.  ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ನೀಡಲು ರಾಜ್ಯಾದ್ಯಂತ ಬಸ್ ಪಾಸ್ ಯೋಜನೆ ವಿಸ್ತರಿಸಲಾಗ್ತಿದೆ.

• ಕೇಂದ್ರ ಸರ್ಕಾರದ ನೆರವಿನೊಂದಿಗೆ ಹುಬ್ಬಳ್ಳಿ ಮತ್ತು ದಾವಣಗೆರೆ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳ ಹಾಸಿಗೆಗಳ ಸಾಮರ್ಥ್ಯ 100ಕ್ಕೆ ಹೆಚ್ಚಳ ಮಾಡಲಾಗ್ತಿದೆ. 19 ಹೊಸ ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗ್ತಿದೆ.

ಯೆಲ್ಲೋ ಬೋರ್ಡ್ ಚಾಲಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾನಿಧಿ ಯೋಜನೆ; ಆರೋಗ್ಯ ಸೌಲಭ್ಯಕ್ಕೆ ವಿಶೇಷ ಯೋಜನೆ ರೂಪಿಸಲಾಗಿದೆ.

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳನ್ನು ಜಿಲ್ಲಾ ಮಟ್ಟದಲ್ಲಿ ಪ್ರಾರಂಭಿಸಲು ಅನುವಾಗುವಂತೆ 200ಕ್ಕೂ ಹಾಸಿಗೆಗಳ ಸಾಮರ್ಥ್ಯವಿರುವ ಆಸ್ಪತ್ರೆಗಳನ್ನು ಎನ್.ಎಂ.ಸಿ.ಯ ಅನುಮೋದನೆ ಪಡೆದು ಬೋಧನಾ ಆಸ್ಪತ್ರೆಗಳಾಗಿ ಪರಿವರ್ತನೆ ಮಾಡಲಾಗ್ತಿದೆ. ಈ ವರ್ಷ ತುಮಕೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಪ್ರಾರಂಭ ಮಾಡಲಾಗ್ತಿದೆ.

“ಮುಖ್ಯಮಂತ್ರಿ ಆರೋಗ್ಯ ವಾಹಿನಿ” ಯೋಜನೆಯಡಿ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ಒದಗಿಸಲು ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಚಾರಿ ಪ್ರಾರಂಭವಾಗಲಿದೆ. ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ ಮಾಡಲಾಗ್ತಿದೆ.

ಬಡವರಿಗೆ ವೈದ್ಯಕೀಯ ಶಿಕ್ಷಣ ಅವಕಾಶ ಒದಗಿಸಲು ಕೈಗೊಳ್ಳುವ ಕ್ರಮಗಳು:

ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ

ಸರ್ಕಾರಿ ಕೋಟಾದಡಿ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಬ್ಯಾಂಕುಗಳಿಂದ ಶೈಕ್ಷಣಿಕ ಸಾಲ ಒದಗಿಸಲು ನೆರವು.

ಖಾಸಗಿ ವೈದ್ಯಕೀಯ ಕಾಲೇಜುಗಳ ವರ್ಗೀಕರಣ ಹಾಗೂ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕ ನಿಗದಿಪಡಿಸಲು ನಿರ್ಧಾರ ಮಾಡಲಾಗಿದೆ.

ಅಪೌಷ್ಟಿಕತೆ ನಿವಾರಣೆಗೆ ಒತ್ತು ನೀಡಲಾಗಿದೆ.

ಪೌಷ್ಟಿಕ ಕರ್ನಾಟಕ ಯೋಜನೆಯಡಿ 93 ಕೋಟಿ ವೆಚ್ಚದಲ್ಲಿ ಪ್ರಾಯೋಗಿಕವಾಗಿ ರಾಜ್ಯದ 14 ಜಿಲ್ಲೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಣೆ ಮಾಡಲು ನಿರ್ಧರಿಸಲಾಗಿದೆ.

ಜಿಲ್ಲಾ ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಆರಂಭ ಮಾಡಲಾಗ್ತಿದೆ. ಮೊದಲಿಗೆ ತುಮಕೂರು ಆಸ್ಪತ್ರೆ ಯಲ್ಲಿ ಆರಂಭ ಮಾಡಲು ಚಿಂತನೆ ನಡೆಸಲಾಗಿದೆ.

'ನೋಡಿ ಕಲಿ ಮಾಡಿ ತಿಳಿ' ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆ ಮಾಡಲಾಗ್ತಿದೆ.

Karnataka Institute of Technology ಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ ಮಾಡಲು ನಿರ್ಧರಿಸಲಾಗಿದೆ. ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ಮೈಸೂರಿನಲ್ಲಿ 30 ಕೋಟಿ ರೂ. ವೆಚ್ಚದಲ್ಲಿ Mysuru The Global Technology Center plug & play ಸೌಲಭ್ಯ ಸ್ಥಾಪನೆ ಮಾಡಲು ನಿರ್ಧಾರ ಮಾಡಲಾಗಿದೆ.

ರಾಜ್ಯದ 15 ಪ್ರವಾಸಿ ತಾಣಗಳ AR/VR ತುಣುಕುಗಳ ಸೃಜನೆಗೆ 50 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಕೇಂದ್ರ ಮತ್ತು ಉದ್ಯಮಿಗಳ ಸಹಭಾಗಿತ್ವದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ Karnataka Acceleration network ಸ್ಥಾಪನೆಗೆ 20 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ.ನಾವಿನ್ಯತೆಯುಳ್ಳ ಕಲ್ಯಾಣ ಕರ್ನಾಟಕ ಭಾಗದ 25 ನವೋದ್ಯಮಗಳನ್ನು ಉತ್ತೇಜಿಸಲು Elevate Kalyana karnataka ಕಾರ್ಯಕ್ರಮ ರೂಪಿಸಲಾಗ್ತಿದೆ. ಮೈಸೂರು, ಮಂಗಳೂರು, ಹುಬ್ಬಳ್ಳಿಯಲ್ಲಿ ಸ್ಪಾರ್ಟಪ್ ಗಳಿಗೆ ಪ್ರೋತ್ಸಾಹ ನೀಡಲು ತಲಾ 20 ಕೋಟಿ ರೂ. ವೆಚ್ಚದಲ್ಲಿ Beyond Bengaluru Cluster Seed Fund for Startups ಸಾಲಿನಲ್ಲಿ 12 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಬೆಳಗಾವಿಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ Global Emerging Technology Design Centre ಸ್ಥಾಪಿಸಲಾಗುವುದು.
Published by:Latha CG
First published: