HOME » NEWS » State » STATE CABINET MEETING IS TOUGH RULES ENFORCED FOR CORONA CONTROL MAK

Cabinet Meeting: ಇಂದು ಸಂಜೆ ರಾಜ್ಯ ಸಚಿವ ಸಂಪುಟ ಸಭೆ; ಕೊರೋನಾ ನಿಯಂತ್ರಣಕ್ಕೆ ಟಫ್​ ರೂಲ್ಸ್​ ಜಾರಿ ಸಾಧ್ಯತೆ?

ಇಂದು ಸಂಜೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವ ಸಂಪುಟ ಸಭೆ ಕರೆದಿರುವ ಸಿಎಂ ಯಡಿಯೂರಪ್ಪ, ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಟಫ್​ ರೂಲ್ಸ್​ಗಳನ್ನು ಜಾರಿ ಮಾಡುವ ಬಗ್ಗೆ ಸಚಿವರುಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

news18-kannada
Updated:April 22, 2021, 3:09 PM IST
Cabinet Meeting: ಇಂದು ಸಂಜೆ ರಾಜ್ಯ ಸಚಿವ ಸಂಪುಟ ಸಭೆ; ಕೊರೋನಾ ನಿಯಂತ್ರಣಕ್ಕೆ ಟಫ್​ ರೂಲ್ಸ್​ ಜಾರಿ ಸಾಧ್ಯತೆ?
ಸಿಎಂ ಬಿ.ಎಸ್.​ಯಡಿಯೂರಪ್ಪ.
  • Share this:
ಬೆಂಗಳೂರು (ಏಪ್ರಿಲ್ 22); ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು, ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ‌ಹೆಚ್ಚು‌ ಜನರು ಹಾಗೂ ಏಪ್ರಿಲ್ 17ರಿಂದ ದಿನ‌ ಒಂದರಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕೊರೋನಾ ಸೋಂಕು ಪೀಡಿತರಾಗುತ್ತಿದ್ದಾರೆ. ಈಗ ಮೂರು ಲಕ್ಷ ಕೊರೊನಾ ಪ್ರಕರಣಗಳು ಗೋಚರಿಸಲು ಆರಂಭವಾಗಿವೆ. ಕರ್ನಾಟಕದಲ್ಲೂ ಈ ಪರಿಸ್ಥಿತಿ ಭಿನ್ನವಾಗೇನು ಇಲ್ಲ. ಈ ನಡುವೆ ಕೊರೋನಾ ಸೋಂಕು ಕಾಣಿಸಿಕೊಂಡ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಬಿಡುಗಡೆಯಾಗಿದ್ದು, ಇಂದು ಸಂಜೆಯೇ ಕ್ಯಾಬಿನೆಟ್​ ಮೀಟಿಂಗ್ ಕರೆದಿದ್ದಾರೆ ಎನ್ನಲಾಗಿದೆ.

ಇಂದು ಸಂಜೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವ ಸಂಪುಟ ಸಭೆ ಕರೆದಿರುವ ಸಿಎಂ ಯಡಿಯೂರಪ್ಪ, ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಟಫ್​ ರೂಲ್ಸ್​ಗಳನ್ನು ಜಾರಿ ಮಾಡುವ ಬಗ್ಗೆ ಸಚಿವರುಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಹೀಗಾಗಿ ಕೊರೋನಾ ಕಾನೂನು ಮತ್ತಷ್ಟು ಬಿಗಿಯಾಗಲಿದ್ದು, ಲಾಕ್​ಡೌನ್ ಸಹ ಹೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ನಡುವೆ ಕೆಲವು ಜಿಲ್ಲಾ ಉಸ್ತುವಾರಿ ಸಚಿವರುಗಳು ಜಿಲ್ಲೆಗಳಲ್ಲಿ  ಬೀಡು ಬಿಟ್ಟು ಕೊರೋನಾ ನಿಯಂತ್ರಣ ಮಾಡಲು ಕ್ರಮ ವಹಿಸುತ್ತಿದ್ದಾರೆ. ಅವರೊಂದಿಗೂ ವೀಡಿಯೋ ಕಾನ್ಪೆರೆನ್ಸ್ ಮೂಲಕ ಸಮಾಲೋಚನೆ ನಡೆಸಲಿರುವ ಬಿಎಸ್​ ಯಡಿಯೂರಪ್ಪ, ಸರ್ಕಾರದ ಟಫ್ ರೂಲ್ಸ್ ಗಳನ್ನು ಅನುಷ್ಠಾನಗೊಳಿಸಿ, ಅದನ್ನು ಜನರು ಕಟ್ಟು ನಿಟ್ಟಾಗಿ ಪಾಲಿಸಲು ಕ್ರಮ ವಹಿಸುವುದು, ಇವಾಗ ಇರುವ ಕಠಿಣ ಕ್ರಮಗಳ ಜೊತೆ ಮತ್ತೇನು ಹೊಸದಾಗಿ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕದಲ್ಲಿ ಕೊರೋನಾ:

ಕರ್ನಾಟಕದಲ್ಲಿ ಕೊರೋನಾ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಮನೆಯಲ್ಲಿ ಮೂರು- ನಾಲ್ಕು ಜನಕ್ಕೆ ಕೊರೋನಾ ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ ಮಾಸ್ಕ್, ಅಂತರ ಬಿಟ್ಟರೆ ಬೇರೆ ಪರಿಹಾರ ಇಲ್ಲ. ಜನ ಮನೆಯಿಂದ ಹೊರಗೆ ಬರಬಾರದು. ಅಗತ್ಯವಾಗಿ ಜನರು ಹೊರಗೆ ಬರಬೇಡಿ. ನಾವು ಬಿಗಿಯಾದ ಕ್ರಮ ಕೈಗೊಂಡಿದ್ದೇವೆ. ಇಂದು ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚೆ ನಡೆಸಲಿದ್ದೇನೆ. ಸಭೆಯಲ್ಲಿ ಕೊರೋನಾ ತಡೆ ಸಂಬಂಧ ಚರ್ಚೆ ಮಾಡುತ್ತೇನೆ. ಕೊರೋನಾ ನಿಯಂತ್ರಣ ಮಾಡದೆ ಇರುವ ಪರಿಸ್ಥಿತಿಗೆ ಬಂದು ತಲುಪಿದ್ದೇವೆ. ಇನ್ನಾದರೂ ಜನರು ಅನಗತ್ಯವಾಗಿ ಓಡಾಡೋದನ್ನು ನಿಲ್ಲಿಸಬೇಕು ಎಂದು ಸಿಎಂ ಯಡಿಯೂರಪ್ಪ ಎಚ್ಚರಿಸಿದ್ದಾರೆ.

ಇದನ್ನೂ ಓದಿ: Coronavirus India: ಭಾರತದಲ್ಲಿ ಇನ್ನಷ್ಟು ಕ್ರೂರ ರೂಪದಲ್ಲಿ ಕಾಣಿಸಿಕೊಳ್ಳಲಿದೆ ಮಹಾಮಾರಿ ಕೊರೋನಾ!

ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಂಗಳಾ ಅಂಗಡಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ತೀವ್ರ ಜ್ವರ ಮತ್ತು ಸುಸ್ತಿನಿಂದ ಪ್ರಚಾರ ಕಾರ್ಯವನ್ನು ಅರ್ಧಕ್ಕೇ ನಿಲ್ಲಿಸಿ ಬೆಂಗಳೂರಿಗೆ ವಾಪಾಸ್ ಬಂದಿದ್ದರು. ಆಗ ಅವರ ಪರೀಕ್ಷೆ ಮಾಡಿದಾಗ ಕೊರೋನಾ ಪಾಸಿಟಿವ್ ಬಂದಿದ್ದು ಖಚಿತವಾಗಿತ್ತು.

ಕಳೆದ ವರ್ಷ ಕೂಡ ಸಿಎಂ ಯಡಿಯೂರಪ್ಪ ಕೊರೋನಾದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಾರಿ 2 ಕೊರೋನಾ ಲಸಿಕೆ ಹಾಕಿಸಿಕೊಂಡ ಬಳಿಕವೂ ಮತ್ತೆ ಅವರಿಗೆ ಕೊರೋನಾ ಸೋಂಕು ತಗುಲಿತ್ತು. ಆಸ್ಪತ್ರೆಯಿಂದಲೇ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಸೇರಿದಂತೆ ಕೊರೋನಾ ನಿಯಮಾವಳಿಯನ್ನು ಸಿಎಂ ಯಡಿಯೂರಪ್ಪ ಜಾರಿ ಮಾಡಿದ್ದರು.
Published by: MAshok Kumar
First published: April 22, 2021, 3:09 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories