ಇಂದು ರಾಜ್ಯ ಸಚಿವ ಸಂಪುಟ ಸಭೆ; ವಿಶ್ವ ಬಂಡವಾಳ ಹೂಡಿಕೆ ಸಮಾವೇಶ ಸೇರಿದಂತೆ ಪ್ರಮುಖ ವಿಚಾರಗಳ ಚರ್ಚೆ?

Cabinet Meeting; ಕೊರೋನಾ ವೈರಸ್ ಹಾವಳಿಯಿಂದ ಮುಂದೂಡಲ್ಪಟ್ಟಿಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು 2022 ರ ಫೆಬ್ರವರಿಯಲ್ಲಿ ಆಯೋಜಿಸಲು ಒಪ್ಪಿಗೆ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಬಿ.ಎಸ್.​ ಯಡಿಯೂರಪ್ಪ.

ಬಿ.ಎಸ್.​ ಯಡಿಯೂರಪ್ಪ.

 • Share this:
  ಬೆಂಗಳೂರು (ಜುಲೈ 15); ವಿಶ್ವ ಬಂಡವಾಳ ಹೂಡಿಕೆ ಸಮಾವೇಶ 2022 ಸೇರಿದಂತೆ ಅನೇಕ ವಿಚಾರಗಳ ಚರ್ಚೆಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಚಿವ ಸಂಪುಟ ಸಭೆ ಕರೆದಿದ್ದಾರೆ ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ಹಲವು ಮಹತ್ವ ವಿಷಯಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಸಲಿಗೆ ಕಳೆದ ವರ್ಷವೇ ವಿಶ್ವ ಬಂಡವಾಳ ಹೂಡಿಕೆ ಸಮಾವೇಶ ನಡೆಯಬೇಕಿತ್ತು. ಆದರೆ, ಕೊರೋನಾ ಸಾಂಕ್ರಾಮಿಕ ಕಾರಣದಿಂದಾಗಿ ಸಮಾವೇಶ ನಡೆದಿರಲಿಲ್ಲ. ಈ ಸಮಾವೇಶ ನಡೆದರೆ ಬೆಂಗಳೂರು ಸೇರಿದಂತೆ ರಾಜ್ಯಕ್ಕೆ ಅಪಾರ ಬಂಡವಾಳ ಹರಿದುಬರಲಿದೆ ಎನ್ನಲಾಗಿತ್ತು. ಆದರೆ, ಕೊರೋನಾ ಕಾರಣಕ್ಕೆ ಈ ಸಮಾವೇಶವನ್ನುಮುಂದೂಡಲಾಗಿತ್ತು. ಆದರೆ, ಈ ವರ್ಷ ಬಂಡವಾಳ ಸಮಾವೇಶ ನಡೆಸಲೇಬೇಕು ಎಂದು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

  ಕೊರೋನಾ ವೈರಸ್ ಹಾವಳಿಯಿಂದ ಮುಂದೂಡಲ್ಪಟ್ಟಿಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು 2022 ರ ಫೆಬ್ರವರಿಯಲ್ಲಿ ಆಯೋಜಿಸಲು ಒಪ್ಪಿಗೆ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದರ ಜೊತೆಗೆ ಕೊರೋನಾ ರೋಗಿಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಘಟಕ ಆರಂಭಿಸಲು ವಿಶೇಷ ಪ್ರೋತ್ಸಾಹ ನೀಡುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ.

  ಇದಲ್ಲದೆ, ರಾಜ್ಯದಲ್ಲಿ 2021-22 ನೇ ಸಾಲಿನ ಬೆಳೆ ಸಮೀಕ್ಷೆೆ ಯೋಜನೆ ಜಾರಿ, ಗೋಹತ್ಯೆೆ ನಿಷೇಧ ಕಾಯ್ದೆ ಅನ್ವಯ ರಾಜ್ಯದ ಪ್ರತಿ ಜಿಲ್ಲೆೆಯಲ್ಲಿಯೂ ಗೋ ಶಾಲೆ ತೆರೆಯಲು ಸಂಪುಟದ ಅನುಮತಿ ನೀಡುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಜೆಒಸಿ ಕೋರ್ಸ್‌ಗಳನ್ನು ಪಿಯುಸಿ ತತ್ಸಮಾನ ಎಂದು ಪರಿಗಣಿಸುವ ಬಗ್ಗೆಯೂ ಈಗಾಗಲೇ ಶೈಕ್ಷಣಿಕ ವಲಯದಲ್ಲಿ ಚರ್ಚೆ ಶುರುವಾಗಿದ್ದು, ಪರ-ವಿರೋಧ ಮಾತುಗಳು ಕೇಳಿ ಬರುತ್ತಿದೆ ಹೀಗಾಗಿ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

  ಇದನ್ನೂ ಓದಿ: ಹರಿಯಾಣ; ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ; ಪೇದೆ ಸೇರಿ 4 ಜನರ ವಿರುದ್ಧ ಪ್ರಕರಣ

  ರಾಜ್ಯದಲ್ಲಿ 108 ಜನ ಜೀವಾವಧಿ ಶಿಕ್ಷೆೆಗೆ ಒಳಗಾಗಿದ್ದಾರೆ. ಸನ್ನಡತೆ ಆಧಾರದಲ್ಲಿ ಇವರನ್ನು ಬಿಡುಗಡೆ ಮಾಡಬೇಕು ಎಂಬ ಮಾತುಗಳು ಸಹ ಕೇಳಿಬರುತ್ತಿದೆ. ಹೀಗಾಗಿ ಈ ಬಗ್ಗೆಯೂ , ಕರ್ನಾಟಕ ಕಾರಾಗೃಹ ಅಭಿವೃದ್ದಿ ಮಂಡಳಿ ಮಾಡುವ ಕುರಿತು ಸಂಪುಟದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

  ಇದನ್ನೂ ಓದಿ: Mekedatu Project: ನಾಳೆ ಕೇಂದ್ರ ಜಲಸಂಪನ್ಮೂಲ ಸಚಿವರ ಭೇಟಿ ಮಾಡಲಿರುವ ತಮಿಳುನಾಡು ಸರ್ವಪಕ್ಷ ನಿಯೋಗ

  ಮೈಸೂರಿನ ಲಲಿತ ಮಹಲ್ ಪ್ಯಾಾಲೇಸ್ ನಿರ್ವಹಣೆಗೆ ಹೊಟೆಲ್ ಆಪರೇಟರ್ ಆಯ್ಕೆ, ಕೊಪ್ಪಳ, ಹಾವೇರಿ ಹಾಗೂ ದಕ್ಷಿಿಣ ಕನ್ನಡ ಜಿಲ್ಲೆೆಗಳಲ್ಲಿ ಜಾರಿಯಲ್ಲಿರುವ ವಿವಿಧ ನೀರಾವರಿ ಯೋಜನೆಗಳಿಗೆ ಅನುಮೋದನೆ, ಅಲ್ಲದೇ ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಾಪಿಸುವ ಕುರಿತಂತೆಯೂ ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಈ ಎಲ್ಲಾ ವಿಚಾರಗಳನ್ನೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚರ್ಚೆ ನಡೆಸಿದ ಬಳಿಕೆ ಇಂದು ಅಂತಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿದುಬಂದಿದೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: