HOME » NEWS » State » STATE CABINET RESHUFFLE MINISTER SHASHIKALA JOLLE TO BE REPLACED MAK

ರಾಜ್ಯ ಸಂಪುಟ ಪುನಾರಚನೆ, ಶಶಿಕಲಾ ಜೊಲ್ಲೆ ಸ್ಥಾನಕ್ಕೆ ಕುತ್ತು?; ದೆಹಲಿಗೆ ದೌಡಾಯಿಸಿರುವ ಸಚಿವೆ

ಸಚಿವ ಸ್ಥಾನದಿಂದ ತಮ್ಮನ್ನು ಕೈಬಿಡುವ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಸಚಿವೆ ಶಶಿಕಲಾ ಜೊ‌ಲೆ, ನಿನ್ನೆಯೇ ಪತಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಜೊತೆ ದೆಹಲಿಗೆ ತೆರಳಿದ್ದಾರೆ. ಅಲ್ಲದೆ, ದೆಹಲಿಯ ನಾಯಕರನ್ನು ಭೇಟಿ ಮಾಡಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಲಾಬಿಗೆ ಮುಂದಾಗಿದ್ದಾರೆ.

news18-kannada
Updated:July 29, 2020, 7:56 AM IST
ರಾಜ್ಯ ಸಂಪುಟ ಪುನಾರಚನೆ, ಶಶಿಕಲಾ ಜೊಲ್ಲೆ ಸ್ಥಾನಕ್ಕೆ ಕುತ್ತು?; ದೆಹಲಿಗೆ ದೌಡಾಯಿಸಿರುವ ಸಚಿವೆ
ಸಿಎಂ ಯಡಿಯೂರಪ್ಪ ಹಾಗೂ ಸಚಿವೆ ಶಶಿಕಲಾ ಜೊಲ್ಲೆ.
  • Share this:
ಬೆಂಗಳೂರು (ಜುಲೈ 29); ವಿಧಾನ ಪರಿಷತ್ ಚುನಾವಣೆ ಮುಗಿದ ಬೆನ್ನಿಗೆ ರಾಜ್ಯದಲ್ಲಿ ಸಚಿವ ಸಂಪುಟ ಮತ್ತೆ ಪುನಾರಚನೆಯಾಗುವ ಎಲ್ಲಾ ಸಾಧ್ಯತೆಗಳು ಮುಂದಿದೆ. ಆದರೆ, ಈ ಬಾರಿ ಸಂಪುಟ ಪುನಾರಚನೆ ವೇಳೆ ಸಿಎಂ ಯಡಿಯೂರಪ್ಪ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಬೆಳಗಾವಿಯ ನಿಪ್ಪಾಣಿ ಕ್ಷೇತ್ರದ ಶಾಸಕಿಯಾಗಿರುವ ಶಶಿಕಲಾ ಜೊಲ್ಲೆ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡಲಾಗಿತ್ತು. ಇಲಾಖೆಯಲ್ಲಿ ಇವರು ಉತ್ತಮವಾಗಿಯೇ ಕಾರ್ಯ ನಿರ್ವಹಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಬಿಜೆಪಿಯೊಳಗೆ ಸಚಿವ ಸ್ಥಾನ ಆಕಾಂಕ್ಷಿಗಳ ಸಂಖ್ಯೆ ದಿನೇ ದಿನೇ ಏರುತ್ತಿರುವ ಕಾರಣ ಬಿ.ಎಸ್‌. ಯಡಿಯೂರಪ್ಪ ಅನಿವಾರ್ಯವಾಗಿ ಶಶಿಕಲಾ ಜೊಲ್ಲೆ ಅವರನ್ನು ಸಂಪುಟದಿಂದ ಕೈಬಿಟ್ಟು ಆ ಸ್ಥಾನವನ್ನು ಬೇರೆಯವರಿಗೆ ನೀಡಲು ಮುಂದಾಗಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಸಚಿವ ಸ್ಥಾನದಿಂದ ತಮ್ಮನ್ನು ಕೈಬಿಡುವ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಸಚಿವೆ ಶಶಿಕಲಾ ಜೊ‌ಲೆ, ನಿನ್ನೆಯೇ ಪತಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಜೊತೆ ದೆಹಲಿಗೆ ತೆರಳಿದ್ದಾರೆ. ಅಲ್ಲದೆ, ದೆಹಲಿಯ ನಾಯಕರನ್ನು ಭೇಟಿ ಮಾಡಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಲಾಬಿಗೆ ಮುಂದಾಗಿದ್ದಾರೆ.

ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲು ನಿರ್ಧಾರಿಸಿದ್ದು, ತಮ್ಮ ಇಲಾಖೆಯಲ್ಲಿ ತಾವು ಮಾಡಿದ ಕೆಲಸ, ಪಕ್ಷ ಸಂಘಟನೆ ಬಗ್ಗೆ ವಿವರಣೆ ನೀಡಿ ಕುರ್ಚಿ ಉಳಿಸಿಕೊಳ್ಳಲು ಜೊಲ್ಲೆ ತಂತ್ರ ಹೆಣೆದಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ‘ಕೋವಿಡ್ ರೋಗಿಗಳಿಗೆ ತ್ವರಿತ ಮಾಹಿತಿ ನೀಡಲು ಕೇಂದ್ರೀಕೃತ ವ್ಯವಸ್ಥೆ‘ - ಸಚಿವ ಸುಧಾಕರ್​


Youtube Videoಈಗಾಗಲೇ ಡಿಸಿಎಂ ಲಕ್ಷ್ಮಣ ಸವದಿ ದೆಹಲಿಗೆ ತೆರಳಿ ಹಿರಿಯ ನಾಯಕರನ್ನು ಭೇಟಿ ಮಾಡಿದ್ದು, ಇತ್ತೀಚೆಗೆ ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಈ ನಡುವೆ ಶಶಿಕಲಾ ಜೊಲ್ಲೆ ದಂಪತಿಗಳೂ ದೆಹಲಿಗೆ ತೆರಳಿರುವುದು ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
Published by: MAshok Kumar
First published: July 29, 2020, 7:56 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories