ಡಿಕೆ ಶಿವಕುಮಾರ್​ ಬೆಂಬಲಕ್ಕೆ ನಿಲ್ಲಿ; ರಾಜ್ಯ ಕಾಂಗ್ರೆಸ್​ ನಾಯಕರಿಗೆ ಸೋನಿಯಾ ಗಾಂಧಿ ಆದೇಶ

ಕಾಂಗ್ರೆಸ್​ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಡಿ.ಕೆ. ಶಿವಕುಮಾರ್ ಅವರನ್ನು ಅಕ್ರಮ ಹಣ ಗಳಿಕೆ ಆರೋಪದ ಅಡಿಯಲ್ಲಿ ಬಂಧಿಸಿರುವ ಜಾರಿ ನಿರ್ದೇಶನಾಯಕ ಕಳೆದ ಎರಡು ವಾರಗಳಿಂದ ಸತತವಾಗಿ ವಿಚಾರಣೆ ನಡೆಸುತ್ತಿದೆ. ಅವರ ಮಗಳು ಐಶ್ವರ್ಯ ಅವರನ್ನೂ ಸಹ ಇಂದು ವಿಚಾರಣೆಗೆ ಒಳಪಡಿಸಲಾಗಿದೆ.

MAshok Kumar | news18-kannada
Updated:September 12, 2019, 5:52 PM IST
ಡಿಕೆ ಶಿವಕುಮಾರ್​ ಬೆಂಬಲಕ್ಕೆ ನಿಲ್ಲಿ; ರಾಜ್ಯ ಕಾಂಗ್ರೆಸ್​ ನಾಯಕರಿಗೆ ಸೋನಿಯಾ ಗಾಂಧಿ ಆದೇಶ
ಡಿ.ಕೆ. ಶಿವಕುಮಾರ್
  • Share this:
ನವ ದೆಹಲಿ (ಸೆಪ್ಟೆಂಬರ್​.12); ಅಕ್ರಮ ಹಣ ಗಳಿಕೆ ಪ್ರಕರಣ ಸಂಬಂಧ ವಿಚಾರಣೆಗಾಗಿ ಇಡಿ ವಶದಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಅವರ ಬೆನ್ನಿಗೆ ರಾಜ್ಯದ ಎಲ್ಲಾ ಕಾಂಗ್ರೆಸ್​ ನಾಯಕರು ಬೆಂಬಲವಾಗಿ ನಿಲ್ಲಬೇಕು, ಡಿಕೆಶಿ ಅವರಿಗೆ ನೈತಿಕ ಶಕ್ತಿ ತುಂಬಬೇಕು ಎಂದು ಕಾಂಗ್ರೆಸ್​ ಪಕ್ಷದ ಹಂಗಾಮಿ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಇಂದು ದೆಹಲಿಯಲ್ಲಿ ಕಾಂಗ್ರೆಸ್​ ಕೇಂದ್ರ ಕಚೇರಿಯಲ್ಲಿ ಪಕ್ಷವನ್ನು ಭವಿಷ್ಯದಲ್ಲಿ ಬಲವಾಗಿ ಸಂಘಟಿಸುವ ಹಾಗೂ ಕೇಂದ್ರ ಸರ್ಕಾರವನ್ನು ಸಮರ್ಥವಾಗಿ ಎದುರಿಸುವ ಕುರಿತು ಚರ್ಚಿಸಲು ಸಭೆ ಏರ್ಪಡಿಸಲಾಗಿತ್ತು. ಸೋನಿಯಾ ಗಾಂಧಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಈ ಸಭೆಗೆ ಎಲ್ಲಾ ರಾಜ್ಯಗಳ ಪ್ರಮುಖ ನಾಯಕರಿಗೂ ಆಹ್ವಾನ ನೀಡಲಾಗಿತ್ತು. ರಾಜ್ಯದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಭೆಯಲ್ಲಿ ಭಾಗವಹಿಸಿದ್ದರು.

ಪಕ್ಷದ ಸಭೆಯ ಬಳಿಕ ಸಿದ್ದರಾಮಯ್ಯನವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಪ್ರಸ್ತುತ ರಾಜ್ಯ ರಾಜಕೀಯ ಹಾಗೂ ಇಡಿ ಅಧಿಕಾರಿಗಳ ವಶದಲ್ಲಿರಿವ ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಸಿದ್ದರಾಮಯ್ಯನವರಿಗೆ ಸೂಚನೆ ನೀಡಿರುವ ಸೋನಿಯಾ ಗಾಂಧಿ, "ನಾವು ಡಿಕೆಶಿ ಜೊತೆಗಿದ್ದೇವೆ, ರಾಜ್ಯ ನಾಯಕರಿಗೂ ಅವರನ್ನು ಬೆಂಬಲಿಸುವಂತೆ ಸೂಚಿಸಿ. ಈ ಪ್ರಕರಣದಲ್ಲಿ ಎಲ್ಲಾ ನಾಯಕರು ಕಡ್ಡಾಯವಾಗಿ ಡಿಕೆಶಿ ಬೆನ್ನಿಗೆ ನಿಲ್ಲಬೇಕು ಅವರಿಗೆ ನೈತಿಕ ಶಕ್ತಿ ತುಂಬಬೇಕು" ಎಂದು ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್​ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಡಿ.ಕೆ. ಶಿವಕುಮಾರ್ ಅವರನ್ನು ಅಕ್ರಮ ಹಣ ಗಳಿಕೆ ಆರೋಪದ ಅಡಿಯಲ್ಲಿ ಬಂಧಿಸಿರುವ ಜಾರಿ ನಿರ್ದೇಶನಾಯಕ ಕಳೆದ ಎರಡು ವಾರಗಳಿಂದ ಸತತವಾಗಿ ವಿಚಾರಣೆ ನಡೆಸುತ್ತಿದೆ. ಅವರ ಮಗಳು ಐಶ್ವರ್ಯ ಅವರನ್ನೂ ಸಹ ಇಂದು ವಿಚಾರಣೆಗೆ ಒಳಪಡಿಸಲಾಗಿದೆ.

ಡಿಕೆ ಶಿವಕುಮಾರ್ ಅವರ ಬಂಧನವನ್ನು ವಿರೋಧಿಸಿ ರಾಜ್ಯ ಒಕ್ಕಲಿಗರ ಸಂಘ ಬುಧವಾರ (ಸೆಪ್ಟೆಂಬರ್​.11) ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್​ ಪ್ರತಿಭಟನೆ ನಡೆಸಿ ತನ್ನ ಶಕ್ತಿ ಪ್ರದರ್ಶನವನ್ನು ತೋರಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್​ ನಾಯಕರು ಡಿ.ಕೆ. ಶಿವಕುಮಾರ್ ಬೆನ್ನಿಗೆ ನಿಲ್ಲಬೇಕು ಎಂದು ಸ್ವತಃ ಸೋನಿಯಾ ಗಾಂಧಿ ಸೂಚನೆ ನೀಡಿರುವುದು ರಾಜ್ಯ ರಾಜಕಾರಣದ ದೃಷ್ಠಿಯಿಂದ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ : ಕೇಂದ್ರ ಸರ್ಕಾರ ಜನಾದೇಶವನ್ನು ತಪ್ಪಾಗಿ ಬಳಸಿಕೊಳ್ಳುತ್ತಿದೆ; ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ ಸೋನಿಯಾ

First published:September 12, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading