ಬಳ್ಳಾರಿ ವಿಭಜನೆಗೆ ಸರ್ಕಾರ ಚಿಂತನೆ; ಹೊಸಪೇಟೆ ಕೇಂದ್ರವಾಗಿಸಿಕೊಂಡು ವಿಜಯನಗರ ಜಿಲ್ಲೆ ರಚನೆಗೆ ಸಿದ್ಧತೆ

ಹೊಸಪೇಟೆಯನ್ನು ಜಿಲ್ಲಾ ಕೇಂದ್ರವನ್ನಾಗಿಸಿ ವಿಜಯನಗರ ಜಿಲ್ಲೆ ರಚನೆಗೆ ಪ್ರಕ್ರಿಯೆ ಆರಂಭಿಸಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಹೊಸ ಜಿಲ್ಲೆ ರಚನೆ ಸಂಬಂಧ ವಿಷಯ ಮಂಡನೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ ನೀಡಿದ್ದಾರೆ.

HR Ramesh | news18-kannada
Updated:September 19, 2019, 8:18 PM IST
ಬಳ್ಳಾರಿ ವಿಭಜನೆಗೆ ಸರ್ಕಾರ ಚಿಂತನೆ; ಹೊಸಪೇಟೆ ಕೇಂದ್ರವಾಗಿಸಿಕೊಂಡು ವಿಜಯನಗರ ಜಿಲ್ಲೆ ರಚನೆಗೆ ಸಿದ್ಧತೆ
ಸರ್ಕಾರ ಹೊರಡಿಸಿರುವ ಆದೇಶ ಪತ್ರ
HR Ramesh | news18-kannada
Updated: September 19, 2019, 8:18 PM IST
ಬೆಂಗಳೂರು: ಬಳ್ಳಾರಿ ಜಿಲ್ಲೆ ವಿಸ್ತೀರ್ಣದಲ್ಲಿ ದೊಡ್ಡದಾಗಿರುವುದರಿಂದ ಬಳ್ಳಾರಿ ವಿಭಜನೆಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಿದೆ.

ಹೊಸಪೇಟೆಯನ್ನು ಜಿಲ್ಲಾ ಕೇಂದ್ರವನ್ನಾಗಿಸಿ ವಿಜಯನಗರ ಜಿಲ್ಲೆ ರಚನೆಗೆ ಪ್ರಕ್ರಿಯೆ ಆರಂಭಿಸಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಹೊಸ ಜಿಲ್ಲೆ ರಚನೆ ಸಂಬಂಧ ವಿಷಯ ಮಂಡನೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ ನೀಡಿದ್ದಾರೆ.

ಇದನ್ನು ಓದಿ: ವಿಜಯನಗರ ಪ್ರತ್ಯೇಕ ಜಿಲ್ಲೆಗಾಗಿ ಒತ್ತಾಯಿಸಿ ನಿಯೋಗದಿಂದ ಸಿಎಂ ಭೇಟಿ; ಜೊತೆಯಾದ ಆನಂದ್ ಸಿಂಗ್ ಮತ್ತು ಕಂಪ್ಲಿ ಗಣೇಶ್

ಬಳ್ಳಾರಿಯಲ್ಲಿ ಪ್ರಸ್ತುತ 11 ಕಂದಾಯ ತಾಲೂಕುಗಳನ್ನು ಹಾಗೂ 3 ಉಪ ಕಂದಾಯ ವಿಭಾಗಗಳನ್ನು ಹೊಂದಿರುವ ಅತಿ ದೊಡ್ಡ ಜಿಲ್ಲೆಯಾಗಿದೆ. ಜಿಲ್ಲೆಯ ಕೆಲವೊಂದು ಪ್ರದೇಶಗಳು ಜಿಲ್ಲಾ ಕೇಂದ್ರದಿಂದ 200 ಕಿ.ಮೀ. ದೂರದಲ್ಲಿವೆ. ಹೀಗಾಗಿ ಆ ಭಾಗದ ಜನರು, ರೈತರು, ಕೂಲಿ ಕಾರ್ಮಿಕರು ಸೇರಿದಂತೆ ಎಲ್ಲ ಜನಸಾಮಾನ್ಯರು ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರಗಳಿಗೆ ಬರುವುದು ದುಸ್ಥರವಾಗಿದೆ. ಹೀಗಾಗಿ 11 ತಾಲೂಕುಗಳ ಜಿಲ್ಲೆಯಲ್ಲಿ ಮೂಲ ಬಳ್ಳಾರಿಯಲ್ಲಿ ಐದು ತಾಲೂಕುಗಳನ್ನು (ಬಳ್ಳಾರಿ, ಕುರುಗೋಡು, ಸಿರಗುಪ್ಪ, ಸಂಡೂರು ಮತ್ತು ಕೂಡ್ಲಿಗಿ) ಉಳಿಸಿಕೊಂಡು, ಉಳಿದ ಆರು ತಾಲೂಕುಗಳನ್ನು (ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ ಮತ್ತು ಹರಪನಹಳ್ಳಿ)  ಹೊಸಕೋಟೆಯನ್ನು ಜಿಲ್ಲಾ ಕೇಂದ್ರವನ್ನಾಗಿ ಇರಿಸಿಕೊಂಡು ಹೊಸ ಜಿಲ್ಲೆಯನ್ನಾಗಿ ಘೋಷಿಸಲು ಸರ್ಕಾರ ಯೋಚಿಸಿದೆ.

First published:September 19, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...