Super Speciality Hospital: ಉತ್ತರ ಕನ್ನಡ ಜನರ ಆಗ್ರಹಕ್ಕೆ ಮಣಿದ ಸರ್ಕಾರ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ತಾತ್ವಿಕ ಒಪ್ಪಿಗೆ

ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡುವ ವಿಚಾರದಲ್ಲಿ ಸರ್ಕಾರ ಒಂದು ಹೆಜ್ಜೆ ಮುಂದೆ ಇಟ್ಟಿದೆ. ಕೊನೆಗೂ ಉತ್ತರ ಕನ್ನಡ ಜಿಲ್ಲೆಯ ಜನರ ಒತ್ತಡಕ್ಕೆ ಮಣಿದ ಸರ್ಕಾರ, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ತಾತ್ವಿಕ ಒಪ್ಪಿಗೆ ನೀಡಿದೆ.

ಆಸ್ಪತ್ರೆಗಾಗಿ ನಡೆಯುತ್ತಿದ್ದ ಅಭಿಯಾನ

ಆಸ್ಪತ್ರೆಗಾಗಿ ನಡೆಯುತ್ತಿದ್ದ ಅಭಿಯಾನ

  • Share this:
 ಬೆಂಗಳೂರು: ಉತ್ತರ ಕನ್ನಡ (Uttara Kannada) ಜಿಲ್ಲೆಯ ಜನರ ಹೋರಾಟಕ್ಕೆ ರಾಜ್ಯ ಸರ್ಕಾರ (State Government) ಮಣಿದಂತೆ ಕಾಣಿಸುತ್ತಿದೆ. ಜಿಲ್ಲೆಯ ಜನರ ಬಹು ವರ್ಷಗಳ ಬೇಡಿಕೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ನಿರ್ಮಾಣದ ಕೂಗಿಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಇನ್ನು ಉತ್ತರ ಕನ್ನಡ ಜಿಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಚಿವರ ಸಭೆ ನಡೆಸಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ (Health Minister Dr. K. Sudhakar) , ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದ್ದಾಗಿ ಹೇಳಿದ್ದಾರೆ. ಬೆಂಗಳೂರಿನಲ್ಲಿ (Bengaluru) ಇಂದು ಸಚಿವ ಸುಧಾಕರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಶಾಸಕಿ ರೂಪಾಲಿ ನಾಯ್ಕ್, ದಿನಕರ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ ಸೇರಿದಂತೆ ಆ ಭಾಗದ ಜನಪ್ರತಿನಿಧಿಗಳು ಭಾಗಿಯಾಗಿದ್ದರು.

ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒಪ್ಪಿಗೆ

ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡುವ ವಿಚಾರದಲ್ಲಿ ಸರ್ಕಾರ ಒಂದು ಹೆಜ್ಜೆ ಮುಂದೆ ಇಟ್ಟಿದೆ. ಕೊನೆಗೂ ಉತ್ತರ ಕನ್ನಡ ಜಿಲ್ಲೆಯ ಜನರ ಒತ್ತಡಕ್ಕೆ ಮಣಿದ ಸರ್ಕಾರ, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ತಾತ್ವಿಕ ಒಪ್ಪಿಗೆ ನೀಡಿದೆ. ಹೀಗಾಗಿ ಸರ್ಕಾರದ ತೀರ್ಮಾನದಿಂದ ಉತ್ತರ ಕನ್ನಡ ಭಾಗದ ಜನಪ್ರತಿನಿಧಿಗಳು ಸಂತಸಗೊಂಡು, ಸಭೆಯಿಂದ ನಿರ್ಗಮಿಸಿದ್ರು.

ಸಚಿವ ಸುಧಾಕರ್ ಸಭೆ


ಶೀಘ್ರವೇ ಜಿಲ್ಲೆಗೆ ಸಿಎಂ, ಸಚಿವರ ಭೇಟಿ

ಶೀಘ್ರವೇ ಸಿಎಂ ಹಾಗೂ ಆರೋಗ್ಯ ಸಚಿವರು ಹಾಗೂ ತಜ್ಞರ ತಂಡ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದೆ. ಉತ್ತರ ಕನ್ನಡ ಜಿಲ್ಲೆ ಭೌಗೋಳಿಕವಾಗಿ ದೊಡ್ಡದಾಗಿದ್ದು, ಕರಾವಳಿ, ಘಟ್ಟ ಹಾಗೂ ಬಯಲು ಸೀಮೆಯಂತ ವೈವಿಧ್ಯ ಪ್ರದೇಶಗಳನ್ನು ಹೊಂದಿದೆ. ಅಲ್ಲಿ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ತಲುಪುವುದೇ ಕಷ್ಟಸಾಧ್ಯ. ಹೀಗಾಗಿ ಸಿಎಂ, ಸಚಿವರ ನೇತೃತ್ವದ ತಂಡವು ಜಿಲ್ಲೆಯ ಯಾವ ಭಾಗದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಪರಿಶೀಲನೆ ಮಾಡಲಿದೆ. ಆ ನಂತರ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ನಿರ್ಮಾಣ ಮಾಡುವ ಬಗ್ಗೆ ಸರ್ಕಾರದಿಂದ ಅಧಿಕೃತ ಘೋಷಣೆ ಹೊರಬೀಳಲಿದೆ.

ಸುಧಾಕರ್-ಶಿವರಾಮ್ ಹೆಬ್ಬಾರ್ ಚರ್ಚೆ


ಇದನ್ನೂ ಓದಿ: Uttara Kannada: ಭಾರತ vs ಶ್ರೀಲಂಕಾ ಮ್ಯಾಚ್​​ಲ್ಲಿ ಉತ್ತರ ಕನ್ನಡಿಗರ ಹೋರಾಟ!

ಆಸ್ಪತ್ರೆ ಕಾರವಾರದಲ್ಲೋ, ಕುಮಟಾದಲ್ಲೋ?

ಇದೀಗ ಆಸ್ಪತ್ರೆ ಯಾವ ಭಾಗದಲ್ಲಿ ನಿರ್ಮಿಸಬೇಕು ಎಂಬ ಬಗ್ಗೆಯೂ ಚಿಂತನೆ ನಡೆಯಲಿದೆ. ಕಾರವಾರದಲ್ಲಿ ಇರುವ ಆಸ್ಪತ್ರೆಯನ್ನ ಮೇಲ್ದರ್ಜೆಗೆ ಏರಿಸುವುದು ಒಂದು ಆಯ್ಕೆಯಾದರೆ, ಕುಮಟಾದಲ್ಲಿ ಹೊಸದಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕಾ ಎಂಬ ಬಗ್ಗೆ ತೀರ್ಮಾನ ಮಾಡಲಾಗುತ್ತದೆ.

ಶಾಸಕಿ ರೂಪಾಯಿ ನಾಯ್ಕ್, ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ


“ಅಧಿವೇಶನದ ಬಳಿಕ ಉತ್ತರ ಕನ್ನಡಕ್ಕೆ ಭೇಟಿ”

ಇನ್ನು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳ ಇನ್ನೂ ಅಂತಿಮ ಮಾಡಿಲ್ಲ ಅಂತ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಕಾರವಾರದಲ್ಲಿರುವ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಸಾಕಾಗುವುದಿಲ್ಲ. ಅದಕ್ಕೆ ಬೇಕಾದ ಜಮೀನು ಬೇರೆ ಬೇರೆ ಇಲಾಖೆಗೆ ಸೇರಿದ್ದಾಗಿದೆ. ಹೀಗಾಗಿ ಸ್ಥಳದ ವಿಚಾರವಾಗಿ ಸ್ಪೀಕರ್ ಕಾಗೇರಿ, ಸಿಎಂ ಬೊಮ್ಮಯಿ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಅಂತ ಹೇಳಿದ್ದಾರೆ. ಅಧಿವೇಶನದ ಬಳಿಕ ಉತ್ತರ ಕನ್ನಡ ಜಿಲ್ಲಾ ಪ್ರವಾಸ ಮಾಡ್ತೀವಿ. ಅಲ್ಲಿನ ಸಚಿವರು, ಶಾಸಕರ ಜೊತೆ ಪ್ರವಾಸ ಮಾಡಿ ಆಸ್ಪತ್ರೆ ಬಗ್ಗೆ ಸಮಾಲೋಚನೆ ಮಾಡ್ತೀವಿ ಅಂತ ಸುಧಾಕರ್ ಹೇಳಿದ್ದಾರೆ.

ಸಚಿವರ ಜೊತೆ ಚರ್ಚೆ


ಇದನ್ನೂ ಓದಿ: Uttara Kannada Parking Rules: ಈ ಸ್ಥಳಗಳಲ್ಲಿ ಮಾತ್ರ ನಿಮ್ಮ ವಾಹನ ಪಾರ್ಕ್ ಮಾಡಿ, ಇಲ್ದಿದ್ರೆ ದಂಡ ಪಕ್ಕಾ!

“ನಮ್ಮ ಪ್ರಸ್ತಾವನೆಗೆ ಸರ್ಕಾರ ಒಪ್ಪಿದೆ”

ಸಭೆ ಬಳಿಕ ಮಾತನಾಡಿದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಈಗಿರುವ ಮೆಡಿಕಲ್ ಕಾಲೇಜಿಗೆ ಎಲ್ಲಾ ಸೌಲಭ್ಯ ಒದಗಿಸಬೇಕು, ಉತ್ತರ ಕನ್ನಡ ಜಿಲ್ಲೆಯ ಹೃದಯಭಾಗವಾದ ಕುಮಟಾದ ಆಸುಪಾಸಿನಲ್ಲಿ ಆಸ್ಪತ್ರೆ ಮಾಡಬೇಕೆಂಬ ನಮ್ಮ ಪ್ರಸ್ತಾವನೆಗೆ ಸರ್ಕಾರ ಮತ್ತು ಮಂತ್ರಿಗಳು ಒಪ್ಪಿಕೊಂಡಿದ್ದಾರೆ. ಇರುವಂತಹ ಮೆಡಿಕಲ್ ಕಾಲೇಜಿಗೆ ಎಲ್ಲಾ ಸೌಲಭ್ಯ ಕೊಟ್ಡರೆ ಆರೋಗ್ಯ ಸಮಸ್ಯೆಗಳು ಪರಿಹಾರವಾಗುತ್ತದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಈಡೇರಿದರೆ ನಮ್ಮ ಎಲ್ಲಾ ಬೇಡಿಕೆಗಳು ಈಡೇರುತ್ತದೆ ಅಂತ ಹೇಳಿದ್ದಾರೆ.
Published by:Annappa Achari
First published: