ಬೆಂಗಳೂರು (ಜೂನ್ 09); ಕೊರೋನಾ ಲಾಕ್ಡೌನ್ನಿಂದಾಗಿ ಒಂದೆಡೆ ಜನ ಆದಾಯ ಇಲ್ಲದೆ ಬಸವಳಿದಿದ್ದರೆ, ಮತ್ತೊಂದೆಡೆ ಪೆಟ್ರೋಲ್ ಬೆಲೆ ಏರಿಕೆ ದೆಸೆಯಿಂದ ದಿನೋಪಯೋಗಿ ವಸ್ತುಗಳ ಬೆಲೆಯೂ ಗಗನಕ್ಕೆ ಏರುತ್ತಿದ್ದು, ಸಾರ್ವಜನಿಕರು ಪ್ರತಿನಿತ್ಯ ಬದುಕುವುದೇ ದುಸ್ಥರವಾಗಿದೆ. ಈ ನಡುವೆ ರಾಜ್ಯ ಸರ್ಕಾರ ಇಂದು ವಿದ್ಯುತ್ ಬೆಲೆಯನ್ನು ಮತ್ತೆ ಏರಿಸುವ ಮೂಲಕ ಜನರಿಗೆ ಶಾಕ್ ನೀಡಿದೆ. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ನಡುವೆಯೇ ವಿದ್ಯುತ್ ಬೆಲೆಯೂ ಇಂದು ದಾಖಲೆ ಬರೆದಿದ್ದು, ರಾಜ್ಯ ಸರ್ಕಾರ ಯೂನಿಟ್ ಗೆ 30 ಪೈಸೆ ಹೆಚ್ಚಳ ಮಾಡಿ ಆದೇಶಿಸಿದೆ. ಕೆಪಿಟಿಸಿಎಲ್- ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನೂತನ ದರ ಎಪ್ರಿಲ್.1 2021 ರಿಂದಲೇ ಜಾರಿಯಾಗಲಿದೆ ಎನ್ನಲಾಗುತ್ತಿದೆ.
ಅಸಲಿಗೆ ಬೆಸ್ಕಾಂ ಸೇರಿ 5 ನಿಗಮಗಳಿಂದ ಪ್ರತಿ ಯೂನಿಟ್ ಗೆ 135 ಪೈಸೆ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿತ್ತು. ಈ ಪ್ರಸ್ತಾವನೆ ಆಧರಿಸಿ ಕೆಪಿಟಿಸಿಎಲ್ನಿಂದ ದರ ಹೆಚ್ಚಳ ಮಾಡಲಾಗುತ್ತದೆ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ, ಇಂದು ಸಚಿವ ಸಂಪುಟ ಸಭೆ ನಡೆಸಿ ವಿದ್ಯುತ್ ದರ ಏರಿಕೆ ಬಗ್ಗೆ ಸಿಎಂ ಯಡಿಯೂರಪ್ಪ ಚರ್ಚೆ ನಡೆಸಿದ್ದು, ಯೂನಿಟ್ಗೆ 30 ಪೈಸೆ ಏರಿಕೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
The decision of @CMofKarnataka to increase electricity tariff is disastrous for everyone.
Common man to Industries, all are suffering due to pandemic and the increase will kill everyone.#BJPShockToKtaka pic.twitter.com/fzFedvLz8B
— Siddaramaiah (@siddaramaiah) June 9, 2021
ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ದ ಟ್ವೀಟ್ ಮೂಲಕ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ, "ಮುಖ್ಯಮಂತ್ರಿಗಳು ವಿದ್ಯುತ್ ದರ ಏರಿಕೆ ನಿರ್ಧಾರ ಮಾಡಿರುವುದು ಪ್ರತಿಯೊಬ್ಬರ ಪಾಲಿಗೂ ದುರಂತ. ಲಾಕ್ಡೌನ್ನಿಂದಾಗಿ ಸಾಮಾನ್ಯ ಜನರು, ಕೈಗಾರಿಕೆಗಳು ಪ್ರತಿಯೊಬ್ಬರೂ ಸಹ ಕೋವಿಡ್ ನಿಂದ ಬಸವಳಿದಿದ್ದಾರೆ. ಇಂತಹ ಸಂಧರ್ಭದಲ್ಲಿ ವಿದ್ಯುತ್ ದರ ಏರಿಕೆ ಜನರ ತೊಂದರೆ ಆಗಲಿದೆ" ಎಂದು ಕಿಡಿಕಾರಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ