ಬೆಂಗಳೂರಿನ ಬೆಳ್ಳಂದೂರು ಕೆರೆ ಮಾಲಿನ್ಯ ವಿಚಾರ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ


Updated:July 13, 2018, 7:50 AM IST
ಬೆಂಗಳೂರಿನ ಬೆಳ್ಳಂದೂರು ಕೆರೆ ಮಾಲಿನ್ಯ ವಿಚಾರ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ
  • Share this:
ನ್ಯೂಸ್ 18 ಕನ್ನಡ

ಬೆಂಗಳೂರು(ಜು.13): ಬೆಂಗಳೂರಿನ ಬೆಳ್ಳಂದೂರು ಕೆರೆ ಮಾಲಿನ್ಯದ ಬಗ್ಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ.

2015ರಲ್ಲಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಮೂರು ವರ್ಷವಾದರೂ ಕೆರೆ ಸ್ವಚ್ಛತೆ ಮಾಡಿಲ್ಲ, ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಉರಿಯುತ್ತಿದೆ. ಪ್ರಪಂಚದಲ್ಲಿ ಉರಿಯುತ್ತಿರುವ ಕೆರೆಯನ್ನು ಕಂಡಿದ್ದೀರಾ ಎಂದು ಪ್ರಶ್ನಿಸಿದೆ. ಕೆರೆ ಸ್ವಚ್ಚತೆ ಜವಾಬ್ದಾರಿ ಇರುವ ಇಲಾಖೆ ಯಾವುದು ಎಂದು ಸರ್ಕಾರಿ ವಕೀಲರನ್ನು ನ್ಯಾಯಮೂರ್ತಿಗಳು ಪ್ರಶ್ನೆ ಮಾಡಿದ್ದರು.

ಕೆರೆ ಸ್ವಚ್ಛತೆ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳುವ ಇಲಾಖೆ ಮತ್ತು ವ್ಯಕ್ತಿಯನ್ನು ಕರೆಸಿ ಎಂದು ಹೇಳಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿ ಕೋರ್ಟ್​ಗೆ ಹಾಜರಾಗಬೇಕು ಎಂದು ಸರ್ಕಾರಿ ವಕೀಲರಿಗೆ ಸೂಚಿಸಿ ಇಂದಿಗೆ ವಿಚಾರಣೆಯನ್ನ ಮುಂದೂಡಿದರು.
First published:July 13, 2018
ಮತ್ತಷ್ಟು ಓದಿರಿ
ಮುಂದಿನ ಸುದ್ದಿ