HOME » NEWS » State » STATE GOVT ORDERS TO GIVE CASTE CERTIFICATE TO BRAHMAN COMMUNITY GNR

ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರ ನೀಡಲು ರಾಜ್ಯ ಸರ್ಕಾರದ ಆದೇಶ

ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಮ್ಮ ರಾಜ್ಯ ಸರ್ಕಾರ ಕೇಂದ್ರದ ಆದೇಶದ ಅನುಷ್ಠಾನಕ್ಕಾಗಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಲು ಆದೇಶ ಹೊರಡಿಸಿದೆ. ಈ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದರು ಕಾರಜೋಳ.

news18-kannada
Updated:July 15, 2020, 9:55 PM IST
ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರ ನೀಡಲು ರಾಜ್ಯ ಸರ್ಕಾರದ ಆದೇಶ
ಬಿ.ಎಸ್‌. ಯಡಿಯೂರಪ್ಪ.
  • Share this:
ಬೆಂಗಳೂರು(ಜು.15): ಬ್ರಾಹ್ಮಣ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲು ಈ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ನೀಡಲು ಸರ್ಕಾರ ಆದೇಶಿಸಿದೆ.

ಈ ಸಂಬಂಧ ಮಾತಾಡಿದ ಸುದ್ದಿಗಾರರೊಂದಿಗೆ ಮಾತಾಡಿದ ಡಿಸಿಎಂ ಗೋವಿಂದ ಕಾರಗೋಳ, ಈ ಹಿಂದೆಯೇ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ನೀಡಿ ಆದೇಶ ಹೊರಡಿಸಿತ್ತು. ಹೀಗಾಗಿ ಆರ್ಥಿಕವಾಗಿ ಹಿಂದುಳಿದ ಎಲ್ಲಾ ಸಮುದಾಯದವರ ಶ್ರೇಯೋಭಿವೃದ್ಧಿ ಹಿತದೃಷ್ಠಿಯಿಂದಲೇ ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರ ನೀಡುವ ಆದೇಶ ಹೊರಡಿದ್ದೇವೆ ಎಂದರು.

ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಮ್ಮ ರಾಜ್ಯ ಸರ್ಕಾರ ಕೇಂದ್ರದ ಆದೇಶದ ಅನುಷ್ಠಾನಕ್ಕಾಗಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಲು ಆದೇಶ ಹೊರಡಿಸಿದೆ. ಈ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದರು ಕಾರಜೋಳ.

ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗಗಳ ಕಲ್ಯಾಣ ನಮ್ಮ ಸರ್ಕಾರದ ಉದ್ದೇಶ. ಹಾಗೆಯೇ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೂ ಎಲ್ಲಾ ಸೌಕರ್ಯ ಸಿಗಬೇಕು. ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೆ ಸೌಕರ್ಯಗಳನ್ನು ಒಳಗೊಂಡ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಉತ್ತರ ವಿಯೆಟ್ನಾಂ: ತಾಯಿಯ ಗರ್ಭಾಶಯದ ಸಾಧನ ಕೈಯಲ್ಲೇ ಹಿಡಿದು ಜನಿಸಿದ ಮಗು

ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಸೂಕ್ತ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯು ಆದೇಶಿಸಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಈ ಪ್ರಮಾಣ ಪತ್ರಗಳನ್ನು ಪರಿಗಣಿಸಲು ಅನುಮತಿ ನೀಡಲಾಗಿದೆ. ಈಗ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.
Published by: Ganesh Nachikethu
First published: July 15, 2020, 9:40 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories