ಪಾಕಿಸ್ತಾನ ಜಿಂದಾಬಾದ್​​ ಎಂದ ಅಮೂಲ್ಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು: ಗೃಹ ಸಚಿವ ಬಸವರಾಜ್​​ ಬೊಮ್ಮಾಯಿ

ಸದ್ಯ ಪಾಕಿಸ್ತಾನದ ಜಿಂದಾಬಾದ್ ಎಂದು ಘೋಷಣೆ ಕೂಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೂಡಲೇ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬೆನ್ನಲ್ಲೇ ಆಕೆ ಮಾಡಿದ್ದು ತಪ್ಪು. ಇದು ಪಾಕಿಸ್ತಾನ ಪರವಾಗಿ ನಡೆಸಿದ ರ್ಯಾಲಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

news18-kannada
Updated:February 20, 2020, 9:49 PM IST
ಪಾಕಿಸ್ತಾನ ಜಿಂದಾಬಾದ್​​ ಎಂದ ಅಮೂಲ್ಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು: ಗೃಹ ಸಚಿವ ಬಸವರಾಜ್​​ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ
  • Share this:
ಬೆಂಗಳೂರು(ಫೆ.20): ಪೌರತ್ವ ಕಾಯ್ದೆ ವಿರೋಧಿಸಿ ಟಿಪ್ಪು ಸುಲ್ತಾನ್‌ ಯುನೈಟೆಡ್‌ ಫ್ರಂಟ್‌ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿದ್ದ ಪ್ರತಿಭಟನೆ ವೇಳೆ 'ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿದ ಅಮೂಲ್ಯ ನಡೆಯನ್ನು ಹಲವರು ಖಂಡಿಸಿದ್ದಾರೆ. ಕಾರ್ಯಕ್ರಮದ ಆಯೋಜಕರೇ ನಮ್ಮದು ಹಿಂದೂಸ್ತಾನ. ನಾವೆಲ್ಲರೂ ಹಿಂದೂಸ್ತಾನಿಗಳು. ಆಕೆ ತಪ್ಪಾಗಿ ಘೋಷಣೆ ಕೂಗಿದ್ದಾಳೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಗೃಹ ಸಚಿವ ಬಸವರಾಜ್​​ ಬೊಮ್ಮಾಯಿ, ಅಮ್ಯೂಲ ವಿರುದ್ಧ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ಧಾರೆ. 

ನಗರದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ನಡೆದಿದೆ. ಇಂತಹ ಹೇಳಿಕೆಗಳಿಂದ ಮನಸ್ಸಿಗೆ ಬಹಳ ನೋವುಂಟಾಗಿದೆ. ಪ್ರಕರಣದ ಸಂಪೂರ್ಣ ಮಾಹಿತಿ ಪಡೆಯುತ್ತಿದ್ದೇನೆ. ದೇಶದ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇನ್ನು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಆಯೋಜಿಸಿತ್ತು. ಈ ಪ್ರತಿಭಟನಾ ಸಭೆಯಲ್ಲಿ ಅಸಾದುದ್ದೀನ್ ಓವೈಸಿ ಪಾಲ್ಗೊಂಡಿದ್ದರು. ಪ್ರತಿಭಟನೆ ಆರಂಭವಾಗುತ್ತಿದ್ದಂತೆ ವೇದಿಕೆ ಮೇಲೆ ಬಂದ ಅಮೂಲ್ಯ ಎಂಬ ಯುವತಿ ಇದ್ದಕ್ಕಿದ್ದ ಹಾಗೆ ಪಾಕಿಸ್ತಾನ ಜಿಂದಾಬಾದ್ ಎಂದು ಎರಡು ಬಾರಿ ಘೋಷಣೆ ಕೂಗಿದ್ದಾರೆ. ಇದರಿಂದ ಕಕ್ಕಾಬಿಕ್ಕಿಯಾದ ಓವೈಸಿ, ಒಮ್ಮೆಲೆ ಯುವತಿಯಿಂದ ಮೈಕ್​ ಕಸಿದುಕೊಂಡು, ಪಾಕಿಸ್ತಾನ ಪರ ಘೋಷಣೆ ಕೂಗುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಿಎಎ ವಿರೋಧ ಪ್ರತಿಭಟನೆ ಸಭೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಯುವತಿ

ಸದ್ಯ ಪಾಕಿಸ್ತಾನದ ಜಿಂದಾಬಾದ್ ಎಂದು ಘೋಷಣೆ ಕೂಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೂಡಲೇ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬೆನ್ನಲ್ಲೇ ಆಕೆ ಮಾಡಿದ್ದು ತಪ್ಪು. ಇದು ಪಾಕಿಸ್ತಾನ ಪರವಾಗಿ ನಡೆಸಿದ ರ್ಯಾಲಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಯುವತಿ ಘೋಷಣೆ ಕೂಗುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ವೇದಿಕೆ ಮೇಲೆ ಬಂದು ಯುವತಿಯನ್ನು ವಶಕ್ಕೆ ಪಡೆದು, ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಫ್ರೀಡಂ ಪಾರ್ಕ್ ಬಳಿಗೆ ಹೆಚ್ಚುವರಿ ಆಯುಕ್ತ ಸೌಮೆಂದು‌ ಮುಖರ್ಜಿ ಆಗಮಿಸಿ, ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
First published:February 20, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ