ಅರುಣ್ ಜೇಟ್ಲಿ ನಿಧನ ಹಿನ್ನೆಲೆ; ದೆಹಲಿಗೆ ದೌಡಾಯಿಸಿದ ಯಡಿಯೂರಪ್ಪ, ಸಚಿವರ ಖಾತೆ ಹಂಚಿಕೆಗೆ ತಾತ್ಕಾಲಿಕ ಬ್ರೇಕ್!

ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರಿಗೆ ಅಂತಿಮ ನಮನ ಸಲ್ಲಿಸುವ ಸಲುವಾಗಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ. ಅಂತ್ಯಕ್ರಿಯೆ ಮುಗಿದ ನಂತರ ನಾಳೆ ಸಂಜೆಯೇ ರಾಜ್ಯಕ್ಕೆ ಮರಳಲಿದ್ದಾರೆ. ಹೀಗಾಗಿ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಸೋಮವಾರಕ್ಕೆ ಮುಂದೂಡಲಾಗಿದೆ.

MAshok Kumar | news18
Updated:August 24, 2019, 2:16 PM IST
ಅರುಣ್ ಜೇಟ್ಲಿ ನಿಧನ ಹಿನ್ನೆಲೆ; ದೆಹಲಿಗೆ ದೌಡಾಯಿಸಿದ ಯಡಿಯೂರಪ್ಪ, ಸಚಿವರ ಖಾತೆ ಹಂಚಿಕೆಗೆ ತಾತ್ಕಾಲಿಕ ಬ್ರೇಕ್!
ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ
  • News18
  • Last Updated: August 24, 2019, 2:16 PM IST
  • Share this:
ಬೆಂಗಳೂರು (ಆಗಸ್ಟ್.24); ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ನಿಧನದ ಹಿನ್ನೆಲೆ ಪ್ರಮಾಣ ವಚನ ಸ್ವೀಕರಿಸಿದ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆಯನ್ನು ಇನ್ನೆರಡು ದಿನಕ್ಕೆ ಮುಂದೂಡಲಾಗಿದೆ ಎಂದು ವರದಿಯಾಗಿದೆ.

ಕಳೆದ ಮಂಗಳವಾರ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಬಿಜೆಪಿ ಸರ್ಕಾರದ ಭಾಗವಾಗಿ 17 ಜನ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಆದರೆ, ಈವರೆಗೆ ಅವರಿಗ ಖಾತೆಯನ್ನು ನಿಗದಿಪಡಿಸಿರಲಿಲ್ಲ. ಈ ನಡುವೆ ಅನೇಕ ಹಿರಿಯ ನಾಯಕರು ಗೃಹ ಖಾತೆ ಸೇರಿದಂತೆ ಪ್ರಮುಖ ಖಾತೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಖಾತೆ ಹಂಚಿಕೆ ಬಹುತೇಕ ಅಂತಿಮವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿತ್ತು. ಆದರೆ, ಅರುಣ್ ಜೇಟ್ಲಿ ಅಗಲಿಕೆಯಿಂದ ಈ ಪ್ರಕ್ರಿಯೆ ತಾತ್ಕಾಲಿಕವಾಗಿ ಎರಡು ದಿನಗಳ ಮಟ್ಟಿಗೆ ಮುಂದೂಡಲಾಗಿದೆ.

ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರಿಗೆ ಅಂತಿಮ ನಮನ ಸಲ್ಲಿಸುವ ಸಲುವಾಗಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ. ಅಂತ್ಯಕ್ರಿಯೆ ಮುಗಿದ ನಂತರ ನಾಳೆ ಸಂಜೆಯೇ ರಾಜ್ಯಕ್ಕೆ ಮರಳಲಿದ್ದಾರೆ. ಹೀಗಾಗಿ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಸೋಮವಾರಕ್ಕೆ ಮುಂದೂಡಲಾಗಿದೆ.

ಈಗಾಗಲೇ ಆರ್. ಅಶೋಕ್, ಶ್ರೀರಾಮುಲು ಹಾಗೂ ಈಶ್ವರಪ್ಪ ಉಪ ಮುಖ್ಯಮಂತ್ರಿ, ಗೃಹಖಾತೆಯ ಮೇಲೆ ಕಣ್ಣಿದ್ದು, ಈಶ್ವರಪ್ಪನವರಿಗೆ ಈ ಸ್ಥಾನ ಬಹುತೇಕ ಖಚಿತವಾಗಿದೆ. ಈ ವಿಚಾರವೇ ಬಿಜೆಪಿ ಪಕ್ಷದಲ್ಲಿ ಮತ್ತೊಂದು ಹೈಡ್ರಾಮಕ್ಕೆ ಕಾರಣವಾದರೆ ಅಚ್ಚರಿ ಇಲ್ಲ.

ಇದನ್ನೂ ಓದಿ : Arun Jaitley Death News: ಮಾಜಿ ಕೇಂದ್ರ ಸಚಿವ ಅರುಣ್​​ ಜೇಟ್ಲಿ ಇನ್ನಿಲ್ಲ; ಬಿಜೆಪಿ ಟ್ರಬಲ್​ ಶೂಟರ್ ನಡೆದು ಬಂದ ಹಾದಿ

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್​ ಮೆಸೆಂಜರ್​ನಲ್ಲಿ ಸಬ್​ಸ್ಕ್ರೈಬ್​ ಮಾಡಲು ಇಲ್ಲಿ ಕ್ಲಿಕ್​ ಮಾಡಿ

First published:August 24, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading