Ayodhya Verdict: ಅಯೋಧ್ಯೆ ತೀರ್ಪು ಹಿನ್ನೆಲೆ, ರಾಜ್ಯಾದ್ಯಂತ ಬಿಗಿಭದ್ರತೆ; ಸೆಕ್ಷನ್ 144 ಜಾರಿ

ಚಾಮರಾಜನಗರ, ಕೋಲಾರ, ಮಂಡ್ಯ, ಬಳ್ಳಾರಿ, ಮೈಸೂರು, ರಾಯಚೂರು, ಹುಬ್ಬಳ್ಳಿ-ಧಾರವಾಡ ಹಾವೇರಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮಿಕ್ಕ ಜಿಲ್ಲೆಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿಷೇಧಾಜ್ಞೆ ಜಾರಿಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಎಲ್ಲಾ ಜಿಲ್ಲೆಗಳಲ್ಲೂ ಕೋಮುಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಕಟ್ಟೆಚ್ಚರ ವಹಿಸಲಾಗುತ್ತಿದೆ.

news18
Updated:November 9, 2019, 9:04 AM IST
Ayodhya Verdict: ಅಯೋಧ್ಯೆ ತೀರ್ಪು ಹಿನ್ನೆಲೆ, ರಾಜ್ಯಾದ್ಯಂತ ಬಿಗಿಭದ್ರತೆ; ಸೆಕ್ಷನ್ 144 ಜಾರಿ
ಸಾಂದರ್ಭಿಕ ಚಿತ್ರ.
  • News18
  • Last Updated: November 9, 2019, 9:04 AM IST
  • Share this:
ಬೆಂಗಳೂರು(ನ. 09): ಅಯೋಧ್ಯೆ ಬಾಬರಿ ಮಸೀದಿ-ರಾಮಜನ್ಮಭೂಮಿ ವಿವಾದ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಬಿಗಿಭದ್ರತೆ ಹಾಕಲಾಗಿದೆ. ರಾಜ್ಯದ ಎಲ್ಲೆಡೆಯೂ ಭಾರೀ ಬಿಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬಹುತೇಕ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದು ನಿಗದಿಯಾಗಿದ್ದ ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅನೇಕ ಕಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಹಳ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಕಟ್ಟೆಚ್ಚರ ವಹಿಸಲಾಗಿದೆ.

ಸೋಷಿಯಲ್ ಮೀಡಿಯಾ ಮೇಲೆ ಇವತ್ತು ಹದ್ದಿನ ಕಣ್ಣು ಇರಿಸಲಾಗಿದೆ. ಏನೇ ತೀರ್ಪು ಪ್ರಕಟವಾದರೂ ಸೋಷಿಯಲ್ ಮೀಡಿಯಾದಲ್ಲಿ ಎಲ್ಲೆ ಮೀರಿ ವರ್ತನೆ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅದರ ಮೇಲೆ ಕಣ್ಣಿಡಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Ayodhya Verdict: ಇಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರಿನಲ್ಲಿ ಭದ್ರತೆಗಾಗಿ 80 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. 50 ಕೆಎಸ್​ಆರ್​ಪಿ,, 30 ಸಿಎಆರ್ ಹಾಗೂ ಸಿಆರ್​ಪಿಎಫ್ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ. ಶಿವಾಜಿನಗರ, ಗೋರಿಪಾಳ್ಯ, ಜೆಜೆ ನಗರ ಹೀಗೆ ಕೋಮುಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ನಗರದ ಎಲ್ಲಾ ರೌಡಿ ಶೀಟರ್​ಗಳ ಮೇಲೆ ಕಣ್ಣಿಡಲಾಗಿದೆ. ನಗರದಲ್ಲಿ ಮೆರವಣಿಗೆ, ಸಭೆ ಸಮಾರಂಭವನ್ನು ಸಂಪೂರ್ಣವಾಗಿ ನಿಷೇಧಿಸಲಅಗಿದೆ. ಮುಂಜಾನಿ 6ರಿಂದ ರಾತ್ರಿ 12ರವರೆಗೂ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

ಚಾಮರಾಜನಗರ, ಕೋಲಾರ, ಮಂಡ್ಯ, ಬಳ್ಳಾರಿ, ಮೈಸೂರು, ರಾಯಚೂರು, ಹುಬ್ಬಳ್ಳಿ-ಧಾರವಾಡ  ಹಾವೇರಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮಿಕ್ಕ ಜಿಲ್ಲೆಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿಷೇಧಾಜ್ಞೆ ಜಾರಿಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಎಲ್ಲಾ ಜಿಲ್ಲೆಗಳಲ್ಲೂ ಕೋಮುಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಇದನ್ನೂ ಓದಿ: Ayodhya Verdict: ಅಯೋಧ್ಯೆ ವಿವಾದದ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಸಂಪೂರ್ಣ ಇತಿಹಾಸ

ಚಾಮರಾಜನಗರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 13 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯ ಶಹಾಪುರ್, ಆನಗೋಳ, ಗಾಂಧಿನಗರ, ಕಂಜರ ಗಲ್ಲಿ, ಟಿಪ್ಪು ನಗರ, ಜಾಲಗಾರ ಗಲ್ಲಿ, ಮಾರ್ಕೆಟ್ ಪ್ರದೇಶಗಳಲ್ಲಿ ಭಾರೀ ಭದ್ರತೆ ನಿಯೋಜಿಸಲಾಗಿದೆ. ಇಲ್ಲೆಲ್ಲಾ ಸುಮಾರು 2 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆಯಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ನಿರಂತರ ಪ್ಯಾಟ್ರೋಲಿಂಗ್ ವ್ಯವಸ್ಥೆ ಮಾಡಲಾಗಿದೆ. ಚಿಕ್ಕಮಗಳೂರಿನಲ್ಲಿ ದತ್ತಾತ್ರೇಯ ಪೀಠ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ 2 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.
First published:November 9, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading