• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • 2023 Karnataka Election: ಸಾರಾ ಮಹೇಶ್ ಪುತ್ರನ ಕಾರ್ ಮೇಲೆ ಕಲ್ಲು ತೂರಾಟ; ಬಿಟಿಎಂ ಲೇಔಟ್​ನಲ್ಲಿಯೂ ಗಲಾಟೆ

2023 Karnataka Election: ಸಾರಾ ಮಹೇಶ್ ಪುತ್ರನ ಕಾರ್ ಮೇಲೆ ಕಲ್ಲು ತೂರಾಟ; ಬಿಟಿಎಂ ಲೇಔಟ್​ನಲ್ಲಿಯೂ ಗಲಾಟೆ

ಸಾರಾ ಮಹೇಶ್ ಪುತ್ರನ ಕಾರ್

ಸಾರಾ ಮಹೇಶ್ ಪುತ್ರನ ಕಾರ್

Stone Pelting: ಮಾಜಿ ಸಚಿವ ಸಾ.ರಾ.ಮಹೇಶ್ (Former Minister Sa Ra Mahesh) ಪುತ್ರ ಧನುಷ್ ಕಾರ್ ಮೇಲೆ ಕಲ್ಲು ಎಸೆಯಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರೇ (Congress Activist) ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

  • Share this:

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ (Karnataka Election 2023) ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ಅಂತಿಮ ತೆರೆ ಬೀಳಲಿದೆ. ಈ ಹಿನ್ನೆಲೆ ಕಳೆದ ಎರಡು ದಿನಗಳಿಂದ ರಾಜಕೀಯ ಮುಖಂಡರು ಕ್ಷೇತ್ರ ಪ್ರತಿ ಗ್ರಾಮವನ್ನು ತಲುಪುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಚುನಾವಣೆ ಪ್ರಚಾರದ ವೇಳೆ ಸಣ್ಣ ಗಲಾಟೆಗಳು ನಡೆಯುತ್ತಿದೆ. ಮೈಸೂರಿನ ಕೆಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ (KR Nagara Constituency) ಕಾಂಗ್ರೆಸ್ (Congress) ಮತ್ತು ಜೆಡಿಎಸ್ (JDS) ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿದೆ. ಈ ವೇಳೆ ಮಾಜಿ ಸಚಿವ ಸಾ.ರಾ.ಮಹೇಶ್ (Former Minister Sa Ra Mahesh) ಪುತ್ರ ಧನುಷ್ ಕಾರ್ ಮೇಲೆ ಕಲ್ಲು ಎಸೆಯಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರೇ (Congress Activist) ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.


ಚಿತ್ರದುರ್ಗದಲ್ಲಿಯೂ ಕಲ್ಲು ತೂರಾಟ


ಚಳ್ಳಕೆರೆ ಬಿಜೆಪಿ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಅವರ ಕಾರಿನ ಮೇಲೆ ಬೆಳಗಟ್ಟ ಗ್ರಾಮದಲ್ಲಿ ಕಲ್ಲು ಎಸೆಯಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ವಿಧಾನಸಭೆ ಕ್ಷೇತ್ರದ (Challakere Constituency) ಬೆಳಗಟ್ಟದಲ್ಲಿ ರಾತ್ರಿ 9.30ರ ವೇಳೆಗೆ ಈ ಘಟನೆ ನಡೆದಿದೆ.


ಕಲ್ಲು ತೂರಾಟದಲ್ಲಿ ಸೂರನಹಳ್ಳಿ ಶ್ರೀನಿವಾಸ್ ಅವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಬೆಳಗಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.


ಕಾಂಗ್ರೆಸ್ ಗೂಂಡಾಗಳೇ ಈ ಕಲ್ಲು ತೂರಾಟ ನಡೆಸಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಅನಿಲ್‌ ಕುಮಾರ್ ಆರೋಪಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಅನಿಲ್‌ ಕುಮಾರ್ ನೇತೃತ್ವದಲ್ಲಿ ತುರುವನೂರು ಪೊಲೀಸ್ ಠಾಣೆ ಎದುರು ತಡರಾತ್ರಿ ಪ್ರತಿಭಟನೆ ನಡೆಸಲಾಯ್ತು.




ಬಿಟಿಎಂ ಲೇಔಟ್​ನಲ್ಲಿ ಗಲಾಟೆ


ಬೆಂಗಳೂರಿನ ಬಿಟಿಎಂ ಲೇಔಟ್​ನಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ ಬಿಜೆಪಿ ಕಾರ್ಯಕರ್ತ ಹರಿನಾಥ್ ಎಂಬವರು ಗಾಯಗೊಂಡಿದ್ದಾರೆ.




ಇದನ್ನೂ ಓದಿ: Karnataka Assembly Elections: ಮೀಸಲು ಕ್ಷೇತ್ರ, ಜೆಡಿಎಸ್ ಭದ್ರಕೋಟೆ ಸಕಲೇಶಪುರಕ್ಕೆ ಲಗ್ಗೆ ಇಡುತ್ತಾ ಬಿಜೆಪಿ?

top videos


    ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಪ್ರಚಾರದ ವೇಳೆ ಘಟನೆ ನಡೆದಿದೆ. ಈ ಸಂಬಂಧ ಬಿಜೆಪಿ ಅಭ್ಯರ್ಥಿ ಶ್ರೀಧರ್ ರೆಡ್ಡಿ ಪುತ್ರ ಮಡಿವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    First published: