ಕೊರೋನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ ಇನ್ಫೋಸಿಸ್; 100 ಕೋಟಿ ರೂಪಾಯಿ ನೆರವು

ಈ ಹಣವನ್ನು ದೇಶಾದ್ಯಂತ ಕೊರೋನಾ ವೈರಸ್​ ಸೋಂಕಿತರಿಗೆ ಚಿಕಿತ್ಸೆ ನೀಡಲು ಮತ್ತು ಈ ಆಸ್ಪತ್ರೆಗಳ ಸಾಮರ್ಥ್ಯ ವಿಸ್ತರಣೆ ಮಾಡಲು ಬಳಸಿಕೊಳ್ಳಲಾಗುತ್ತಿದೆ. ವಿಶೇಷವಾಗಿ ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ರೋಗಿಗಳ ಚಿಕಿತ್ಸೆಗಾಗಿ ಈ ಹಣವನ್ನು ಬಳಕೆ ಆಗಲಿದೆ

news18-kannada
Updated:March 31, 2020, 3:11 PM IST
ಕೊರೋನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ ಇನ್ಫೋಸಿಸ್; 100 ಕೋಟಿ ರೂಪಾಯಿ ನೆರವು
ಇನ್​ಫೋಸಿಸ್
  • Share this:
ಬೆಂಗಳೂರು (ಮಾ.31): ಕೊರೋನಾ ವೈರಸ್​ ವಿರುದ್ಧದ ಹೋರಾಟಕ್ಕೆ ಅನೇಕ ಸಂಸ್ಥೆಗಳು ಕೋಟಿ ಕೋಟಿ ರೂಪಾಯಿ ಹಣವನ್ನು ದೇಣಿಗೆಯಾಗಿ ನೀಡುತ್ತಿವೆ. ರಿಲಾಯನ್ಸ್​ ಇಂಡಸ್ಟ್ರೀಸ್​ ಸಂಸ್ಥೆ ಮುಖ್ಯಸ್ಥ ಮುಕೇಶ್​ ಅಂಬಾನಿ 500 ಕೋಟಿ ರೂಪಾಯಿ ಕೊಡುವುದಾಗಿ ಘೋಷಣೆ ಮಾಡಿದ್ದರು. ಈಗ ಇನ್ಫೋಸಿಸ್ ಫೌಂಡೇಷನ್‌ 100 ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ನೆರವಿನ ಹಸ್ತ ಚಾಚಿದೆ.

ಮೂರು ಪ್ರಮುಖವಾದ ಕ್ಷೇತ್ರಗಳಿಗೆ ಈ ಹಣವನ್ನು ಬಳಕೆ ಮಾಡಲು ಇನ್ಫೋಸಿಸ್​ ನಿರ್ಧರಿಸಿದೆ. ಈ ಹಣವನ್ನು ದೇಶಾದ್ಯಂತ ಕೊರೋನಾ ವೈರಸ್​ ಸೋಂಕಿತರಿಗೆ ಚಿಕಿತ್ಸೆ ನೀಡಲು ಮತ್ತು ಈ ಆಸ್ಪತ್ರೆಗಳ ಸಾಮರ್ಥ್ಯ ವಿಸ್ತರಣೆ ಮಾಡಲು ಬಳಸಿಕೊಳ್ಳಲಾಗುತ್ತಿದೆ. ವಿಶೇಷವಾಗಿ ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ರೋಗಿಗಳ ಚಿಕಿತ್ಸೆಗಾಗಿ ಈ ಹಣವನ್ನು ಬಳಕೆ ಆಗಲಿದೆ.

ವೆಂಟಿಲೇಟರ್‌ಗಳು, ಪರೀಕ್ಷಾ ಕಿಟ್‌ಗಳು ಮತ್ತು ಮಾಸ್ಕ್‌ಗಳು ಸೇರಿದಂತೆ ಇನ್ನಿತರೆ ಪರಿಕರಗಳನ್ನು ಆರೋಗ್ಯ ರಕ್ಷಣೆ ಸಿಬ್ಬಂದಿಗೆ ಒದಗಿಸಲು ಕೂಡ ಈ ಹಣ ಬಳಕೆ ಆಗಲಿದೆ. ಸಮಾಜದ ದುರ್ಬಲ ವರ್ಗದವರಿಗೆ ಆಹಾರ ಲಭ್ಯವಾಗುವಂತೆ ಮಾಡಲು ಈ ಹಣ ಬಳಸಿಕೊಳ್ಳಲಾಗುತ್ತಿದೆ. ಈ ಮೂಲಕ ಪ್ರಸ್ತುತ ಆರ್ಥಿಕ ಪರಿಣಾಮ ಉಂಟಾಗಿರುವ ಹೊರೆಯಿಂದ ಹೊರಬರಲು ಈ ಹಣ ವಿನಿಯೋಗವಾಗಲಿದೆ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಕೊರೋನಾ ತಡೆಗೆ 28 ಲಕ್ಷ ರೂ. ನೆರವು ನೀಡಿದ ಇನ್ಫೋಸಿಸ್ ಮಖ್ಯಸ್ಥೆ ಸುಧಾ ಮೂರ್ತಿ

ಕಳೆದ ಎರಡು ವಾರಗಳ ಹಿಂದೆ ಇನ್ಫೋಸಿಸ್ ಬೆಂಗಳೂರಿನಲ್ಲಿ ಕೋವಿಡ್-19 ರೋಗಿಗಳ ಚಿಕಿತ್ಸೆಗೆಂದೇ ಪ್ರತ್ಯೇಕ ಆಸ್ಪತ್ರೆ ಸ್ಥಾಪನೆಗೆ ನೆರವನ್ನು ಘೋಷಣೆ ಮಾಡಿತ್ತು. ಇದಲ್ಲದೇ, ದೇಶದ ಹಲವಾರು ಮಿಲಿಟರಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯಕೀಯ ಮತ್ತು ಪಿಪಿಇ ಸಲಕರಣೆಗಳನ್ನು ಒದಗಿಸುವುದಾಗಿ ಪ್ರಕಟಿಸಿದೆ. ಇದಲ್ಲದೇ, ಫೌಂಡೇಷನ್ ಅಗತ್ಯವಿರುವ ಸಾವಿರಾರು ಜನರಿಗೆ ಆಹಾರ ಮತ್ತು ನೈರ್ಮಲ್ಯ ಕಿಟ್‌ಗಳನ್ನು ಪೂರೈಕೆ ಮಾಡಲು ಹಲವಾರು ಎನ್‌ಜಿಒಗಳಿಗೆ ನೆರವು ನೀಡುತ್ತಿದೆ.
First published: March 31, 2020, 1:20 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading