ಹುಬ್ಬಳ್ಳಿ: ನಗರದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Minister Dr K Sudhakar) ಕೊರೊನಾ ನಿಯಮಗಳ (Corona Rules) ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (KPCC President DK Shivakumar) ಹೇಳಿಕೆಗೆ ಪ್ರತಿಕ್ರಿಯಿಸಿದರು. ಕೋವಿಡ್ ಹೆಸರಲ್ಲಿ ಬಿಜೆಪಿ (BJP) ಜನರಲ್ಲಿ ಭೀತಿ ಹುಟ್ಟಿಸುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸುಧಾಕರ್, ಅವರಿಗೆ ಅಷ್ಟು ಧೈರ್ಯ ಇದ್ದುದರಿಂದಲೇ ಎರೆಡರಡು ಬಾರಿ ಕೋವಿಡ್ ಆಸ್ಪತ್ರೆಯಲ್ಲಿ ಮಲಗಿದ್ದರು ಎಂದು ವ್ಯಂಗ್ಯ ಮಾಡಿದರು. ಅಗತ್ಯವಿದ್ದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರ ಟೆಸ್ಟಿಂಗ್ ಪ್ರಮಾಣ ಏರಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಕ್ ಡ್ರಿಲ್ ಪರಿಶೀಲನೆಯ ನಂತರ ಮಾತನಾಡಿದ ಅವರು, ಸದ್ಯ ರಾಂಡಮ್ ಆಗಿ ಟೆಸ್ಟ್ ಮಾಡಲಾಗುತ್ತಿದೆ. ಕೋವಿಡ್ ಪ್ರಮಾಣ ಏರಿಕೆಯಾದಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರ ಟೆಸ್ಟ್ ಪ್ರಮಾಣದಲ್ಲಿಯೂ ಹೆಚ್ಚಳ ಮಾಡಲಾಗುವುದು ಎಂದರು.
ಆರೋಗ್ಯ ವ್ಯವಸ್ಥೆ ಬಗ್ಗೆ ಮಾಕ್ ಡ್ರಿಲ್
ಯಾವ ದೇಶದಲ್ಲಿ ಕೋವಿಡ್ ಹೆಚ್ಚಾಗಿದೆಯೋ ಆ ದೇಶದಿಂದ ವಾಪಸ್ಸಾದ ಪ್ರಯಾಣಿಕರ ಮೇಲೆ ನಿಗಾ ಇಡಲಾಗುವುದು. ಸರ್ಕಾರಿ ಆರೋಗ್ಯ ವ್ಯವಸ್ಥೆ ಬಗ್ಗೆ ಮಾಕ್ ಡ್ರಿಲ್ ಮಾಡಲಾಗುತ್ತಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಇವತ್ತು ಮಾಕ್ ಡ್ರಿಲ್ ಮಾಡಲಾಗಿದೆ. ವೈದ್ಯಕೀಯ ಕಾಲೇಜಿನಲ್ಲಿಯೂ ಮಾಕ್ ಡ್ರಿಲ್ ಮಾಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಮಾಡಿಕೊಂಡ ಸಿದ್ಧತೆಗಳ ಪರಿಶೀಲನೆ ಮಾಡಲಾಗಿದೆ ಎಂದು ತಿಳಿಸಿದರು.
ನಿಮ್ಮ ರಕ್ಷಣೆ ಜವಾಬ್ದಾರಿ ನಮ್ಮದು
ಕೋವಿಡ್ಗಾಗಿ ಪ್ರತ್ಯೇಕ ಹಾಸಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಔಷಧಿ ದಾಸ್ತಾನು, ಆಕ್ಸಿಜನ್ ವ್ಯವಸ್ಥೆ ಎಲ್ಲದರ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಿಮ್ಸ್ ವೀಕ್ಷಣೆ ನಂತರ ನನಗೆ ಸಮಾಧಾನ ತಂದಿದೆ. ಜನ ಯಾವುದೇ ಕಾರಣಕ್ಕೂ ಆತಂಕಪಟ್ಟುಕೊಳ್ಳುವ ಅಗತ್ಯವಿಲ್ಲ. ಇದರ ಹೊರತಾಗಿಯೂ ಕೋವಿಡ್ ಹೊಸ ತಳಿ ತೊಂದರೆ ಕೊಟ್ಟಲ್ಲಿ ನಿಮ್ಮ ರಕ್ಷಣೆ ಜವಾಬ್ದಾರಿ ನಮ್ಮದು. ಕಿಮ್ಸ್ನಲ್ಲಿ ಎರಡು ಆಕ್ಸಿಜನ್ ಪ್ಲಾಂಟ್ ಇದೆ ಎಂದು ಹೇಳಿದರು.
ಹೊಸ ವರ್ಷಕ್ಕೆ ಕೆಲವೊಂದು ಮಾರ್ಗಸೂಚಿ ಬಿಡುಗಡೆ ಮಾಡಿದ್ದೇವೆ. ಟಫ್ ರೂಲ್ಸ್ ಅನ್ನೋದಕ್ಕಿಂತ ಜನ ಟಫ್ ಮೈಂಡ್ ಆಗಬೇಕು. ಕೋವಿಡ್ ಎದುರಿಸ್ತೇವೆ ಅಂತ ದೃಢ ಸಂಕಲ್ಪ ಮಾಡಬೇಕು ಎಂದು ಸುಧಾಕರ್ ತಿಳಿಸಿದ್ದಾರೆ. ಸರ್ಕಾರ ಮತ್ತು ನಮ್ಮ ಇಲಾಖೆ ದೃಢ ಸಂಕಲ್ಪ ಮಾಡಿದೆ. ಕೋವಿಡ್ ಹೊಸ ಅಲೆಯನ್ನು ಮಣಿಸ್ತೇವೆ. ಮೊದಲ ಮೂರು ಅಲೆಗಳನ್ನು ಸಮರ್ಥವಾಗಿ ಎದುರಿಸಿದ್ದೇವೆ.
ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಕೋವಿಡ್ ಲಕ್ಷಣ ಹೊಂದಿದವರಿಗೆ ಟೆಸ್ಟ್ ಮಾಡಲಾಗುತ್ತಿದೆ. ಶೇ.2 ಪರ್ಸೆಂಟೇಜ್ ಟೆಸ್ಟ್ ಮುಂದುವರಿಯುತ್ತೆ. ಏನಾದ್ರೂ ಕೇಸ್ ಗಳು ಪತ್ತೆಯಾದಲ್ಲಿ ಸ್ಕ್ರೀನಿಂಗ್, ಟೆಸ್ಟಿಂಗ್ ಮಾಡ್ತೇವೆ ಎಂದರು.
ಇದನ್ನೂ ಓದಿ: Bengaluru : ಪ್ರೇಯಸಿಯ ಆಸೆ ಈಡೇರಿಸಲು ಹೋಗಿ ಪೊಲೀಸರ ಅತಿಥಿಯಾದ ಯುವಕ
ವ್ಯಾಕ್ಸಿನ್ ಕೊರತೆ ಇಲ್ಲ
ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆ ಇಲ್ಲಯ. ಹತ್ತಿರದ ಆರೋಗ್ಯ ಕೇಂದ್ರಕ್ಕೆ ಹೋಗಿ ಲಸಿಕೆ ಪಡೆದುಕೊಳ್ಳಿ. ನಮ್ಮ ಬಳಿ ಇನ್ನೂ 8.50 ಲಕ್ಷ ಡೋಸ್ ವ್ಯಾಕ್ಸಿನ್ ಇದೆ. 20 ರಿಂದ 25 ಲಕ್ಷ ತರಿಸೋಕೆ ತಯಾರಿದ್ದೇವೆ ಎಂದು ಹೇಳಿದರು.
ಬೆಳಗಾವಿ ನಮ್ಮದು
ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಅಲ್ಲಿನ ಜನಪ್ರತಿನಿಧಿಗಳು ಪದೇ ಪದೇ ಕ್ಯಾತೆ ತೆಗೆಯುತ್ತಿರುವುದಕ್ಕೆ ಕಿಡಿಕಾರಿರುವ ಡಾ.ಸುಧಾಕರ್, ಬೆಳಗಾವಿ ನಮಗೆ ಸೇರಬೇಕು ಅನ್ನೋ ಶಿಂಧೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಾವು ಒಕ್ಕೂಟದ ವ್ಯವಸ್ಥೆಯಲ್ಲಿದ್ದೇವೆ. ಮಾಹಾಜನ್ ವರದಿಯೇ ನಮಗೆ ಅಂತಿಮ ಎಂದು ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ