ಸುಳ್ವಾಡಿ ವಿಷ ದುರಂತ ಪ್ರಕರಣ : ಸುಪ್ರೀಂಕೋರ್ಟ್​ ​ನಿಂದ ಇಮ್ಮಡಿ ಮಹದೇವ ಸ್ವಾಮೀಜಿ ಜಾಮೀನು ಅರ್ಜಿ ವಜಾ​

ಚಾಮರಾಜನಗರ ಸ್ಥಳೀಯ ಕೋರ್ಟ್‌, ರಾಜ್ಯ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ವಜಾ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲರಿದ್ದಇಮ್ಮಡಿ ಮಹದೇವಸ್ವಾಮಿ. ಕಳೆದ ನವೆಂಬರ್ 21 ರಂದು ಸುಪ್ರೀಂ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.

G Hareeshkumar | news18-kannada
Updated:December 2, 2019, 3:44 PM IST
ಸುಳ್ವಾಡಿ ವಿಷ ದುರಂತ ಪ್ರಕರಣ : ಸುಪ್ರೀಂಕೋರ್ಟ್​ ​ನಿಂದ ಇಮ್ಮಡಿ ಮಹದೇವ ಸ್ವಾಮೀಜಿ ಜಾಮೀನು ಅರ್ಜಿ ವಜಾ​
ಇಮ್ಮಡಿ ಮಹದೇವ ಸ್ವಾಮೀಜಿ
  • Share this:
ಚಾಮರಾಜನಗರ(ಡಿ.03): ಕಿಚ್ಚುಗತ್ತಿ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಹಾಕಿದ ಪ್ರಕರಣದದಲ್ಲಿ ಜಾಮೀನು ಕೋರಿ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್​​​ನ ತ್ರೀಸದಸ್ಯ ಪೀಠ ವಜಾ ಮಾಡಿದೆ. ಜಾಮೀನು ಅರ್ಜಿ ವಜಾ ಹಿನ್ನೆಲೆಯಲ್ಲಿ ಇಮ್ಮಡಿ ಮಹದೇವಸ್ವಾಮಿಗೆ ಜೈಲೇ ಗತಿ ಎನ್ನಲಾಗಿದೆ.

ಸುಪ್ರಿಂ ಕೋರ್ಟ್ ನ ತ್ರಿ ಸದಸ್ಯ ಪೀಠದಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾ. ಎನ್.ವಿ ರಮಣ. ನ್ಯಾ.ಅಜಯ್ ರಸ್ಟೋಗಿ ಹಾಗೂ ನ್ಯಾ.ವಿ.ರಾಮಸುಬ್ರಮಣ್ಯ ನೇತೃತ್ವದ ತ್ರಿಸದಸ್ಯ ಪೀಠ ನಡೆಸಿತ್ತು. ಇಮ್ಮಡಿ ಮಹದೇವಸ್ವಾಮಿ ಪರವಾಗಿ ದುವಾ ಅಸೋಸಿಯೇಟ್ ವಾದ ಮಂಡನೆ ಮಾಡಿದ್ದರು.

ಚಾಮರಾಜನಗರ ಸ್ಥಳೀಯ ಕೋರ್ಟ್‌, ರಾಜ್ಯ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ವಜಾ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲರಿದ್ದಇಮ್ಮಡಿ ಮಹದೇವಸ್ವಾಮಿ. ಕಳೆದ ನವೆಂಬರ್ 21 ರಂದು ಸುಪ್ರೀಂ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ : ಪಂಜಾಬ್ ಸರ್ಕಾರಕ್ಕೆ ಭಾರೀ ಮೊತ್ತದ ದಂಡ ವಿಧಿಸಿದ ಎನ್​ಜಿಟಿ

ಘಟನೆಗೆ ಸಂಬಂಧಿಸಿದಂತೆ 90 ದಿನಗಳ ತನಿಖೆ ನಡೆಸಿದ ತನಿಖಾಧಿಕಾರಿ ಡಿವೈಎಸ್ಪಿ ಪುಟ್ಟಮಾದಯ್ಯ ಚಾಮರಾಜನಗರ ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದರು. ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧದ ದ್ವೇಷದ ಹಿನ್ನೆಲೆ ಇಮ್ಮಡಿ ಮಹದೇವ ಸ್ವಾಮೀಜಿ, ಅಂಬಿಕಾ, ಮಾದೇಶ್, ದೊಡ್ಡಯ್ಯ ಸಹಾಯದಿಂದ ಪ್ರಸಾದಕ್ಕೆ ವಿಷ ಹಾಕಿದ್ದರು. ಈ ವಿಷ ಪ್ರಸಾದ ಸೇವಿಸಿ 17 ಜನರು ಸಾವನ್ನಪ್ಪಿದ್ದರು.
First published:December 2, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ