ಸುಳ್ವಾಡಿ ವಿಷ ದುರಂತ ಪ್ರಕರಣ; ಕಿಚ್​ಗುತ್​ ಮಾರಮ್ಮ ದೇವಾಲಯದ ಬಾಗಿಲು ತೆರೆಯುವಂತೆ ಗ್ರಾಮಸ್ಥರ ಮನವಿ

ಸಾಲೂರು ಮಠದ ಇಮ್ಮಡಿ ಮಹದೇವಸ್ವಾಮಿ ಹಾಗು ಇತರ ಮೂವರು ಸೇರಿ ಪ್ರಸಾದದಲ್ಲಿ ವಿಷಬೆರೆಸಿ ದೊಡ್ಡ ದುರಂತಕ್ಕೆ ಕಾರಣವಾಗಿ ಕಂಬಿ ಎಣಿಸುತ್ತಿದ್ದಾರೆ.

Latha CG | news18-kannada
Updated:November 20, 2019, 7:28 AM IST
ಸುಳ್ವಾಡಿ ವಿಷ ದುರಂತ ಪ್ರಕರಣ; ಕಿಚ್​ಗುತ್​ ಮಾರಮ್ಮ ದೇವಾಲಯದ ಬಾಗಿಲು ತೆರೆಯುವಂತೆ ಗ್ರಾಮಸ್ಥರ ಮನವಿ
ಕಿಚ್​ ಗುತ್​ ಮಾರಮ್ಮ ದೇವಾಲಯ
  • Share this:
ಚಾಮರಾಜನಗರ(ನ.20): ವಿಷ ಪ್ರಸಾದ ಸೇವನೆಯಿಂದ 17 ಮಂದಿ ಸತ್ತು 120ಕ್ಕೂ  ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರೂ ಸಹ ಭಕ್ತರಿಗೆ ಆ ದೇವಿಯ ಮೇಲಿನ ಭಕ್ತಿ ಒಂದಿನಿತು ಕಡಿಮೆಯಾಗಿಲ್ಲ. ಈ ದುರಂತದ ಹಿನ್ನಲೆಯಲ್ಲಿ ದೇವಸ್ಥಾನವನ್ನು ಮುಚ್ಚಿ ಒಂದು ವರ್ಷ ಕಳೆಯುತ್ತಾ ಬಂದಿದೆ. ದೇವಿಯ ದರ್ಶನ ಸಿಗದೆ ಭಕ್ತರು ಕಣ್ಣೀರಿಟ್ಟು ಗೋಳಾಡುತ್ತಿದ್ದಾರೆ. ದೇವಸ್ಥಾನಕ್ಕೆ ಮುಚ್ಚಿರುವುದರಿಂದ ಮಾರಮ್ಮ ಮುನಿಸಿಕೊಂಡಿದ್ದಾಳೆ ಎಂಬುದು ಅಲ್ಲಿನ ಜನರ ನಂಬಿಕೆ. ಹಾಗಾಗಿಯೇ ಹಲವಾರು ರೀತಿಯ ರೋಗ ರುಜಿನಗಳು, ಸಂಕಷ್ಟಗಳು ಬರುತ್ತಿವೆ ಎಂದು ಆ ಭಕ್ತರು ನಂಬಿದ್ದಾರೆ.

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಕಿಚ್ ಗುತ್ ಮಾರಮ್ಮ ದೇವಸ್ಥಾನದ ಆಡಳಿತ ಚುಕ್ಕಾಣಿ ಹಿಡಿಯುವ ಹುನ್ನಾರಕ್ಕ 17 ಮಂದಿ ಬಲಿಯಾಗಿದ್ದರು. 120 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರು. ಸಾಲೂರು ಮಠದ ಇಮ್ಮಡಿ ಮಹದೇವಸ್ವಾಮಿ ಹಾಗು ಇತರ ಮೂವರು ಸೇರಿ ಪ್ರಸಾದದಲ್ಲಿ ವಿಷಬೆರೆಸಿ ದೊಡ್ಡ ದುರಂತಕ್ಕೆ ಕಾರಣವಾಗಿ ಕಂಬಿ ಎಣಿಸುತ್ತಿದ್ದಾರೆ.

ಅಥಣಿ ಕಾಂಗ್ರೆಸ್ಸಿಗೆ ಕಗ್ಗಂಟಾದ ಬಂಡಾಯ ಅಭ್ಯರ್ಥಿಗಳಿಂದ ಒಕ್ಕೂಟ ರಚನೆ

ಈ ದುರಂತದ ಹಿನ್ನಲೆಯಲ್ಲಿ ಕಿಚ್ ಗುತ್ ಮಾರಮ್ಮ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾಯಿಸಿ ಬೀಗ ಜಡಿಯಲಾಗಿದೆ. ಹೀಗಾಗಿ ಪೂಜೆಯೂ ನಿಂತು ಹೋಗಿದೆ. ದೇವಸ್ಥಾನ ಮುಚ್ಚಿರುವುದರಿಂದ ಮಾರಮ್ಮ ದೇವಿ ಮುನಿಸಿಕೊಂಡಿದ್ದಾಳೆ. ಹಾಗಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ರೋಗರುಜಿನಗಳು ಕಾಣಿಸಿಕೊಳ್ಳುತ್ತಿವೆ. ಜನರು ಸಂಕಷ್ಟಕ್ಕೀಡಾಗುತ್ತಿದ್ದಾರೆ ಎಂಬುದು ಭಕ್ತರ ನಂಬಿಕೆಯಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಿಕ್ಷಣ ಸಚಿವ ಇಂದು ಸುಳ್ವಾಡಿ ಮಾರಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಭಕ್ತರ ಕಣ್ಣಿರ ಕಟ್ಟೆ ಒಡೆಯಿತು. ದೇವಸ್ಥಾನವನ್ನು ಕೂಡಲೇ ತೆರೆಯುವಂತೆ ಭಕ್ತರು ಗೋಳಿಟ್ಟರು. ಕಿಚ್ ಗುತ್ ಮಾರಮ್ಮ ದೇವಸ್ಥಾನಕ್ಕೆ ಮುಜರಾಯಿ ಇಲಾಖೆ ಅನುಮತಿ ಪಡೆದು ಆದಷ್ಟು ಬೇಗ ಅರ್ಚಕರನ್ನು ನೇಮಿಸಿ ದೇವಸ್ಥಾನ ತೆರೆಯುವುದಾಗಿ ಸಚಿವ ಸುರೇಶ್ ಕುಮಾರ್ ಈ ವೇಳೆ ಭರವಸೆ ನೀಡಿದರು.

ಗೊಟಬಯ ರಾಜಪಕ್ಸರನ್ನು ಭೇಟಿ ಮಾಡಿದ ವಿದೇಶಾಂಗ ಸಚಿವ ಜೈಶಂಕರ್; ನ.29ರಂದು ಭಾರತಕ್ಕೆ ಶ್ರೀಲಂಕಾ ನೂತನ ಅಧ್ಯಕ್ಷ

ಇದಕ್ಕೂ ಮೊದಲು ಸಚಿವ ಸುರೇಶ್ ಕುಮಾರ್ ವಿಷದುರಂತದ ಸಂತ್ರಸ್ತರನ್ನು ಭೇಟಿಯಾದರು. ಹಿಂದಿನ ಸರ್ಕಾರ ನೀಡಿದ್ದ ಭರವಸೆಯಂತೆ ಮೃತಪಟ್ಟವರ ಕುಟುಂಬಗಳಿಗೆ ಜಮೀನು ಮಂಜೂರು ಮಾಡಲು ಕ್ರಮ ವಹಿಸುವುದಾಗಿ ಭರವಸೆ ನೀಡಿದರು.(ವರದಿ: ಎಸ್.ಎಂ.ನಂದೀಶ್)
First published:November 20, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ