ಮಂಡ್ಯದಲ್ಲಿ ಸರ್ಕಾರದ ವಿರುದ್ಧ ತೀವ್ರಗೊಂಡ ರೈತ ಹೋರಾಟ: ಸುಮಲತಾ ಸಂಪೂರ್ಣ ಬೆಂಬಲ ಘೋಷಣೆ

ಈಗಾಗಲೇ ಜಿಲ್ಲೆಯಲ್ಲಿ ಹೆಚ್ಚಿನ‌ ರೈತರು ಆತ್ಮಹತ್ಯೆಗೆ ಶರಣಾಗಿದ್ದು, ಈಗ ನೀರಿಲ್ಲದೆ ಬೆಳೆ ಒಣಗಿದ್ರೆ ಮತ್ತಷ್ಟು ರೈತರು‌ ಆತ್ಮಹತ್ಯೆ ದಾರಿ ಹಿಡಿಯೋದು ಸುಳ್ಳಲ್ಲ.

Ganesh Nachikethu | news18
Updated:June 27, 2019, 4:39 PM IST
ಮಂಡ್ಯದಲ್ಲಿ ಸರ್ಕಾರದ ವಿರುದ್ಧ ತೀವ್ರಗೊಂಡ ರೈತ ಹೋರಾಟ: ಸುಮಲತಾ ಸಂಪೂರ್ಣ ಬೆಂಬಲ ಘೋಷಣೆ
ಸುಮಲತಾ ಅಂಬರೀಶ್​​, ದರ್ಶನ್​​ ಪುಟ್ಟಣ್ಣಯ್ಯ
  • News18
  • Last Updated: June 27, 2019, 4:39 PM IST
  • Share this:
ಬೆಂಗಳೂರು(ಜೂನ್​​​.27): 'ನಾಲೆಗೆ ನೀರು ಹರಿಸಿ, ಬೆಳೆ ಉಳಿಸಿ' ಎಂದು ಆಗ್ರಹಿಸಿ ಮಂಡ್ಯದ ರೈತರು ಬೀದಿಗಿಳಿದು ಪ್ರತಿಭಟಿಸುತ್ತಿದ್ಧಾರೆ. ಮಳೆ ಇಲ್ಲದೆ ಒಣಗುವ ಸ್ಥಿತಿಗೆ ಬಂದಿರುವ ಬೆಳೆಯ ರಕ್ಷಣೆಗಾಗಿ ರೈತ ನಾಯಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ. ತಮ್ಮ ಹೋರಾಟಕ್ಕೆ ಸರ್ಕಾರ ಸ್ಪಂದಿಸದಿದ್ದರೆ, ಜಿಲ್ಲಾಧಿಕಾರಿ‌ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಈ ಬೆನ್ನಲ್ಲೇ ರೈತರ ಬೆನ್ನಿಗೆ ನಿಲ್ಲುವುದಾಗಿ ಮಂಡ್ಯದ ಸಂಸದೆ ಸುಮಲತಾ ಅಂಬರೀಶ್​​ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆರೆ ಕಟ್ಟೆಗಳನ್ನು ತುಂಬಿಸಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ನಿವಾರಿಸುವಂತೆ ರೈತರು ಹೋರಾಟ ನಡೆಸುತ್ತಿದ್ದಾರೆ. ಕಳೆದ ಒಂದು ವಾರದಿಂದ ನಡೆಯುತ್ತಿರುವ ಈ ಕಾವೇರಿ ಮುಷ್ಕರಕ್ಕೆ ಸದಾ ನನ್ನ ಬೆಂಬಲವಿದೆ. ಈಗಾಗಲೇ 2 ಟಿಎಂಸಿ ನೀರನ್ನು ಹರಿಸುವಂತೆ ಪ್ರಧಾನ ಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಹಾಗೆಯೇ ಕೇಂದ್ರ ಜಲ ಶಕ್ತಿ ಸಚಿವರಿಗೂ ಮನವಿ ಮಾಡಿದ್ದೇನೆ ಎಂದು ಸುಮಲತಾ ಅಂಬರೀಶ್​​ ಟ್ವಿಟ್ಟರ್​​ನಲ್ಲಿ ಬರೆದುಕೊಂಡಿದ್ದಾರೆ.ಮಂಡ್ಯದಲ್ಲಿನ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ದರ್ಶನ್​​ ಪುಟ್ಟಣಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಈ ಹೋರಾಟ 7ನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೂ ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸಿಲ್ಲ ಎಂದು ಹೋರಾಟನಿರತ ರೈತರು ಅಸಮಧಾನಗೊಂಡಿದ್ದಾರೆ. ಇದರಿಂದ ಸಿಟ್ಟಿಗೆದ್ದು ಪ್ರತಿಭಟನೆ ತೀವ್ರಗೊಳಿಸುವ ನಿರ್ಧಾರಕ್ಕೆ ಬಂದಿರುವ ಇವರು, ಜಿಲ್ಲಾಧಿಕಾರಿ‌ ಕಚೇರಿಗೆ ಮುತ್ತಿಗೆಗೆ  ಮುಂದಾಗಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಡಿಸಿ ಕಚೇರಿ ಸುತ್ತ ಬ್ಯಾರಿಕೇಡ್​​ಗಳನ್ನು ಹಾಕಿದ್ದಾರೆ.
Loading...
ಇನ್ನು, ಕಳೆದ 6 ದಿನಗಳಿಂದ ನೀರಿಗಾಗಿ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿದ್ದರೂ ಸ್ಪಂದಿಸಿದ ಸರ್ಕಾರದ ವಿರುದ್ದ ರೈತರು ರೊಚ್ಚಿಗೆದ್ದಿದ್ದಾರೆ. ಜಿಲ್ಲೆಯ ಕಾವೇರಿ ನೀರಾವರಿ ನಿಗಮ ಕೇಂದ್ರ ಕಚೇರಿಯಲ್ಲಿ ಮಾಡುತ್ತಿದ್ದ ಪ್ರತಿಭಟನೆಯನ್ನು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಿಗೂ ವಿಸ್ತರಣೆ ಮಾಡಿದ್ದಾರೆ. ಮದ್ದೂರು ಪಟ್ಟಣದ ತಹಶೀಲ್ದಾರ್ ಮತ್ತು ಕಾವೇರಿ ನೀರಾವರಿ ಕಚೇರಿಗೆ ಜಾನುವಾರುಗಳೊಂದಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾದರೂ ನಾಲೆಗೆ ನೀರು ಹರಿಸುವಂತೆ ಒತ್ತಾಯಿಸಿದ್ದು, ನೀರು ಹರಿಸದಿದ್ರೆ ಕುಟುಂಬದೊಂದಿಗೆ ಸಾಮೂಹಿಕ ಆತ್ಮಹತ್ಯೆಯೊಂದೇ ದಾರಿ ಎಂದು ಸರ್ಕಾರಕ್ಕೆ ರೈತರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮರಾಠರಿಗೆ ಮೀಸಲಾತಿ: ಬಾಂಬೆ ಹೈಕೋರ್ಟ್ ಸಮ್ಮತಿ

ಈಗಾಗಲೇ ಜಿಲ್ಲೆಯಲ್ಲಿ ಹೆಚ್ಚಿನ‌ ರೈತರು ಆತ್ಮಹತ್ಯೆಗೆ ಶರಣಾಗಿದ್ದು, ಈಗ ನೀರಿಲ್ಲದೆ ಬೆಳೆ ಒಣಗಿದ್ರೆ ಮತ್ತಷ್ಟು ರೈತರು‌ ಆತ್ಮಹತ್ಯೆ ದಾರಿ ಹಿಡಿಯೋದು ಸುಳ್ಳಲ್ಲ.
-------------------
First published:June 27, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...