HOME » NEWS » State » SUMMER HOLIDAYS DECLARE TO SCHOOLS IN KARNATAKA DUE TO CORONA FEAR LG

ರಾಜ್ಯದಲ್ಲಿ ಕೊರೋನಾ ಹೆಚ್ಚಾದ ಹಿನ್ನೆಲೆ; ಶಾಲೆಗಳಿಗೆ ಜೂನ್​ 14ರವರೆಗೆ ಬೇಸಿಗೆ ರಜೆ ಘೋಷಣೆ

ಜೂನ್ 1-14ರವರೆಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಪುನರ್ಮನನ ತರಗತಿಗಳು ಆರಂಭವಾಗಲಿವೆ.  ಜೂನ್ 15 ರಿಂದ 8, 9ನೇ ತರಗತಿಗಳು ಪ್ರಾರಂಭವಾಗಲಿವೆ.

news18-kannada
Updated:May 5, 2021, 3:06 PM IST
ರಾಜ್ಯದಲ್ಲಿ ಕೊರೋನಾ ಹೆಚ್ಚಾದ ಹಿನ್ನೆಲೆ; ಶಾಲೆಗಳಿಗೆ ಜೂನ್​ 14ರವರೆಗೆ ಬೇಸಿಗೆ ರಜೆ ಘೋಷಣೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ಮೇ 05): ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈಗ ರಾಜ್ಯದಲ್ಲಿ ಶಾಲೆಗಳ ರಜಾ ಅವಧಿಯನ್ನು ಘೋಷಣೆ ಮಾಡಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.  ಹೌದು, ಮೇ 24ರಂದು ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ ಹಾಗೂ ಪ್ರಥಮ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಲಾಗಿದೆ.  ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಈಗ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯನ್ನು ಘೋಷಿಸಲಾಗಿದೆ.

ಪ್ರಾಥಮಿಕ ಶಾಲೆಗಳಿಗೆ ಜೂನ್ 14 ರವರೆಗೂ ಬೇಸಿಗೆ ರಜೆ ಘೋಷಿಸಿದ್ದರೆ,  ಪ್ರೌಢ ಶಾಲೆಗಳಿಗೆ ಈ ತಿಂಗಳ 31 ರವರೆಗೂ ರಜೆ ನೀಡಲಾಗಿದೆ. ಶಿಕ್ಷಣ ಇಲಾಖೆಯು ರಜಾ ಅವಧಿಯನ್ನು ಪರಿಷ್ಕರಿಸಿ ಸುತ್ತೋಲೆ ಹೊರಡಿಸಿದೆ. ಜೊತೆಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಬಗ್ಗೆಯೂ ಗಮನ ಹರಿಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.  ಪ್ರೌಢ ಶಾಲಾ ಶಿಕ್ಷಕರು ರಜೆಯ ಅವಧಿಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ದತೆ ಬಗ್ಗೆ ಗಮನ ಹರಿಸಬೇಕು.

ವಿದ್ಯಾರ್ಥಿಗಳ ಜೊತೆ ನಿರಂತರ ದೂರವಾಣಿ ಸಂಪರ್ಕದಲ್ಲಿರಬೇಕು. ವಿದ್ಯಾರ್ಥಿಗಳಿಗೆ ಕಲಿಕೆಗೆ ಪ್ರೇರೇಪಿಸಬೇಕು ಎಂದು ಹೇಳಿದೆ.

ಜೂನ್ 1-14ರವರೆಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಪುನರ್ಮನನ ತರಗತಿಗಳು ಆರಂಭವಾಗಲಿವೆ.  ಜೂನ್ 15 ರಿಂದ 8, 9ನೇ ತರಗತಿಗಳು ಪ್ರಾರಂಭವಾಗಲಿವೆ.

Explainer: ದಕ್ಷಿಣ ಭಾರತದ ಎನ್ 440 ಕೆ ಕೋವಿಡ್ -19 ರೂಪಾಂತರ ಯಾವುದು..? ಅದು 15 ಪಟ್ಟು ಹೆಚ್ಚು ಮಾರಕವೇಕೆ ಗೊತ್ತಾ..?

ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ನಿನ್ನೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದರು. ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಕೂಡ ಹೇಳಿದ್ದರು. ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ. ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ.

ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರು ವರ್ಕ್ ಫ್ರಂ ಹೋಂ ಕೆಲಸ ಮಾಡಲು ಸೂಚಿಸಲಾಗಿದೆ. ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲ ಆಡಳಿತಾತ್ಮಕ ಕ್ರಮಗಳಲಿಗೆ ಅವರು ಸದಾ ಲಭ್ಯವಾಗಬೇಕಿದೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಬೇಕಿದೆ ಎಂದು ಸುರೇಶ್ ಕುಮಾರ್ ಹೇಳಿದ್ದರು.
Youtube Video

ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಈ ಬಾರಿ 5,92,816 ಹೊಸ ವಿದ್ಯಾರ್ಥಿಗಳು, 76,422 ಪುನರಾವರ್ತಿತ ಅಭ್ಯಗಳು ಹಾಗೂ 17,470 ಖಾಸಗಿ ಅಭ್ಯಗಳು ಸೇರಿ 68,6708 ಅಭ್ಯಗಳು ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದರು.
Published by: Latha CG
First published: May 5, 2021, 3:06 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories