K Sudhakar: ಶೀಘ್ರವೇ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ- ಸುಧಾಕರ್

ಕಳೆದ ಎರಡು ವರ್ಷದಲ್ಲಿ ಆರೋಗ್ಯ, ವೈದ್ಯಕೀಯ ಸೇವೆ ಉತ್ತಮವಾಗಿದೆ. ಆದಷ್ಟು ಬೇಗ ಉತ್ತರ ಕನ್ನಡದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಈಡೇರಿಸೋದಾಗಿ ಆರೋಗ್ಯ ಸಚಿವ  ಡಾ. ಸುಧಾಕರ್ ಹೇಳಿದ್ದಾರೆ.

ಸಚಿವ ಸುಧಾಕರ್​

ಸಚಿವ ಸುಧಾಕರ್​

  • Share this:
ಬೆಂಗಳೂರು (ಜು.25): ಉತ್ತರ ಕನ್ನಡ  (Uttara Kannada) ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ  (Multi specialty hospital)ಬೇಡಿಕೆ ಇಟ್ಟು ಜನರು ಟ್ಟಿಟರ್​ ಅಭಿಯಾನ ಶುರು ಮಾಡಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳು ಆಗಬೇಕಿದೆ. ಆದರೆ ಕಳೆದ 50-60ವರ್ಷದಲ್ಲಿ ಆಗಿರಲಿಲ್ಲ. ಬಿಜೆಪಿ ಕಳೆದ ಎರಡು ವರ್ಷದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ಮಾಡಿದೆ. ಸರ್ಕಾರಕ್ಕೆ ಹಣಕಾಸಿನ ನಿರ್ಬಂಧ ಇರುತ್ತದೆ. ಇನ್ನು ಕೋವಿಡ್ ಬಂದಿದ್ದರಿಂದಲೇ ಆರೋಗ್ಯ ವ್ಯವಸ್ಥೆ ಮತ್ತಷ್ಟು ಸುಧಾರಿಸಲು ಸಾಧ್ಯವಾಯಿತು. ವೈದ್ಯರ ನೇಮಕಾತಿಯಂತ ಪ್ರಕ್ರಿಯೆ ನಡೆದಿವೆ. ಈ ಹಿಂದಿನಗಿಂತಲೂ ಕಳೆದ ಎರಡು ವರ್ಷದಲ್ಲಿ ಆರೋಗ್ಯ, ವೈದ್ಯಕೀಯ ಸೇವೆ ಉತ್ತಮವಾಗಿದೆ. ಆದಷ್ಟು ಬೇಗ ಉತ್ತರ ಕನ್ನಡದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಈಡೇರಿಸೋದಾಗಿ ಆರೋಗ್ಯ ಸಚಿವ  ಡಾ. ಸುಧಾಕರ್ (Sudhakar) ಹೇಳಿದ್ದಾರೆ.

ಆಸ್ಪತ್ರೆ ಮಂಜೂರಾಗುವವರೆಗೂ ಪ್ರಯತ್ನ ನಿಲ್ಲೋದಿಲ್ಲ

ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ವಿಚಾರವಾಗಿ ಮಾತಾಡಿ ವಿಶ್ವೇಶ್ವರ ಕಾಗೇರಿ ಅವರು,  ಆಸ್ಪತ್ರೆಗಾಗಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದೇವೆ. ಈಗ ಆರೋಗ್ಯ ಸಚಿವ ಸುಧಾಕರ್ ಅವರ ಜೊತೆ ಮಾತನಾಡಿದ್ದೇನೆ. ಅಧಿಕಾರಿಗಳು ಮತ್ತು ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ. ಸುಧಾಕರ್ ಕೂಡ ಇದು ವಿಶೇಷ ಪ್ರಕರಣ ಅಂತ ಹೇಳಿದ್ದಾರೆ. ಸಿಎಂ ಜೊತೆ ಚರ್ಚೆ ಮಾಡಿ ಆಸ್ಪತ್ರೆ ಮಂಜೂರು ಮಾಡೋದಾಗಿ ಸುಧಾಕರ್‌ ಹೇಳಿದ್ದಾರೆ. ಅಂತಿಮ ನಿರ್ಣಯ ಸುಧಾಕರ್ ಅವರು ತೆಗೆದುಕೊಳ್ಳಲಿದ್ದಾರೆ. ಹಲವು ವರ್ಷಗಳಿಂದ ಆಸ್ಪತ್ರೆ ಮಂಜೂರಾಗದ ವಿಚಾರದ ಬಗ್ಗೆ ಚರ್ಚಿಸಿದ್ದ,   ಸಚಿವರು ಸಹ ಅಗತ್ಯ ಪ್ರಯತ್ನ ಮಾಡೋದಾಗಿ ಹೇಳಿದ್ದಾರೆ. ಆಸ್ಪತ್ರೆ ನಿರ್ಮಾಣ ಮಾಡೋವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರ್ತೇವೆ ಎಂದು ಕಾಗೇರಿ ಹೇಳಿದ್ದಾರೆ.

ಆಸ್ಪತ್ರೆಗಾಗಿ ಹೋರಾಟಕ್ಕೆ ಕುಮಾರಸ್ವಾಮಿ ಬೆಂಬಲ

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ಜೊತೆಗೆ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರ್ಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: MonkeyPox: ದೇಶದಲ್ಲಿ ಮಂಕಿಪಾಕ್ಸ್ ಕೇಸ್​ಗಳು ಪತ್ತೆ; ರೋಗ ತಡೆಗೆ ಕರ್ನಾಟಕದಲ್ಲಿ ಕಟ್ಟೆಚ್ಚರ- ಸುಧಾಕರ್

ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯದ ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ, ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂತಹ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ ಎಂದು ಹೇಳಿದ್ದಾರೆ.





ಇದನ್ನೂ ಓದಿ: CET Result: ಜುಲೈ 30ರಂದು ಸಿಇಟಿ ಫಲಿತಾಂಶ ಪ್ರಕಟ- ಅಶ್ವತ್ಥ ನಾರಾಯಣ

ಕೋವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರ್ಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟಿಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Published by:Pavana HS
First published: