ಡಿಕೆಶಿ ಮತ್ತಿತರರು ನಿರಾಳ; ಸುಪ್ರೀಂ ಕೋರ್ಟ್​​ನಲ್ಲಿ ಇಡಿ ಅರ್ಜಿ ವಜಾ; ಕೇಂದ್ರಕ್ಕೂ ತರಾಟೆ

ಈ ವಿಚಾರಣೆಯಲ್ಲಿ ಸಿಬಿಐ ಪರ ವಕೀಲರು ತಮ್ಮ ವಾದ ಮಂಡನೆಗೆ ಮುಂದಾದಾಗ ಅವರನ್ನು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು. ಮೊದಲು ನಿಮ್ಮ ನಡೆ ಬದಲಿಸಿಕೊಳ್ಳಿ ಎಂದು ಸಿಬಿಐ ಪರ ವಕೀಲರಿಗೆ ನ್ಯಾಯಮೂರ್ತಿಗಳು ಕಿವಿಹಿಂಡಿದರು.

news18
Updated:November 15, 2019, 12:03 PM IST
ಡಿಕೆಶಿ ಮತ್ತಿತರರು ನಿರಾಳ; ಸುಪ್ರೀಂ ಕೋರ್ಟ್​​ನಲ್ಲಿ ಇಡಿ ಅರ್ಜಿ ವಜಾ; ಕೇಂದ್ರಕ್ಕೂ ತರಾಟೆ
ಡಿ.ಕೆ. ಶಿವಕುಮಾರ್
  • News18
  • Last Updated: November 15, 2019, 12:03 PM IST
  • Share this:
ನವದೆಹಲಿ(ನ. 15): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ನೀಡಿದ್ದ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ಡಿಕೆ ಶಿವಕುಮಾರ್ ಅವರು ಬಂಧನ ಭೀತಿಯಿಂದ ಪಾರಾಗಿದ್ದಾರೆ. ಹಾಗೆಯೇ, ಡಿಕೆಶಿ ಸಂಬಂಧಿಸಿದ ಪ್ರಕರಣದಲ್ಲಿ ಬೇರೆ ಯಾರನ್ನೂ ಬಂಧಿಸಬಾರದು ಎಂದು ಸರ್ವೋಚ್ಚ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿತು.

ಇಂದು ನಡೆದ ವಿಚಾರಣೆಯಲ್ಲಿ ನ್ಯಾ| ರೋಹಿಂಗ್ಟನ್ ನಾರಿಮನ್ ನೇತೃತ್ವದ ಸುಪ್ರೀಂ ನ್ಯಾಯಪೀಠವು ಇಡಿ ವಾದವನ್ನು ಪುರಸ್ಕರಿಸದೇ, ದೆಹಲಿ ಹೈಕೋರ್ಟ್ ತೀರ್ಪನ್ನೇ ಎತ್ತಿಹಿಡಿಯಿತು.

ಇದನ್ನೂ ಓದಿ: ಆರ್. ಶಂಕರ್​ಗೂ ಇಲ್ಲ, ಈಶ್ವರಪ್ಪ ಮಗನಿಗೂ ಇಲ್ಲ: ರಾಣೆಬೆನ್ನೂರು ಬಿಜೆಪಿ ಟಿಕೆಟ್ ಅರುಣ್ ಕುಮಾರ್ ಪಾಲು

ಇವತ್ತಿನ ವಿಚಾರಣೆಯಲ್ಲಿ ಇಡಿ ಪರ ತುಷಾರ್ ಮೆಹ್ತಾ ವಾದ ಮಂಡಿಸಿದರು. ಡಿಕೆಶಿ ಪರ ಅಭಿಷೇಕ್ ಮನು ಸಿಂಘ್ವಿ ಮತ್ತು ಮುಕುಲ್ ರೋಹ್ಟಗಿ ವಾದಿಸಿದರು. ಇಡಿ ಅರ್ಜಿ ವಜಾಗೊಂಡ ನಂತರವೂ ಸಿಬಿಐ ಪರ ವಕೀಲರು ತಮ್ಮ ವಾದ ಮಂಡನೆಗೆ ಮುಂದಾದಾಗ ಅವರನ್ನು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು. ಮೊದಲು ನಿಮ್ಮ ನಡೆ ಬದಲಿಸಿಕೊಳ್ಳಿ ಎಂದು ಸಿಬಿಐ ಪರ ವಕೀಲರಿಗೆ ನ್ಯಾಯಮೂರ್ತಿಗಳು ಕಿವಿಹಿಂಡಿದರು.

ಹಾಗೆಯೇ, ಕೇಂದ್ರ ಸರ್ಕಾರಕ್ಕೂ ನ್ಯಾಯಪೀಠ ಚಾಟಿ ಬೀಸಿತು. ಚಿದಂಬರಂ ಪ್ರಕರಣವನ್ನು ಉಲ್ಲೇಖಿಸಿ ಡಿಕೆಶಿ ಬಂಧನಕ್ಕೆ ಅವಕಾಶ ಕೊಡುವಂತೆ ಮನವಿ ಮಾಡಿಕೊಂಡ ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮೇಲೆ ನ್ಯಾ| ನಾರಿಮನ್ ಕೋಪಗೊಂಡರು. ಸುಪ್ರೀಂ ಕೋರ್ಟ್​ಗೆ ನಿರ್ದೇಶನ ನೀಡಲು ಬರಬೇಡಿ. ಚಿದಂಬರಮ್ ಪ್ರಕರಣವನ್ನೂ ಡಿಕೆಶಿ ಪ್ರಕರಣವನ್ನೂ ತಾಳೆ ಮಾಡಬೇಡಿ. ಕಟ್ ಅಂಡ್ ಪೇಸ್ ಮಾಡಬೇಡಿ ಎಂದು ಕೇಂದ್ರ ಸರ್ಕಾರದ ಪರ ವಕೀಲರಿಗೆ ಬುದ್ಧಿ ಹೇಳಿದರು.

ಇದನ್ನೂ ಓದಿ: ಅನರ್ಹರನ್ನು ಮಂತ್ರಿ ಮಾಡುತ್ತೇವೆಂದು ಜನರ ಬ್ರೈನ್​ವಾಶ್ ಮಾಡುತ್ತಿದ್ದಾರೆ: ಯಡಿಯೂರಪ್ಪ ವಿರುದ್ಧ ದೇವೇಗೌಡ ಕಿಡಿ

ಸುಪ್ರೀಂ ಕೋರ್ಟ್ ಇವತ್ತು ನೀಡಿದ ತೀರ್ಪಿನಿಂದ ಡಿಕೆಶಿ ನಿರಾಳರಾದಂತಾಗಿದೆ. ಆದರೆ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ತನಿಖೆ ಅಬಾಧಿತವಾಗಿ ಮುಂದುವರಿಯುತ್ತದೆ. ಇಡಿ ಅಧಿಕಾರಿಗಳು ವಿಚಾರಣೆಗೆ ಕರೆದರೆ ಡಿಕೆಶಿ ಹಾಜರಾಗಬೇಕಾಗುತ್ತದೆ. ವಿಚಾರಣೆಗಾಗಿ ಡಿಕೆಶಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲು ಅಥವಾ ಬಂಧಿಸಲು ಇಡಿಗೆ ಸಾಧ್ಯವಾಗುವುದಿಲ್ಲ.ಇದೇ ವೇಳೆ, ಡಿಕೆ ಶಿವಕುಮಾರ್ ಅವರ ಪತ್ನಿ ಉಷಾ ಮತ್ತು ತಾಯಿ ಗೌರಮ್ಮ ಅವರು ತಮ್ಮನ್ನು ದೆಹಲಿ ಬದಲು ಬೆಂಗಳೂರಿನಲ್ಲೇ ಇಡಿ ವಿಚಾರಣೆ ಎದುರಿಸಲು ಅನುವು ಮಾಡಿಕೊಡಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ದೆಹಲಿ ಹೈಕೋರ್ಟ್ ಇವತ್ತು ತೀರ್ಪು ನೀಡಲಿದೆ.

(ವರದಿ: ಧರಣೀಶ್ ಬೂಕನಕೆರೆ)

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.
First published: November 15, 2019, 11:48 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading